ಭಾರತದ ಮೂವರಲ್ಲಿ ಓರ್ವ ಮಹಿಳೆಗಿದೆ ಮೂತ್ರ ಕಂಟ್ರೋಲ್ ಮಾಡಲಾಗದ ಸಮಸ್ಯೆ!

ಮೂರು ಭಾರತೀಯ ಮಹಿಳೆಯರಲ್ಲಿ ಒಬ್ಬರು ತಮ್ಮ ಜೀವನದ ಯಾವುದಾದರೂ ಒಂದು ಸಮಯದಲ್ಲಿ ಮೂತ್ರವನ್ನು ತಡೆಹಿಡಿಯಲಾಗದ ಸಮಸ್ಯೆಯನ್ನು ಅನುಭವಿಸುತ್ತಾರೆ ಎಂದು ವೈದ್ಯರು ಹೇಳುತ್ತಾರೆ. ಮೂತ್ರ ಕಂಟ್ರೋಲ್ ಮಾಡಲಾಗದ ಸಮಸ್ಯೆ ಮೂತ್ರನಾಳದ ಸೋಂಕಿನಿಂದಲೂ ಬರುತ್ತದೆ. ಭಾರತದ ಅಸಂಖ್ಯಾತ ಮಹಿಳೆಯರು ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಈ ರೀತಿಯ ತೊಂದರೆಗೆ ಕಾರಣವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದ ಮೂವರಲ್ಲಿ ಓರ್ವ ಮಹಿಳೆಗಿದೆ ಮೂತ್ರ ಕಂಟ್ರೋಲ್ ಮಾಡಲಾಗದ ಸಮಸ್ಯೆ!
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on:Mar 09, 2024 | 2:26 PM

ಕೆಲವೊಮ್ಮೆ ಎಷ್ಟೇ ನಿಯಂತ್ರಿಸಲು ಪ್ರಯತ್ನಿಸಿದರೂ ಮೂತ್ರವನ್ನು ತಡೆಹಿಡಿಯಲು ಸಾಧ್ಯವಾಗುವುದಿಲ್ಲ. ಹೊರಗೆ ಎಲ್ಲಾದರೂ ಹೀಗಾದಾಗ ಬಟ್ಟೆಯೆಲ್ಲ ಒದ್ದೆಯಾಗಿ ಅವಮಾನಕ್ಕೀಡಾಗಬೇಕಾಗುತ್ತದೆ. ಈ ರೀತಿಯ ಸಮಸ್ಯೆ ಮಹಿಳೆಯರಲ್ಲಿ ಹೆಚ್ಚು. ಭಾರತದ ಮೂರು ಮಹಿಳೆಯರಲ್ಲಿ ಒಬ್ಬರು ಈ ರೀತಿಯ ಸಮಸ್ಯೆಯನ್ನು ಒಮ್ಮೆಯಾದರೂ ಅನುಭವಿಸಿರುತ್ತಾರೆ ಎನ್ನುತ್ತಾರೆ ವೈದ್ಯರು. ಕೆಲವೊಮ್ಮೆ ಈ ಸಮಸ್ಯೆ ತನ್ನಷ್ಟಕ್ಕೆ ತಾನೇ ವಾಸಿಯಾಗುತ್ತದೆ. ಇನ್ನು ಕೆಲವೊಮ್ಮೆ ವೈದ್ಯರ ಚಿಕಿತ್ಸೆಯ ಅಗತ್ಯವಿರುತ್ತದೆ.

ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ನೆಫ್ರಾಲಜಿ ಆ್ಯಂಡ್ ಯುರಾಲಜಿ (AINU)ಯಲ್ಲಿ ಸ್ತ್ರೀ ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಸಾರಿಕಾ ಪಾಂಡ್ಯ ಅವರ ಪ್ರಕಾರ, ಮೂತ್ರದ ಅಸಂಯಮವು ಭಾರತೀಯ ಮಹಿಳೆಯರಲ್ಲಿ ಒಂದು ಪ್ರಚಲಿತ ಸಮಸ್ಯೆಯಾಗಿದೆ. ಸಾಮಾಜಿಕ ನಿಷೇಧಗಳು ಮತ್ತು ಅರಿವಿನ ಕೊರತೆಯಿಂದಾಗಿ ಇದನ್ನು ಬಹುತೇಕ ಜನರು ಹೇಳಿಕೊಳ್ಳುವುದೇ ಇಲ್ಲ. ಮೂತ್ರದ ಅಸಂಯಮವು ಸಾಮಾಜಿಕ ಮುಜುಗರವನ್ನು ಉಂಟುಮಾಡಬಹುದು, ದೈನಂದಿನ ಚಟುವಟಿಕೆಗಳನ್ನು ನಿರ್ಬಂಧಿಸಬಹುದು ಮತ್ತು ನಿಕಟ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: Pregnancy: ದಪ್ಪ ಇರುವ ಮಹಿಳೆಯರು ಗರ್ಭಿಣಿಯಾಗಲು ಸಾಧ್ಯವಿಲ್ಲವೇ?

ಅನೇಕ ಮಹಿಳೆಯರು ಈ ರೀತಿಯ ಸಮಸ್ಯೆಗೆ ಒಳಗಾದಾಗ ಅವರನ್ನು ಮನೆಯಲ್ಲಿ ಹೊರಗೆ ಇಡಲಾಗುತ್ತದೆ. ಈ ಕಾರಣದಿಂದಾಗಿ ಅವರು ಮಾನಸಿಕ ಯಾತನೆ ಅನುಭವಿಸುತ್ತಾರೆ. ಆದರೆ, ಇದಕ್ಕೆ ಪರಿಣಾಮಕಾರಿ ಚಿಕಿತ್ಸೆಗಳು ಲಭ್ಯವಿವೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಸಮಸ್ಯೆಯನ್ನು ಮುಚ್ಚಿಟ್ಟುಕೊಂಡು ಮಹಿಳೆ ಕೊರಗುವುದು ಕೂಡ ಸರಿಯಲ್ಲ.

ಕಾಮಿನೇನಿ ಆಸ್ಪತ್ರೆಯ ಮಧುಮೇಹ ತಜ್ಞರಾದ ಡಾ. ಬಾನುಪ್ರಿಯಾ, ಮೂತ್ರದ ಅಸಂಯಮವನ್ನು ಎಲ್ಲರೂ ಗಂಭೀರ ಸಮಸ್ಯೆಯಾಗಿ ಪರಿಗಣಿಸುವುದಿಲ್ಲ. ಆದರೆ, ಅದು ಆ ಸಮಸ್ಯೆಗೊಳಗಾದವರ ಮೇಲೆ ಆಳವಾದ ದೈಹಿಕ ಮತ್ತು ಭಾವನಾತ್ಮಕ ಗಾಯಗಳನ್ನು ಉಂಟುಮಾಡುತ್ತದೆ. ಇದು ವೈದ್ಯಕೀಯ ಸಮಸ್ಯೆಯಾಗಿದ್ದು, ಇದಕ್ಕೆ ಗಮನ ಮತ್ತು ಚಿಕಿತ್ಸೆಯ ಅಗತ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ: Menstrual Health: ಮುಟ್ಟಾದಾಗ ಮಹಿಳೆಯರು ಈ 5 ವಿಷಯಗಳನ್ನು ಮಿಸ್ ಮಾಡಬೇಡಿ

ಇತ್ತೀಚಿನ ಅಧ್ಯಯನಗಳು ಭಾರತದಲ್ಲಿ 50 ದಶಲಕ್ಷಕ್ಕೂ ಹೆಚ್ಚು ಮಹಿಳೆಯರು ಮೂತ್ರದ ಅಸಂಯಮದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿವೆ. ಹೆಚ್ಚಿನವರು ಈ ವಿಷಯ ಗೊತ್ತಾದರೆ ಸಾಮಾಜಿಕ ಕಳಂಕ ಉಂಟಾಗುತ್ತದೆ ಎಂದು ಸುಮ್ಮನಾಗಿಬಿಡುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿ, ಮಹಿಳೆಯರು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Sat, 9 March 24

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್