World Art Day 2025: ಇಂದು ವಿಶ್ವ ಕಲಾ ದಿನ; ಕಲೆಗೆ ಮತ್ತು ಕಲಾವಿದರಿಗೆ ಗೌರವ ಸಲ್ಲಿಸಲು ಮರೆಯದಿರೋಣ
ಚಿತ್ರಕಲೆ ಭಾವನೆಯನ್ನು ವ್ಯಕ್ತಪಡಿಸುವ ಒಂದು ಮಾಧ್ಯಮವೂ ಹೌದು. ಇದು ಸಾವಿರಾರು ಕಥೆಗಳನ್ನು, ಆಲೋಚನೆಗಳನ್ನು, ಭಾವನೆಗಳನ್ನು ವ್ಯಕ್ತಪಡಿಸುವ ಮಾಧ್ಯಮವಾಗಿದ್ದು, ಈ ಚಿತ್ರಕಲೆಯ ಪರಂಪರೆ ಪುರಾತನ ಕಾಲದಿಂದಲೂ ಅಸ್ತಿತ್ವದಲ್ಲಿದೆ. ಹೀಗೆ ಈ ಕಲೆಯ ಇತಿಹಾಸವನ್ನು ತಿಳಿಯುವುದರ ಜೊತೆಗೆ ಸ್ಮರಿಸಲು ಮತ್ತು ಕಲಾವಿದರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಏಪ್ರಿಲ್ 15 ರಂದು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಈ ಕಲೆ (Art) ಎನ್ನುವಂತಹದ್ದು ಎಲ್ಲರಿಗೂ ಒಲಿಯುವಂತದ್ದಲ್ಲ. ಇದಕ್ಕೆ ಕಠಿಣ ಪರಿಶ್ರಮ, ಶ್ರದ್ಧೆ, ಏಕಾಗ್ರತೆ, ಸತತ ಪ್ರಯತ್ನ ಬೇಕೇ ಬೇಕು. ಹೀಗೆ ಕಲೆಯನ್ನು ಒಲಿಸಿಕೊಂಡು ಈ ಕ್ಷೇತ್ರದಲ್ಲಿ ಸಾಧನೆ (achievement) ಮಾಡಿದವರು ಹಲವರಿದ್ದಾರೆ. ಈ ಚಿತ್ರಕಲೆ ಒಂದು ಕೇವಲ ಕಲೆಯಾಗಿರದೆ ಅನೇಕ ಸಂಸ್ಕೃತಿ, ಸಮುದಾಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಅಷ್ಟೇ ಅಲ್ಲದೆ ಹಿಂದಿನ ಕಾಲದಿಂದಲೂ ಅಸ್ತಿತ್ವದಲ್ಲಿರುವ ಈ ಕಲೆ (art) ಆಲೋಚನೆಗಳನ್ನು, ಭಾವನೆಗಳನ್ನು (feeling) ವ್ಯಕ್ತಪಡಿಸುವ ಮಾಧ್ಯಮವೂ ಹೌದು. ಇಂತಹ ಅದ್ಭುತ ಕಲೆಯ ಮಹತ್ವವನ್ನು ಸ್ಮರಿಸಲು, ಚಿತ್ರಕಲೆ ಮಾತ್ರವಲ್ಲದೆ ಶಿಲ್ಪಕಲೆ, ಛಾಯಾಗ್ರಹಣ, ಸಂಗೀತ ನೃತ್ಯ, ರಂಗಭೂಮಿ, ಬರಹ ಕಲೆಯನ್ನು ಗೌರವಿಸಲು, ಕಲೆಗೆ ಮತ್ತು ಕಲಾವಿದರಿಗೆ (artist) ಗೌರವ ಸಲ್ಲಿಸಲು ಪ್ರತಿವರ್ಷ ಏಪ್ರಿಲ್ 15 ರಂದು ಪ್ರಪಂಚದಾದ್ಯಂತ ವಿಶ್ವ ಕಲಾ ದಿನವನ್ನು (World Art Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ.
ವಿಶ್ವ ಕಲಾ ದಿನ 2024: ಇತಿಹಾಸ
ಅಂತರಾಷ್ಟ್ರೀಯ ಕಲಾ ಸಂಘದ ಸಾಮಾನ್ಯ ಸಭೆಯಲ್ಲಿ ವಿಶ್ವ ಕಲಾ ದಿನವನ್ನು ಆಚರಿಸುವುದಾಗಿ ಅಧಿಕೃತವಾಗಿ ಘೋಷಿಸಲಾಯಿತು. ಮೊದಲ ಬಾರಿಗೆ 2012 ರಲ್ಲಿ ವಿಶ್ವ ಕಲಾದಿನವನ್ನು ಆಚರಿಸಲಾಯಿತು. ವಿವಿಧ ಕಲಾ ವರ್ಗಗಳಿಂದ ಸುಮಾರು 150 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಸಂಗೀತ, ನೃತ್ಯ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ವಿಭಾಗಗಳ ಕಲೆಗಾರರ ಭಾವನೆಗಳಿಗೆ ಗೌರವ ಸಲ್ಲಿಸಲಾಯಿತು ಮತ್ತು ಅವರ ಕೆಲಸಕ್ಕೆ ಪ್ರೋತ್ಸಾಹ ನೀಡಲಾಯಿತು.
ಏಪ್ರಿಲ್ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತದೆ?
ಏಪ್ರಿಲ್ 15, ಇಟಲಿಯ ಶ್ರೇಷ್ಠ ವರ್ಣಚಿತ್ರಕಾರ ಲಿಯೊನಾರ್ಡೊ ಡಾ ವಿನ್ಸಿಯವರ ಜನ್ಮದಿನ. ಲಿಯೊನಾರ್ಡೊ ಡಾ ವಿನ್ಸಿ ಒಬ್ಬ ಮಹಾನ್ ಇಟಾಲಿಯನ್ ವರ್ಣಚಿತ್ರಕಾರ, ಶಿಲ್ಪಿ, ವಾಸ್ತುಶಿಲ್ಪಿ, ಸಂಗೀತಗಾರ, ನುರಿತ ಮೆಕ್ಯಾನಿಕ್, ಎಂಜಿನಿಯರ್ ಮತ್ತು ವಿಜ್ಞಾನಿ. ಅವರು ತಮ್ಮ ಕಲೆಯಲ್ಲಿನ ಪ್ರಾವೀಣ್ಯತೆಯಿಂದಲೇ ಪ್ರಪಂಚದಾದ್ಯಂತ ಖ್ಯಾತಿಯನ್ನು ಪಡೆದವರು. ಇಂತಹ ಮಹಾನ್ ಕಲಾವಿದನ ಜನ್ಮ ದಿನದ ಸವಿ ನೆನಪಿಗಾಗಿ 2012 ರಲ್ಲಿ ವಿಶ್ವ ಕಲಾ ದಿನವನ್ನು ಆಚರಣೆಯನ್ನು ಪ್ರಾರಂಭಿಸಲಾಯಿತು. ವಿಶ್ವ ಕಲಾ ದಿನದ ಅಧಿಕೃತ ಆಚರಣೆಯನ್ನು 2015 ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಸಲಾಯಿತು. ನಂತರ 2019 ರಲ್ಲಿ ಯುನೆಸ್ಕೋ ಅಧಿಕೃತವಾಗಿ ವಿಶ್ವ ಕಲಾದಿನವನ್ನು ಆಚರಿಸಲು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಏಪ್ರಿಲ್ 15 ರಂದು ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಇದನ್ನೂ ಓದಿ: ಪುರುಷರು ಸಹ ಅತ್ಯಾಚಾರಕ್ಕೊಳಗಾಗುತ್ತಾರಾ? ಕಾನೂನು ಈ ಬಗ್ಗೆ ಏನು ಹೇಳುತ್ತೆ?
ವಿಶ್ವ ಕಲಾ ದಿನದ ಮಹತ್ವ:
ಕಲೆ ಮಾನವ ಸಂಸ್ಕೃತಿಯ ಅತ್ಯಗತ್ಯ ಭಾಗವಾಗಿದೆ ಮತ್ತು ಹಿಂದಿನಿಂದಲೂ ಭಾವನೆಗಳನ್ನು ವ್ಯಕ್ತಪಡಿಸಲು, ಸಂವಹನ ನಡೆಸಲು ಸುತ್ತಲಿನ ಪ್ರಪಂಚದ ಸೌಂದರ್ಯವನ್ನು ಸೆರೆ ಹಿಡಿಯಲು ಚಿತ್ರಕಲೆಯನ್ನೇ ಬಳಸಲಾಗುತ್ತಿತ್ತು. ಈ ಕಲೆ ಮಾತ್ರವಲ್ಲದೆ ಕಲಾವಿದರ ಕೊಡುಗೆಗಳು ಕೂಡಾ ನಮ್ಮ ಸಂಸ್ಕೃತಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಕಲಾವಿದರು ಹಾಗೂ ಕಲೆಗೆ ಗೌರವವನ್ನು ಸಲ್ಲಿಸಬೇಕು ಎಂಬ ಉದ್ದೇಶದಿಂದ ವಿಶ್ವ ಕಲಾ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಕಲಾ ದಿನವನ್ನು ಹೇಗೆ ಆಚರಿಸಲಾಗುತ್ತದೆ?
ವಿಶ್ವ ಕಲಾ ದಿನದ ಸಂದರ್ಭದಲ್ಲಿ ಪ್ರಪಂಚದಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮೇಳನಗಳು, ಪ್ರದರ್ಶನಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ. ಮಕ್ಕಳು ಮತ್ತು ಯುವಕರನ್ನು ಕಲೆಯಲ್ಲಿ ತೊಡಗಿಸಿಕೊಳ್ಳಲು, ಕಲೆಯ ಮೇಲಿನ ಅವರ ಆಸಕ್ತಿಯನ್ನು ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅಲ್ಲದೆ ಪ್ರಪಂಚದಾದ್ಯಂತ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು, ಉಪನ್ಯಾಸಗಳು ಮತ್ತು ಸಮ್ಮೇಳನಗಳು, ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮಗಳು ಜನರಿಗೆ ಕಲೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮತ್ತು ಕಲಾವಿದರೊಂದಿಗೆ ಸಂಪರ್ಕ ಸಾಧಿಸಲು ಅವಕಾಶವನ್ನು ಒದಗಿಸುತ್ತವೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ