World Bicycle Day 2023: ವಿಶ್ವ ಬೈಸಿಕಲ್ ದಿನ: ಸೈಕಲ್​​ ಸವಾರಿಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ಬೈಸಿಕಲ್ ಸವಾರಿ ಮಾಡುವುದು ನಿಮ್ಮ ಹೃದಯದ ಆರೋಗ್ಯ ಮತ್ತು ಸ್ನಾಯುವಿನ ಬಲವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ. ಜೊತೆಗೆ ಖಿನ್ನತೆ, ಆತಂಕ, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.

World Bicycle Day 2023: ವಿಶ್ವ ಬೈಸಿಕಲ್ ದಿನ: ಸೈಕಲ್​​ ಸವಾರಿಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ
World Bicycle Day 2023
Follow us
ಅಕ್ಷತಾ ವರ್ಕಾಡಿ
|

Updated on: Jun 03, 2023 | 6:30 AM

ಪ್ರಪಂಚದಾದ್ಯಂತ ಸೈಕಲ್‌ನ ಮಹತ್ವವನ್ನು ಗುರುತಿಸಲು ಪ್ರತಿ ವರ್ಷ ಜೂನ್ 3ರಂದು ವಿಶ್ವ ಸೈಕಲ್ ದಿನ (World Bicycle Day)ವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನಿಮ್ಮ ಒಟ್ಟಾರೆ ಯೋಗಕ್ಷೇಮಕ್ಕಾಗಿ ನಿಮ್ಮವರೊಂದಿಗೆ ಸೈಕಲ್​​ ಸವಾರಿ ಮಾಡಿ. ಬೈಸಿಕಲ್ ಸವಾರಿಯು ನಿಮಗೆ ಉಲ್ಲಾಸವನ್ನು ನೀಡುವುದು ಮಾತ್ರವಲ್ಲದೇ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ತೂಕವನ್ನು ಕಳೆದುಕೊಳ್ಳಲು ಬಯಸುವವರಿಗೆ ಸೈಕ್ಲಿಂಗ್‌ನಿಂದಾಗಿ ಸಾಕಷ್ಟು ತೂಕಗಳನ್ನು ಕಳೆದುಕೊಳ್ಳಬಹುದು. ಬೈಸಿಕಲ್ ಸವಾರಿ ಮಾಡುವುದು ನಿಮ್ಮ ಹೃದಯದ ಆರೋಗ್ಯ ಮತ್ತು ಸ್ನಾಯುವಿನ ಬಲವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ. ಜೊತೆಗೆ ಖಿನ್ನತೆ, ಆತಂಕ, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಸೈಕ್ಲಿಂಗ್ ದೇಹದ ಕೆಳಗಿನ ಕೀಲುಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ವಿಶ್ವ ಸೈಕಲ್ ದಿನದ ಥೀಮ್:

ವಿಶ್ವಸಂಸ್ಥೆಯು ಪ್ರಪಂಚದ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ನಿರ್ದಿಷ್ಟ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲು ಹೆಸರುವಾಸಿಯಾಗಿದೆ. ವಿಶ್ವ ಸೈಕಲ್ ದಿನವು ಸೈಕಲ್ ಬಳಸುವ ಪ್ರಯೋಜನಗಳ ಬಗ್ಗೆ ಜಾಗೃತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ವಿಶ್ವಸಂಸ್ಥೆಯ ಪ್ರಕಾರ, ಸೈಕಲ್ ಸುಸ್ಥಿರ ಸಾರಿಗೆ ಸಾಧನವಾಗಿದೆ. ಇದು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟವನ್ನು ಉತ್ತೇಜಿಸುವ ಮೂಲಕ ಅಸಮಾನತೆಗಳನ್ನು ಕಡಿಮೆ ಮಾಡುತ್ತದೆ.

ಸೈಕ್ಲಿಂಗ್‌ನಿಂದಾಗುವ ಪ್ರಯೋಜನಗಳು:

1. ಸ್ನಾಯುವಿನ ಬಲಪಡಿಸುತ್ತದೆ:

ನೀವು ಪ್ರತೀ ಕೆಲವು ಮೀಟರ್​​ಗಳಷ್ಟು ಸೈಕಲ್​​ ತುಳಿಯುವುದರಿಂದ ನಿಮ್ಮ ಸ್ನಾಯುಗಳು ಬಲಗೊಳ್ಳುತ್ತವೆ. ಆದ್ದರಿಂದ ಸ್ನಾಯುಗಳ ಆರೋಗ್ಯವನ್ನು ಕಾಪಾಡಲು ಪ್ರತೀ ದಿನ ಒಂದಷ್ಟು ದೂರ ಸೈಕಲ್​​ ಸವಾರಿ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.

2. ಹೃದಯದ ಆರೋಗ್ಯ:

ಸೈಕಲ್​​ ಸವಾರಿಯೂ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಪ್ರತೀ ದಿನ ಕೆಲವೊಂದಿಷ್ಟು ಹೊತ್ತು ಸೈಕ್ಲಿಂಗ್​​​ ಮಾಡುವುದರಿಂದ ನಿಮ್ಮ ಹೃದಯ ಬಡಿತ ಹೆಚ್ಚಾಗುತ್ತದೆ ಮತ್ತು ಹೃದಯದಲ್ಲಿ ರಕ್ತ ಪರಿಚಲನೆಯು ಸರಾಗಗೊಳಿಸುತ್ತದೆ.

ಇದನ್ನೂ ಓದಿ: ಕಬೀರದಾಸರ ಜೀವನ ಹೇಗಿತ್ತು? ಬದುಕಿಗೆ ಇವರ ಹಾದಿ ಉತ್ತಮ

3. ಮಾನಸಿಕ ಆರೋಗ್ಯ:

ಸೈಕ್ಲಿಂಗ್ ಖಿನ್ನತೆ, ಆತಂಕ, ಒತ್ತಡವನ್ನು ತಡೆಯುತ್ತದೆ ಮತ್ತು ಸಂತೋಷದ ಹಾರ್ಮೋನ್ ಬಿಡುಗಡೆ ಮಾಡುವ ಮೂಲಕ ಮಾನಸಿಕವಾಗಿ ಆರೋಗ್ಯಗೊಳಿಸುತ್ತದೆ. ಜೊತೆಗೆ ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ, ಕೆಲವೊಂದಿಷ್ಟು ಹೊತ್ತು ಸೈಕಲ್​​ ಸವಾರಿ ಮಾಡುವುದರಿಂದ ಸೈಕಲ್​​ ಸವಾರಿ ನಿದ್ರಾಹೀನತೆ ಸಮಸ್ಯೆಯನ್ನು ಹೋಗಲಾಡಿಸಬಹುದು.

4. ಕಾಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ:

ಸೈಕ್ಲಿಂಗ್ ನಿಮ್ಮ ಕೆಳಗಿನ ದೇಹದ ಒಟ್ಟಾರೆ ಕಾರ್ಯವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಕೀಲುಗಳನ್ನು ಹೆಚ್ಚು ಒತ್ತಡವಿಲ್ಲದೆ ನಿಮ್ಮ ಕಾಲಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಸೈಕ್ಲಿಂಗ್ ನಿಮ್ಮ ಕೆಳಗಿನ ದೇಹದ ಕೀಲುಗಳನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಅಸ್ಥಿಸಂಧಿವಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

5. ಮಧುಮೇಹಕ್ಕೆ ಸೈಕ್ಲಿಂಗ್‌ನ ಪ್ರಯೋಜನಗಳು:

ಸೈಕ್ಲಿಂಗ್ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ, ದೇಹವು ಇನ್ಸುಲಿನ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಲು ಅನುವು ಮಾಡಿಕೊಡುತ್ತದೆ. ಇದು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸಲು, ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್