AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Athletics Day 2026: ವಿಶ್ವ ಅಥ್ಲೆಟಿಕ್ಸ್‌ ದಿನವನ್ನು ಯಾವ ಕಾರಣಕ್ಕಾಗಿ ಆಚರಿಸಲಾಗುತ್ತದೆ ಗೊತ್ತಾ?

ವಿಶ್ವ ಅಥ್ಲೆಟಿಕ್ಸ್ ದಿನವನ್ನು ಪ್ರತಿ ವರ್ಷ ಮೇ 7 ರಂದು ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ಆಚರಿಸುವ ಉದ್ದೇಶ ಮಕ್ಕಳು ಮತ್ತು ಯುವಕರಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವುದು ಜೊತೆಗೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಭಾಗವಹಿಸುವವರನ್ನು ಪ್ರೋತ್ಸಾಹಿಸುವುದು ಇದರ ಗುರಿಯಾಗಿದೆ. ಈ ದಿನದ ಆಚರಣೆಗೆ ಹೇಗೆ ಪ್ರಾರಂಭವಾಯಿತು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

World Athletics Day 2026: ವಿಶ್ವ ಅಥ್ಲೆಟಿಕ್ಸ್‌ ದಿನವನ್ನು ಯಾವ ಕಾರಣಕ್ಕಾಗಿ ಆಚರಿಸಲಾಗುತ್ತದೆ ಗೊತ್ತಾ?
ವಿಶ್ವ ಅಥ್ಲೆಟಿಕ್ಸ್ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: May 06, 2026 | 9:18 PM

Share

ಇಂದಿನ ಈ ಡಿಜಿಟಲ್‌ ಯುಗದಲ್ಲಿ ಜನ ದೈಹಿಕ ಚಟುವಟಿಕೆಯಲ್ಲಿ (Physical activity) ತೊಡಗಿಕೊಳ್ಳುವುದು ಕಡಿಮೆಯಾಗಿದೆ. ಅದರಲ್ಲೂ ಯುವಕರು ಮತ್ತು ಮಕ್ಕಳು ಕ್ರೀಡೆ ಇತ್ಯಾದಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಮೊಬೈಲ್‌ ನೋಡುತ್ತಾ ಕಾಲಹರಣ ಮಾಡುತ್ತಾರೆ. ಇದು ಆರೋಗ್ಯಕ್ಕೂ ಹಾಳು. ಅದೇ ಕ್ರೀಡೆಗಳು ಜನರು ಹೆಚ್ಚು ಸಕ್ರಿಯರಾಗಲು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಹೆಚ್ಚು ಚಲನಶೀಲರನ್ನಾಗಿರುವಂತೆ ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ. ಇದು ವಿವಿಧ ಕಾಯಿಲೆಗಳನ್ನು ನಿವಾರಿಸಲು ಮತ್ತು ಹೆಚ್ಚು ಸದೃಢ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಹೊಂದಲು ನಮಗೆ ಸಹಾಯ ಮಾಡುತ್ತದೆ. ಹಾಗಾಗಿ ಯುವಕರು ಮತ್ತು ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು, ಫಿಟ್ನೆಸ್‌ ಬಗ್ಗೆ ಜಾಗೃತಿಯನ್ನು ಮೂಡಿಸಲು, ಅಥ್ಲೆಟಿಕ್ಸ್‌ ಆಟಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ಮೇ 7 ರಂದು ವಿಶ್ವ ಅಥ್ಲೆಟಿಕ್ಸ್‌  ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಅಥ್ಲೆಟಿಕ್ಸ್‌ ದಿನದ ಇತಿಹಾಸವೇನು?

ಪ್ರತಿ ವರ್ಷ ಮೇ 7 ರಂದು ‘ವಿಶ್ವ ಅಥ್ಲೆಟಿಕ್ಸ್ ದಿನ’ವನ್ನು ಆಚರಿಸಲಾಗುತ್ತದೆ. ಮಕ್ಕಳು ಮತ್ತು ಯುವಕರಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಥ್ಲೆಟಿಕ್ಸ್ ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಇಂಟರ್ನ್ಯಾಷನಲ್ ಅಮೆಚೂರ್ ಅಥ್ಲೆಟಿಕ್ ಫೆಡರೇಶನ್’ (IAAF) ಈ ದಿನದ ಆಚರಣೆಯನ್ನು ಪ್ರಾರಂಭಿಸಿತು. ಈ ದಿನವನ್ನು ಮೊದಲ ಬಾರಿಗೆ 1996 ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಪ್ರತಿವರ್ಷ ಐಎಎಎಫ್‌ ಸಂಸ್ಥೆ ಈ ವಿಶೇಷ ದಿನವನ್ನು ಆಚರಿಸುತ್ತಾ ಬರುತ್ತಿದೆ.

ಇದನ್ನೂ ಓದಿ:  ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ?

ವಿಶ್ವ ಅಥ್ಲೆಟಿಕ್ಸ್‌ ದಿನದ ಮಹತ್ವವೇನು?

  • ಯುವಕರಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವುದು, ಶಾಲಾ-ಕಾಲೇಜುಗಳಲ್ಲಿ ಅಥ್ಲೆಟಿಕ್ಸ್ ಅನ್ನು ಪ್ರಾಥಮಿಕ ಕ್ರೀಡೆಯಾಗಿ ಉತ್ತೇಸುವುದು, ಕ್ರೀಡೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವುದು ಈ ದಿನದ ಉದ್ದೇಶವಾಗಿದೆ.
  • ಕ್ರೀಡೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಕ್ರೀಡೆಯ ಮಹತ್ವದ ಬಗ್ಗೆ ಯುವಕರಿಗೆ ಶಿಕ್ಷಣ ನೀಡುವುದು ವಿಶ್ವ ಅಥ್ಲೆಟಿಕ್ಸ್ ದಿನದ ಉದ್ದೇಶವಾಗಿದೆ.
  • ಈ ದಿನದಂದು, ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಶನ್‌ಗಳ ಸಂಘವು ದೈಹಿಕ ಚಟುವಟಿಕೆಯ ಮಹತ್ವವನ್ನು ಉತ್ತೇಜಿಸಲು ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us