International Women’s Day: ಮಾ.8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲು ಕಾರಣವೇನು? ಇಲ್ಲಿದೆ ಇತಿಹಾಸ
ಪ್ರತೀ ವರ್ಷ ಮಾರ್ಚ್ 8 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಬಾರಿ 2022ರಲ್ಲಿ ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಹೆಣ್ಣು (Women) ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿ ಆಕೆ. ಅದಕ್ಕೇ ಹೇಳುವುದು ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಂದು. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿದ ಆಕೆಯ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಿಲ್ಲ. ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಪಾತ್ರಗಳನ್ನು ತುಂಬುವ ಆಕೆಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಿದೆ. ಅದುವೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಪ್ರತೀ ವರ್ಷ ಮಾರ್ಚ್ 8 ರಂದು ಮಹಿಳಾ ದಿನಾಚರಣೆ (Women’s Day) ಯನ್ನು ಆಚರಿಸಲಾಗುತ್ತದೆ. ಬಡ, ದುರ್ಬಲ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಿ, ಸುಂದರ ಬದುಕು ರೂಪಿಸುವ ಕಾರ್ಯಕ್ರಮ, ಯೋಜನೆಗಳ ಮೂಲಕ ಪ್ರತೀ ವರ್ಷ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಬಾರಿ 2022ರಲ್ಲಿ ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ (Gender Equality Today for a Sustainable Tomorrow) ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಸರಿಸುಮಾರು 45 ವರ್ಷಗಳಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅದರೆ ಎಂದಾದರೂ ಮಹಿಳಾ ದಿಚಾರಣೆ ಆಚರಣೆಗೆ ಬಂದಿದ್ದು ಹೇಗೆ? ಮಾರ್ಚ್ 9 ರಂದೇ ಯಾಕೆ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾರೆ ಎನ್ನುವುದನ್ನು ಯೋಚಿಸಿದ್ದೀರಾ? ಮಹಿಳಾ ದಿನಾಚರಣೆಗೆ ಒಂದು ಸುದೀರ್ಘ ಇತಿಹಾಸವೇ ಇದೆ. ಏನದು ಅಂತೀರಾ, ಇಲ್ಲಿದೆ ನೋಡಿ ಮಾಹಿತಿ.
ಮಹಿಳಾ ದಿನಾಚರಣೆಯ ಇತಿಹಾಸ:
1975ರಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆ ಮಾರ್ಚ್ 8 ರಂದು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆಗೆ ತಂದಿತು. ಅದರೆ. 1908ರ ಫೆಬ್ರವರಿಯಲ್ಲಿಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು.
1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ದುಡಿಯುವ ಮಹಿಳೆಯರು ಅವರ ಹಕ್ಕಿನ ಪರವಾಗಿ ಧ್ವನಿಯೆತ್ತಿದ್ದರು ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ 1909 ರಲ್ಲಿ ಫೆ.28ರಂದು ಮಹಿಳಾ ದಿನವನ್ನಾಗಿ ಘೋಷಿಸಿತು. 1917 ರಲ್ಲಿ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ ಮುಷ್ಕರ ನಡೆಸಿದ್ದರು. ಅದಾಗಿ ಕೆಲವು ದಿನಗಳ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು. ಈ ವೇಳೆ ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು ರಾಲಿಗಳನ್ನು ನಡೆಸಿದರು. ಇದೇ ಕಾರಣಕ್ಕಾಗಿ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು. ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು. ಇದರಿಂದ ಯುರೋಪ್‌ನಲ್ಲಿ ಮಹಿಳಾ ದಿನಾಚರಣೆ ಒಂದು ಮಹತ್ವದ ದಿನವಾಗಿದೆ.
ಇದನ್ನೂ ಓದಿ:
ವಿದೇಶಗಳಂತೆ ಭಾರತದ ಪುರುಷರಲ್ಲೂ ಹೆಚ್ಚುತ್ತಿದೆ ಪಿತೃತ್ವ ರಜೆ ತೆಗೆದುಕೊಳ್ಳುವ ಕ್ರಮ: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ