AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಳೆಗಾಲದಲ್ಲಿ ಮೊಸರು ಏಕೆ ತಿನ್ನಬಾರದು? ತಜ್ಞರ ಸಲಹೆ ಪಡೆಯಿರಿ

ಮಳೆಗಾಲದಲ್ಲಿ ಮೊಸರು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು. ಈ ಋತುವಿನಲ್ಲಿ ಮೊಸರು ತಿನ್ನುವುದರಿಂದ ಆರೋಗ್ಯದ ಅಪಾಯಗಳೇನು? ಈ ಬಗ್ಗೆ ಆಯುರ್ವೇದ ತಜ್ಞರು ಏನು ಹೇಳುತ್ತಾರೆಂದು ತಿಳಿಯಿರಿ.

Health Tips: ಮಳೆಗಾಲದಲ್ಲಿ ಮೊಸರು ಏಕೆ ತಿನ್ನಬಾರದು? ತಜ್ಞರ ಸಲಹೆ ಪಡೆಯಿರಿ
ಮೊಸರು (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 04, 2023 | 6:40 AM

Share

ಮಳೆಗಾಲದಲ್ಲಿ (monsoon) ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಈ ಸಮಯದಲ್ಲಿ ಹವಾಮಾನದಲ್ಲಿ ಬದಲಾವಣೆಯಾಗುತ್ತದೆ. ಆದರೆ ಅದರ ಜೊತೆಗೆ ಹಲವಾರು ರೋಗಗಳನ್ನೂ ತರುತ್ತದೆ. ಬದಲಾಗುತ್ತಿರುವ ಋತುವಿನಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬೇಕು. ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯಿದೆ. ಈ ಮಳೆಗಾಲದ ಈ ಸಯದಲ್ಲಿ ಕೆಲ ಪದಾರ್ಥಗಳನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿ ಮೊಸರು ಕೂಡ ಒಂದು. ಆಯುರ್ವೇದದ ಪ್ರಕಾರ ಮಳೆಗಾಲದಲ್ಲಿ ಮೊಸರು ತಿನ್ನಬಾರದು ಎಂದು ಹೇಳಲಾಗುತ್ತಿದೆ.

ಮಳೆಗಾಲದಲ್ಲಿ ಮೊಸರು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗಬಹುದು. ಆದರೆ ಈ ಸೀಸನ್​ನಲ್ಲಿ ಮೊಸರು ಯಾಕೆ ತಿನ್ನಬಾರದು ಗೊತ್ತಾ. ಈ ಋತುವಿನಲ್ಲಿ ಮೊಸರು ತಿನ್ನುವುದರಿಂದ ಆರೋಗ್ಯದ ಅಪಾಯಗಳೇನು? ಈ ಬಗ್ಗೆ ಆಯುರ್ವೇದ ತಜ್ಞರು ಏನು ಹೇಳುತ್ತಾರೆಂದು ತಿಳಿಯೋಣ.

ಇದನ್ನೂ ಓದಿ: Monsoon Hacks: ಮಳೆಗಾಲದಲ್ಲಿ ಒದ್ದೆ ಬಟ್ಟೆ ಧರಿಸ್ತೀರಾ? ಈ ಅಪಾಯ ಖಂಡಿತ, ಇಲ್ಲಿದೆ ತಜ್ಞರ ಸಲಹೆ

ದೆಹಲಿ MCD ಯ ಆಯುರ್ವೇದ ಅಧಿಕಾರಿ ಡಾ.ಆರ್.ಪಿ.ಪರಾಶರ್ ಪ್ರಕಾರ, ‘ಈ ಸಮಯದಲ್ಲಿ ಮೊಡವೆಗಳಂತಹ ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದಲ್ಲದೇ ಚರ್ಮದ ಮೇಲೆ ತುರಿಕೆಯ ಸಮಸ್ಯೆಯೂ ಕಾಣಿಸಿಕೊಳ್ಳತ್ತದೆ. ಅದಕ್ಕಾಗಿಯೇ ಈ ಋತುವಿನಲ್ಲಿ ಮೊಸರು ತಿನ್ನುವುದನ್ನು ಒಳ್ಳೆಯದಲ್ಲ. ಜತೆಗೆ ಫಂಗಲ್ ಸೋಂಕಿನ ಸಮಸ್ಯೆಯೂ ಕಾಡಬಹುದು. ಆದ್ದರಿಂದ ಮಳೆಗಾಲದಲ್ಲಿ ಮೊಸರು ತಿನ್ನುವುದು ಉತ್ತಮವಲ್ಲ’ ಎನ್ನುತ್ತಾರೆ.

ಜೀರ್ಣಕ್ರಿಯೆ ಸಮಸ್ಯೆ ಉಂಟಾಗಬಹುದು

ಈ ಋತುವಿನಲ್ಲಿ ಮೊಸರು ತಿನ್ನುವುದರಿಂದ ಚಯಾಪಚಯವು ಹದಗೆಡುತ್ತದೆ. ನೀವು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಬಹುದು. ಈ ಕಾರಣದಿಂದಾಗಿ, ಆಮ್ಲೀಯತೆ ಮತ್ತು ಮಲಬದ್ಧತೆಯ ಸಮಸ್ಯೆಗಳು ಉಂಟಾಗಬಹುದು. ಹೊಟ್ಟೆಯಲ್ಲಿ ಸೋಂಕಿನ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ.  ಮೊಸರು ತಿನ್ನುವುದು ನಿಮ್ಮ ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲಿ ನಿಮ್ಮ ಮನೆಯ ಬಣ್ಣವನ್ನು ರಕ್ಷಿಸಲು ಅಗತ್ಯ ಸಲಹೆಗಳು

ಮಳೆಗಾಲದಲ್ಲಿ ಮೊಸರು ತಿಂದರೆ ಕೆಮ್ಮು, ನೆಗಡಿ ಮತ್ತು ಜ್ವರ ಬರಬಹುದು. ಶ್ವಾಸಕೋಶದ ಸಮಸ್ಯೆಗಳನ್ನು ಹೊಂದಿರುವ ಜನರು ಮೊಸರು ತಿನ್ನುವುದರಿಂದ ಅವರ ಸಮಸ್ಯೆ ಇನ್ನಷ್ಟು ಹೆಚ್ಚಾಗಬಹುದು.

ಮೂಳೆ ಸಮಸ್ಯೆ

ದೆಹಲಿಯಲ್ಲಿರುವ ಆಯುರ್ವೇದಾಚಾರ್ಯ ಡಾ.ಭರತ್ ಭೂಷಣ್ ಅವರ ಪ್ರಕಾರ, ಈ ಋತುವಿನಲ್ಲಿ ಮೊಸರು ತಿನ್ನುವುದರಿಂದ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಮೊಸರು ತಿನ್ನುವುದರಿಂದ ಸಂಧಿವಾತ ಸಮಸ್ಯೆಗಳು ಉಂಟಾಗಬಹುದು ಎಂದಿದ್ದಾರೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ
ಈ ರಾಶಿಯವರು ಅತಿಯಾದ ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ