Pregnancy: ದಪ್ಪ ಇರುವ ಮಹಿಳೆಯರು ಗರ್ಭಿಣಿಯಾಗಲು ಸಾಧ್ಯವಿಲ್ಲವೇ?

ಜಡ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಮಾನಸಿಕ ಒತ್ತಡ ಮುಂತಾದ ಕಾರಣಗಳಿಂದ ಇತ್ತೀಚೆಗೆ ಮಹಿಳೆಯರಿಗೆ ಸುಲಭವಾಗಿ ಗರ್ಭ ಧರಿಸಲು ಸಾಧ್ಯವಾಗದಂತಾಗಿದೆ. ಗರ್ಭ ಧರಿಸಲು ಪ್ಲಾನ್ ಮಾಡುವ ಮುನ್ನ ಮಹಿಳೆಯರು ವೈದ್ಯರ ಬಳಿ ಪೂರ್ತಿ ತಪಾಸಣೆ ಮಾಡಿಸಿಕೊಂಡು, ಗರ್ಭ ಧರಿಸಲು ನಾನಾ ಚಿಕಿತ್ಸೆಗಳ ಮೊರೆಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಮಹಿಳೆಯರ ದೇಹದ ಬೊಜ್ಜು ಕೂಡ ಅವರು ಗರ್ಭಿಣಿಯಾಗುವ ಸಾಧ್ಯತೆ ಮೇಲೆ ಪರಿಣಾಮ ಬೀರುತ್ತದೆಯೇ? ಇಲ್ಲಿದೆ ವಿವರ.

Pregnancy: ದಪ್ಪ ಇರುವ ಮಹಿಳೆಯರು ಗರ್ಭಿಣಿಯಾಗಲು ಸಾಧ್ಯವಿಲ್ಲವೇ?
ಗರ್ಭಿಣಿImage Credit source: iStock
Follow us
|

Updated on: Mar 08, 2024 | 2:58 PM

ತೀರಾ ದಪ್ಪ ಇರುವವರು ಗರ್ಭಿಣಿಯಾಗಲು (Pregnant) ಸಾಧ್ಯವಿಲ್ಲ ಎಂಬ ಅಭಿಪ್ರಾಯ ಹಲವರಲ್ಲಿ ಇರುತ್ತದೆ. ವೈದ್ಯರು ಕೂಡ ಗರ್ಭ ಧರಿಸಲು ಇಚ್ಛಿಸುವವರು ವ್ಯಾಯಾಮ, ಯೋಗದಂತಹ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸೂಚಿಸುತ್ತಾರೆ. ಅಧಿಕ ತೂಕ (Weight Gain) ಮತ್ತು ಬೊಜ್ಜು (Obesity)  ಕೂಡ ನಮ್ಮ ಫರ್ಟಿಲಿಟಿಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಗರ್ಭಾವಸ್ಥೆಯಲ್ಲಿ ತೊಂದರೆಗಳನ್ನು ಉಂಟುಮಾಡುವ ಸಾಧ್ಯತೆ ಇರುತ್ತದೆ ಎಂಬುದು ಸತ್ಯ. ಗರ್ಭಿಣಿಯಾಗಲು ಬಯಸುವ ಮಹಿಳೆಯರು ತಮ್ಮ ತೂಕವನ್ನು ಹೇಗೆ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸ್ಥೂಲಕಾಯತೆಯ ಸಮಸ್ಯೆ ಆತಂಕಕಾರಿ ಮಟ್ಟವನ್ನು ತಲುಪಿದೆ. ಅಧಿಕ ತೂಕ ಅಥವಾ ಬೊಜ್ಜು ಎಂದು ವರ್ಗೀಕರಿಸಲಾದ ಜನರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಪುಣೆಯ ಖಾರಾದಿಯ ಮದರ್‌ಹುಡ್ ಆಸ್ಪತ್ರೆಯ ಸಲಹೆಗಾರ ಪ್ರಸೂತಿ ತಜ್ಞರಾದ ಡಾ. ಸುಶ್ರುತಾ ಮೊಕದಂ ಅವರ ಪ್ರಕಾರ, ಬದಲಾಗುತ್ತಿರುವ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿಯಂತಹ ಅಂಶಗಳು ದೇಶಾದ್ಯಂತ ಸ್ಥೂಲಕಾಯತೆಯ ದರದಲ್ಲಿ ಈ ಏರಿಕೆಗೆ ಕಾರಣವಾಗಿವೆ. ಅಧಿಕ ತೂಕ ಹೊಂದಿರುವ ಮಹಿಳೆಯರು ಸಾಮಾನ್ಯವಾಗಿ ಸಾಕಷ್ಟು ದೈಹಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ಕೀಲು ನೋವು, ಮಧುಮೇಹ ಮತ್ತು ಹೃದ್ರೋಗದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕೂಡ ಹೆಚ್ಚಿಸುತ್ತದೆ.

ಇದನ್ನೂ ಓದಿ: Pregnant Health: ಗರ್ಭಿಣಿಯರು ಕಲ್ಲಂಗಡಿ ಹಣ್ಣು ತಿನ್ನುವುದನ್ನು ಮಿಸ್ ಮಾಡಬೇಡಿ

ಇದರ ಜೊತೆಗೆ, ಸ್ಥೂಲಕಾಯತೆಯು ಮಾನಸಿಕ ಆರೋಗ್ಯದ ಮೇಲೆ ಕೂಡ ಪ್ರಭಾವ ಬೀರುತ್ತದೆ. ದಪ್ಪವಾಗಿದ್ದಾಗ ಬೇರೆಯವರು ನಮ್ಮನ್ನು ನೋಡುವ ರೀತಿ, ತಾರತಮ್ಯವು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಧಿಕ ತೂಕ ಹೊಂದಿರುವ ಅನೇಕ ಮಹಿಳೆಯರು ಫಲವತ್ತತೆಯ ಸಮಸ್ಯೆಗಳನ್ನು ಎದುರಿಸುವುದು ಮಾತ್ರವಲ್ಲದೆ ಖಿನ್ನತೆಯಂತಹ ಆರೋಗ್ಯ ಸಮಸ್ಯೆಗಳನ್ನು ಕೂಡ ಎದುರಿಸುತ್ತಾರೆ. ಹೀಗಾಗಿ, ಬೊಜ್ಜು ಮತ್ತು ಬಂಜೆತನದ ನಡುವೆ ಸಂಬಂಧವಿದೆ.

ಅಧಿಕ ತೂಕವು ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮಹಿಳೆಯರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಸ್ಥೂಲಕಾಯತೆಯು ಪುರುಷರು ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗುತ್ತದೆ. ಏಕೆಂದರೆ ಹೆಚ್ಚುವರಿ ದೇಹದ ಕೊಬ್ಬು ಹಾರ್ಮೋನ್ ಮಟ್ಟವನ್ನು ಅಡ್ಡಿಪಡಿಸುತ್ತದೆ ಮತ್ತು ಸಂತಾನೋತ್ಪತ್ತಿ ಕಾರ್ಯಗಳಿಗೆ ತೊಂದರೆ ಮಾಡುತ್ತದೆ. ಮಹಿಳೆಯರಲ್ಲಿ ಸ್ಥೂಲಕಾಯತೆಯು ಅನಿಯಮಿತ ಋತುಚಕ್ರ, ಅಂಡೋತ್ಪತ್ತಿಯ ಸಮಸ್ಯೆಗಳು ಮತ್ತು ಕಡಿಮೆ ಫಲವತ್ತತೆ ದರಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: 50 ವರ್ಷವಾದ ಬಳಿಕ ಐವಿಎಫ್ ಮೂಲಕ ಗರ್ಭ ಧರಿಸುವುದು ಸುರಕ್ಷಿತವೇ?

ಸ್ಥೂಲಕಾಯದ ಮಹಿಳೆಯರು ಗರ್ಭಾವಸ್ಥೆಯಲ್ಲಿ ಗರ್ಭಪಾತ ಮತ್ತು ತೊಡಕುಗಳ ಹೆಚ್ಚಿನ ಅಪಾಯವನ್ನು ಹೊಂದುವ ಸಾಧ್ಯತೆಯೂ ಇರುತ್ತದೆ. ಪುರುಷರಿಗೆ, ಸ್ಥೂಲಕಾಯತೆಯು ಕಡಿಮೆ ವೀರ್ಯಾಣುವಿಗೆ ಕಾರಣವಾಗಬಹುದು. ಇದು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಅಧಿಕ ತೂಕವು ಫಲವತ್ತತೆಯ ಚಿಕಿತ್ಸೆಗಳಾದ IVF ಯಶಸ್ಸಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹಾಗೇ, ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ತೊಡಕುಗಳ ಅಪಾಯವನ್ನು ಹೆಚ್ಚಿಸುತ್ತದೆ.

ಗರ್ಭಿಣಿಯಾಗಲು ಬಯಸುವ ಸ್ಥೂಲಕಾಯದ ಮಹಿಳೆಯರು ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುವ ಪೌಷ್ಟಿಕಾಂಶದ ಆಹಾರವನ್ನು ತಿನ್ನುವುದು ಫಲವತ್ತತೆಯನ್ನು ಸುಧಾರಿಸಲು ಮತ್ತು ಗರ್ಭಧಾರಣೆಯ ಸಾಧ್ಯತೆಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸಕ್ಕರೆ ಮತ್ತು ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಾಗಿರುವ, ಹೆಚ್ಚಿನ ಸಂಸ್ಕರಿತ ಆಹಾರಗಳ ಸೇವನೆಯನ್ನು ಕಡಿಮೆ ಮಾಡುವುದು ಉತ್ತಮ. ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳಂತಹ ಸಂಪೂರ್ಣ ಆಹಾರಗಳನ್ನು ಸೇವಿಸುವುದು ಒಳ್ಳೆಯದು.

ಇದರ ಜೊತೆಗೆ, ನಿಯಮಿತ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಇದು ಮಹಿಳೆಯರ ಒಟ್ಟಾರೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ನಿಮ್ಮ ಸಂತಾನೋತ್ಪತ್ತಿ ವ್ಯವಸ್ಥೆಯನ್ನು ಬೆಂಬಲಿಸಲು ನಿಮ್ಮ ದಿನಚರಿಯಲ್ಲಿ ಕಾರ್ಡಿಯೋ, ಶಕ್ತಿ ತರಬೇತಿ ಮತ್ತು ನಮ್ಯತೆ ವ್ಯಾಯಾಮಗಳನ್ನು ಮಾಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?