Women’s Day 2023: ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಈ ಟಿಪ್ಸ್​​​ ಫಾಲೋ ಮಾಡಿ

ಆರೋಗ್ಯಕರ ಜೀವನಶೈಲಿಗಾಗಿ ಒತ್ತಡ ರಹಿತ ಜೀವನ ನಡೆಸುವುದು ಅತ್ಯಗತ್ಯ. ಆದ್ದರಿಂದ, ಆರೋಗ್ಯಕರ ಜೀವನಶೈಲಿಯನ್ನು ನಡೆಸಲು, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಮಹಿಳೆಯರು ಈ ಕೆಳಗಿನ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ.

Women’s Day 2023: ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಈ ಟಿಪ್ಸ್​​​ ಫಾಲೋ ಮಾಡಿ
ಮಹಿಳೆಯರಲ್ಲಿ ಹೃದಯಾಘಾತದ ಅಪಾಯ
Follow us
ಅಕ್ಷತಾ ವರ್ಕಾಡಿ
|

Updated on: Mar 04, 2023 | 7:30 AM

ಜಗತ್ತಿನಾದ್ಯಂತ ಮಹಿಳೆಯರಲ್ಲಿ ಹೃದಯಾಘಾತ ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಅನಾರೋಗ್ಯಕರ ಜೀವನಶೈಲಿ ಸೇರಿದಂತೆ ಹಲವು ಅಂಶಗಳು ಇಂತಹ ಕಾಯಿಲೆಗಳು ಹೆಚ್ಚಾಗಲು ಕಾರಣವಾಗಬಹುದು. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ (ಸಿಡಿಸಿ) ಮತ್ತು ಪ್ರಿವೆನ್ಶನ್‌ನ ಅಂಕಿಅಂಶಗಳ ಪ್ರಕಾರ, 44 ಪ್ರತಿಶತದಷ್ಟು ಮಹಿಳೆಯರು ಹೃದ್ರೋಗದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯರಲ್ಲಿ ಹೃದ್ರೋಗದ ಅಪಾಯವು ಹೆಚ್ಚಾಗಲು ಹಲವಾರು ಕಾರಣಗಳಿವೆ. ಇದಲ್ಲದೆ, ಆರಂಭಿಕ ಋತುಬಂಧ, ಮಧುಮೇಹ, ಅವಧಿಪೂರ್ವ ಹೆರಿಗೆ ಮತ್ತು ಪಿಸಿಓಎಸ್ ಸಹ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. ಜೊತೆಗೆ ಸ್ಥೂಲಕಾಯತೆ, ಧೂಮಪಾನ, ಅತಿಯಾದ ಒತ್ತಡ, ದೈಹಿಕ ನಿಷ್ಕ್ರಿಯತೆ, ಅತಿಯಾದ ಮದ್ಯಪಾನ, ಅನಾರೋಗ್ಯಕರ ಆಹಾರ ಸೇವನೆ, ಅಧಿಕ ರಕ್ತದ ಸಕ್ಕರೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಂತಹ ಜೀವನಶೈಲಿ ಸಮಸ್ಯೆಗಳು ಮಹಿಳೆಯ ಹೃದಯದ ಮೇಲೆ ಪರಿಣಾಮ ಬೀರುತ್ತವೆ ಎಂದು ಸಂಶೋಧನೆ ತಿಳಿಸಿದೆ.

ಆರೋಗ್ಯಕರ ಜೀವನಶೈಲಿಗಾಗಿ ಒತ್ತಡ ರಹಿತ ಜೀವನ ನಡೆಸುವುದು ಅತ್ಯಗತ್ಯ. ಆದ್ದರಿಂದ, ಆರೋಗ್ಯಕರ ಜೀವನಶೈಲಿಯನ್ನು ನಡೆಸಲು, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಮಹಿಳೆಯರು ಈ ಕೆಳಗಿನ ಕ್ರಮಗಳನ್ನು ತೆಗೆದುಕೊಳ್ಳಬೇಕು:

ದಿನವೂ ವ್ಯಾಯಾಮ ಮಾಡಿ:

ಸಾಕಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವನ್ನು ಹೊಂದಿರುತ್ತಾರೆ. ಯಾಕೆಂದರೆ ಅವರಿಗೆ ಮನೆ, ಕುಟುಂಬ ಹೀಗೆ ಮುಂತಾದ ಸಾಕಷ್ಟು ನಿರ್ವಹಣೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಆರೋಗ್ಯವನ್ನು ಕಡೆಗಣಿಸುತ್ತಾರೆ. ಆದ್ದರಿಂದ ಪ್ರತೀ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ದಿನದಲ್ಲಿ ಒಂದಷ್ಟು ಹೊತ್ತು ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಹಾಗೂ ಧ್ಯೇಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಿ:

ಫೈಬರ್ ಭರಿತ ಆಹಾರವು ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ಒಳಗೊಂಡಿರುತ್ತದೆ, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಸಮತೋಲಿತ ಪೌಷ್ಟಿಕ ಆಹಾರವು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಒತ್ತಡವನ್ನು ಕಡಿಮೆ ಮಾಡಿ:

ಅತಿಯಾದ ಒತ್ತಡ ಮತ್ತು ಅಧಿಕ ರಕ್ತದೊತ್ತಡವು ಹೃದ್ರೋಗದ ಅಪಾಯವನ್ನು ಹೆಚ್ಚಿಸಬಹುದು. ಆದ್ದರಿಂದ, ಯೋಗ ಮತ್ತು ಧ್ಯಾನದಂತಹ ಒತ್ತಡ ಕಡಿಮೆ ಮಾಡುವ ಕೆಲವು ವ್ಯಾಯಾಮಗಳನ್ನು ಮಾಡುವುದು ಮುಖ್ಯವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ