World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ

| Updated By: ಅಕ್ಷಯ್​ ಪಲ್ಲಮಜಲು​​

Updated on: May 07, 2024 | 10:20 AM

ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯುವ ಜನಾಂಗವನ್ನು ಪ್ರೋತ್ಸಾಹಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮೇ 7 ರಂದು ವಿಶ್ವ ಅಥ್ಲೆಟಿಕ್ಸ್ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ವಿಶ್ವ ಅಥ್ಲೆಟಿಕ್ಸ್ ದಿನವು ಆರಂಭವಾದದ್ದು ಹೇಗೆ ಎನ್ನುವುದರ ಬಗೆಗಿನ ಮಾಹಿತಿಯು ಇಲ್ಲಿದೆ.

World Athletics Day 2024 : ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಬಿಡಿ, ಇದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ
Follow us on

ಇಂದಿನ ಜನರಿಗೆ ಒತ್ತಡವು ಜೀವನದ ಭಾಗವಾಗಿದೆ. ಅನೇಕರು ಉದ್ಯೋಗ ಒತ್ತಡ ಹಾಗೂ ಕೌಟುಂಬಿಕ ಒತ್ತಡಭರಿತವಾದ ಜೀವನವನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹೀಗಾಗಿ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಸಲುವಾಗಿ ವಿಶ್ವ ಅಥ್ಲೆಟಿಕ್ಸ್ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಅಥ್ಲೆಟಿಕ್ಸ್ ದಿನದ ಇತಿಹಾಸ

ವಿಶ್ವ ಅಥ್ಲೆಟಿಕ್ಸ್ ದಿನವನ್ನು ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್ (IAAF) ಅಧ್ಯಕ್ಷ ಪ್ರಿಮೊ ನೆಬ್ಬಿಯೊಲೊರವರು ಮೊದಲ ಬಾರಿಗೆ 1996 ರಲ್ಲಿ ಆಚರಿಸಲಾಯಿತು. ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್ (IAAF) ಅನ್ನು 1912 ರಲ್ಲಿ ವಿವಿಧ ಕ್ರೀಡಾಕೂಟಗಳು ಮತ್ತು ಅಥ್ಲೆಟಿಕ್ಸ್ ಆಯೋಜಿಸಲು ಸ್ಥಾಪಿಸಲಾಯಿತು. 2001 ರಲ್ಲಿ, ಫೆಡರೇಶನ್ ಹೆಸರನ್ನು ಇಂಟರ್ನ್ಯಾಷನಲ್ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್ಸ್ ಎಂದು ಬದಲಾಯಿಸಿತು.

ಇದನ್ನೂ ಓದಿ: ಅಸ್ತಮಾ ಕಾಯಿಲೆಯ ನಿರ್ಲಕ್ಷ್ಯ ಜೀವಕ್ಕೆ ಅಪಾಯ ಖಂಡಿತ

ವಿಶ್ವ ಅಥ್ಲೆಟಿಕ್ಸ್ ದಿನದ ಮಹತ್ವ

ಮಕ್ಕಳಿಗೆ ಕ್ರೀಡೆಯ ಬಗ್ಗೆ ತಿಳುವಳಿಕೆ ನೀಡಲು ಹಾಗೂ ಯುವಕರು ಸದೃಢ ಮತ್ತು ಆರೋಗ್ಯಕರ ಜೀವನ ನಡೆಸಲು ಪ್ರೋತ್ಸಾಹಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ವಿಶ್ವ ಅಥ್ಲೆಟಿಕ್ಸ್ ದಿನದಂದು, ವಿಶ್ವ ಅಥ್ಲೆಟಿಕ್ಸ್ ಫೆಡರೇಶನ್ ಮತ್ತು ಐಎಎ ಎಫ್ ಅನೇಕ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ