World Anti-Child Labor Day 2023: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಇತಿಹಾಸ, ಮಹತ್ವ ಇಲ್ಲಿದೆ

ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಜೊತೆಗೆ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್‌ 12 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

World Anti-Child Labor Day 2023: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಇತಿಹಾಸ, ಮಹತ್ವ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 10, 2023 | 6:21 PM

ಬಾಲ್ಯವೆಂದರೆ ಬದುಕಿನ ಸುಂದರ ಕ್ಷಣಗಳನ್ನು ಅನುಭವಿಸುವ ವಯಸ್ಸು. ಜಗತ್ತು ಏನೆಂಬುದನ್ನು ಅರ್ಥ ಮಾಡಿಕೊಳ್ಳಲಾಗದ ಆ ದಿನಗಳು ಎಲ್ಲರಿಗೂ ಸುಂದರವೇ. ಆದರೆ ಮಕ್ಕಳನ್ನು ದೇವರಂತೆ ಪೂಜಿಸುವ ವಯಸ್ಸಿನಲ್ಲಿ ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುವುದನ್ನು ನೆನಸಿಕೊಂಡರೆ ಹೇಗಿರಬಹುದು ಅಲ್ಲವೇ?. ಮನೆಯಲ್ಲಿ ಆಡಿಕೊಂಡು ಶಿಕ್ಷಣ ಆರಂಭ ಮಾಡುವ ಬದಲು ಗಾರ್ಮೆಂಟ್ಸ್‌ಗಳಲ್ಲಿ, ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿಗಳಲ್ಲಿ, ಗ್ಯಾರೇಜ್‌, ಹೊಟೇಲ್‌, ಕಾರ್ಖಾನೆಗಳಲ್ಲಿ, ಬೇಕರಿ, ದೊಡ್ಡ ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಸ್ಥಳಗಳಲ್ಲಿ ದೈಹಿಕವಾಗಿಯೂ ಹಾಗೂ ಮಾನಸಿಕವಾಗಿಯೂ ಕಷ್ಟವಾಗುವಂತ ಕೆಲಸಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇದೆಲ್ಲದನ್ನು ತಡೆಯುವ ಉದ್ದೇಶದಿಂದ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಜೊತೆಗೆ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್‌ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಇತಿಹಾಸ:

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ( ಐಎಲ್ಒ ) ಜಾಗತಿಕವಾಗಿ ಬಾಲ ಕಾರ್ಮಿಕರ ರಕ್ಷಣೆಗಾಗಿ ಮತ್ತು ಅದನ್ನು ತೊಡೆದು ಹಾಕಲು ಅಗತ್ಯವಾದ ಕ್ರಮ ಮತ್ತು ಪ್ರಯತ್ನಗಳ ಬಗ್ಗೆ ಗಮನ ಹರಿಸಲು 2002ರಲ್ಲಿ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪ್ರಾರಂಭಿಸಿತು. ಬಳಿಕ ಪ್ರತಿ ವರ್ಷ, ಜೂನ್ 12ರಂದು, ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಸರ್ಕಾರಗಳು, ಉದ್ಯೋಗದಾತರು ಮತ್ತು ಕಾರ್ಮಿಕ ಸಂಸ್ಥೆಗಳು, ನಾಗರಿಕ ಸಮಾಜ, ಮಕ್ಕಳ ಕಾರ್ಮಿಕರ ದುಃಸ್ಥಿತಿಯನ್ನು ಎತ್ತಿ ಹಿಡಿಯಲು ಮತ್ತು ಅವರಿಗೆ ಸಹಾಯ ಮಾಡಲು ಏನು ಮಾಡಬಹುದು ಎಂಬುದರ ಬಗ್ಗೆ ವಿಶ್ವದಾದ್ಯಂತದ ಲಕ್ಷಾಂತರ ಜನರು ಅನೇಕ ರೀತಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಐಎಲ್‌ಒನ ಮಾಹಿತಿಯ ಪ್ರಕಾರ, ವಿಶ್ವದಾದ್ಯಂತ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರಿಗೆ ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲ ಕಾರ್ಮಿಕರ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ವೇಶ್ಯಾವಾಟಿಕೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: World Doll Day 2023: ವಿಶ್ವ ಗೊಂಬೆ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ!

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಮಹತ್ವ:

ಮಕ್ಕಳು ಶಾಲೆಗೆ ಹಾಜರಾಗುವ ಅವಕಾಶವನ್ನು ಕಸಿದು ಕೊಳ್ಳುವ ಮೂಲಕ ಅವರ ಶಾಲಾ ಶಿಕ್ಷಣದಲ್ಲಿ ಹಸ್ತಕ್ಷೇಪ ಮಾಡಿ ಶಾಲೆಯನ್ನು ಅಕಾಲಿಕವಾಗಿ ಬಿಡಲು ಅವರನ್ನು ನಿರ್ಬಂಧಿಸುವುದು ಇವೆಲ್ಲವೂ ಮಕ್ಕಳ ಮೇಲೆ ಪರಿಣಾಮ ಬೀರುತ್ತವೆ. ಇವುಗಳನ್ನು ತಡೆಯುವದರ ಜೊತೆಗೆ ಬಾಲ ಕಾರ್ಮಿಕರಲ್ಲಿ ಕಂಡು ಬರುವ ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್