World Anti-Child Labor Day 2024: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ; ಮಕ್ಕಳನ್ನು ಸ್ಕೂಲಿಗೆ ಕಳುಹಿಸಿ, ಕೂಲಿಗಲ್ಲ

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹಾಗೂ ಈ ಅನಿಷ್ಟ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್‌ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Anti-Child Labor Day 2024: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ; ಮಕ್ಕಳನ್ನು ಸ್ಕೂಲಿಗೆ ಕಳುಹಿಸಿ, ಕೂಲಿಗಲ್ಲ
World Anti-Child Labor Day 2024
Follow us
| Updated By: ಅಕ್ಷತಾ ವರ್ಕಾಡಿ

Updated on: Jun 11, 2024 | 6:35 PM

ದೇಶದಲ್ಲಿ ಬಾಲಕಾರ್ಮಿಕರನ್ನು ನಿಷೇಧಿಸಲಾಗಿದ್ದು, ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ಬಾಲ ಕಾರ್ಮಿಕರೆನ್ನಲಾಗಿದೆ. ಆದರೆ ಇಂದಿಗೂ ಬಡತನವೆನ್ನುವುದು ಅನೇಕ ಮಕ್ಕಳನ್ನು ದುಡಿಯುವಂತೆ ಮಾಡುತ್ತಿದೆ. ಬಡತನ, ಪೋಷಕರ ನಿರ್ಲಕ್ಷ್ಯದ ಕಾರಣ ವಿಶ್ವದಾದ್ಯಂತ ಕೋಟ್ಯಾಂತರ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಹೀಗಾಗಿ ಓದುವ ವಯಸ್ಸಿನಲ್ಲಿ ದುಡಿಯಲು ಹೋಗಿ ಸುಂದರವಾದ ಬಾಲ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಇತಿಹಾಸ:

ಬಾಲ್ಯ ಕಾರ್ಮಿಕತನವನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ’ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ’ 2002ರಿಂದ ಪ್ರತಿವರ್ಷ ಜೂನ್ 12ನ್ನು ‘ಬಾಲಕಾರ್ಮಿಕ ವಿರೋಧಿ ದಿನ’ವನ್ನಾಗಿ ಆಚರಿಸಿತು. ಅಂದಿನಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನದಂದು ಸರ್ಕಾರಗಳಿಗೆ, ಜನರಿಗೆ ಬಾಲಕಾರ್ಮಿಕತನದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆಹಾರ ಕ್ರಮ ಹೇಗಿರಬೇಕು? ಇಲ್ಲಿದೆ ಸಿಂಪಲ್ ಟಿಪ್ಸ್

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಮಹತ್ವ ಹಾಗೂ ಆಚರಣೆ ಹೇಗೆ?

ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ. ಅದಲ್ಲದೇ, ಈ ಬಾಲ ಕಾರ್ಮಿಕರು ಪೌಷ್ಟಿಕ ಆಹಾರ ಕೊರತೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ದಿನವು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ, ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಮಕ್ಕಳಿಂದ ದುಡಿಸಿಕೊಳ್ಳುವುದರಿಂದ ಆಗುವ ದುಷ್ಪರಿಣಾಮದ ಬಗ್ಗೆ ಸರ್ಕಾರಿ, ಸರ್ಕಾರೇತ್ತರ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ಜಾಥಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್