AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Biofuel Day 2026: ಜೈವಿಕ ಇಂಧನ ಬಳಕೆಯ ಪ್ರಯೋಜನಗಳೇನು?

ಕಲ್ಲಿದ್ದಲು, ತೈಲ, ಅನಿಲದಂತಹ ಪಳೆಯುಳಿಕೆ ಇಂಧನಗಳು ವೇಗವಾಗಿ ಕ್ಷೀಣಿಸುತ್ತಿದೆ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್‌ಗಳ ಬಳಕೆ ಇಂಗಾಲದ ಡೈಆಕ್ಸೈಡ್ ಸೇರಿದಂತೆ ಹಲವಾರು ಮಾಲಿನ್ಯಕಾರಕಗಳು ಹೊರ ಸೂಸಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪರಿಸರಸ್ನೇಹಿಯಾದ ಜೈವಿಕ ಇಂಧನದ ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷ ಆಗಸ್ಟ್‌ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಜೈವಿಕ ಇಂಧನ ಬಳಕೆ ಎಷ್ಟು ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳೋಣ.

World Biofuel Day 2026: ಜೈವಿಕ ಇಂಧನ ಬಳಕೆಯ ಪ್ರಯೋಜನಗಳೇನು?
ಜೈವಿಕ ಇಂಧನ ದಿನImage Credit source: magnific
ಮಾಲಾಶ್ರೀ ಅಂಚನ್​
|

Updated on: Aug 10, 2026 | 11:09 AM

Share

ಮುಖ್ಯಾಂಶಗಳು

  • ಜೈವಿಕ ಇಂಧನದ ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷ ಆಗಸ್ಟ್‌ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ
  • ಪಳೆಯುಳಿಕೆ ಇಂಧನಗಳಿಗೆ ಹೋಲಿಸಿದರೆ ಜೈವಿಕ ಇಂಧನಗಳು ಪರಿಸರಕ್ಕೆ ಅಷ್ಟೇನೂ ಹಾನಿಕಾರಕವಲ್ಲ
  • ಜೈವಿಕ ಇಂಧನ ಶಕ್ತಿಯು ಸುಸ್ಥಿರತೆಯನ್ನು ಉತ್ತೇಜಿಸುತ್ತದೆ ಮತ್ತು ಹವಾಮಾನ ಬದಲಾವಣೆಯನ್ನು ತಗ್ಗಿಸುತ್ತದೆ

ಬಹಳ ಹಿಂದಿನಿಂದಲೂ ಕಲ್ಲಿದ್ದಲು, ತೈಲದಂತಹ ಪಳೆಯುಳಿಕೆ ಇಂಧನಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಇದರಿಂದಾಗಿ ಇಂಧನ ಮೂಲಗಳು ಕ್ಷೀಣಿಸುತ್ತಿರುವುದಲ್ಲದೆ, ಈ ಇಂಧನಗಳ ಅತಿಯಾದ ಬಳಕೆ ಪರಿಸರಕ್ಕೂ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತಿವೆ. ಹೌದು ಇವುಗಳ ಅನಿಯಂತ್ರಿತ ಬಳಕೆ ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ, ವಾಯು ಮಾಲಿನ್ಯ, ಹಸಿರು ಮನೆ ಅನಿಲದಂತಹ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಹಾಗಾಗಿ ಪಳೆಯುಳಿಕೆ ಇಂಧನಗಳ ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡಿ, ಪರಿಸರಸ್ನೇಹಿಯಾದ ಜೈವಿಕ ಇಂಧನದ (biofuels) ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷ ಆಗಸ್ಟ್‌ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಜೈವಿಕ ಇಂಧನ ಬಳಕೆ ಎಷ್ಟು ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳೋಣ.

ವಿಶ್ವ ಜೈವಿಕ ಇಂಧನ ದಿನದ ಇತಿಹಾಸವೇನು?

ಜೈವಿಕ ಇಂಧನಗಳ ಮಹತ್ವ ಮತ್ತು ಸುಸ್ಥಿರ ಅಭಿವೃದ್ಧಿಗೆ ಅವುಗಳ ಕೊಡುಗೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ.   ಡೀಸೆಲ್ ಎಂಜಿನ್‌ನ ಸಂಶೋಧಕ ಸರ್ ರುಡಾಲ್ಫ್ ಡೀಸೆಲ್ ಅವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ. ಆಗಸ್ಟ್ 8, 1893 ರಂದು, ಸರ್ ಡೀಸೆಲ್ ಮೊದಲ ಬಾರಿಗೆ ಕಡಲೆಕಾಯಿ ಎಣ್ಣೆಯನ್ನು ಯಾಂತ್ರಿಕ ಎಂಜಿನ್‌ಗೆ ಶಕ್ತಿ ತುಂಬಲು ಯಶಸ್ವಿಯಾಗಿ ಬಳಸಿದರು. ಇದು ಭವಿಷ್ಯದಲ್ಲಿ ಸಸ್ಯಜನ್ಯ ಎಣ್ಣೆ ಪಳೆಯುಳಿಕೆ ಇಂಧನಗಳನ್ನು ಬದಲಾಯಿಸಬಹುದೆಂಬ ಕಲ್ಪನೆಯನ್ನು ಹುಟ್ಟುಹಾಕಿತು. ಈ ಸಾಧನೆಯನ್ನು ಆಚರಿಸಲು ಮತ್ತು ಜೈವಿಕ ಇಂಧನದ ಬಳಕೆಯ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಲು, ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ. 2015 ರಿಂದ ಭಾರತೀಯ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಭಾರತದಲ್ಲೂ ಇದನ್ನು ಆಚರಿಸುತ್ತಿದೆ.

ವಿಶ್ವ ಜೈವಿಕ ಇಂಧನ ದಿನದ ಮಹತ್ವವೇನು?

  • ಕಚ್ಚಾ ತೈಲದ ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸ್ವಚ್ಛ ಪರಿಸರವನ್ನು ಖಚಿತಪಡಿಸಿಕೊಳ್ಳಲು ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ.
  • ಪಳೆಯುಳಿಕೆ ಇಂಧನಗಳು ಗಾಳಿ ಮತ್ತು ಪರಿಸರಕ್ಕೆ ತುಂಬಾ ಹಾನಿಕಾರಕವಾದ ಇಂಗಾಲದ ಹೊರಸೂಸುವಿಕೆ ಉಂಟಾಗುತ್ತದೆ. ಅದೇ ಜೈವಿಕ ಇಂಧನಗಳು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಈ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತದೆ.
  • ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಜೈವಿಕ ಇಂಧನಗಳ ಬಳಕೆಯನ್ನು ಉತ್ತೇಜಿಸುವುದು ಮತ್ತು ಈ ಕ್ಷೇತ್ರದಲ್ಲಿ ಸಂಶೋಧನ ಅಭಿವೃದ್ಧಿಯನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ.

ಜೈವಿಕ ಇಂಧನ ಎಂದರೇನು?

ಸಸ್ಯಗಳು, ಬೆಳೆಗಳು ಮತ್ತು ಪ್ರಾಣಿಗಳ ತ್ಯಾಜ್ಯದಂತಹ ಜೈವಿಕ ಮೂಲಗಳಿಂದ ಪಡೆದ ಜೈವಿಕ ಇಂಧನವು ಸಾಂಪ್ರದಾಯಿಕ ಪಳೆಯುಳಿಕೆ ಇಂಧನಗಳಿಗೆ ಉತ್ತಮ ಪರ್ಯಾಯವಾಗಿದೆ. ಸಸ್ಯಗಳು, ಕೃಷಿ ತ್ಯಾಜ್ಯ, ಬೆಳೆಗಳು, ಪಾಚಿ ಇತ್ಯಾದಿಗಳಂತಹ ಜೀವರಾಶಿಯಿಂದ ಪಡೆದ ಯಾವುದೇ ಇಂಧನವನ್ನು ಜೈವಿಕ ಇಂಧನ ಎಂದು ಕರೆಯಲಾಗುತ್ತದೆ.

ಜೈವಿಕ ಇಂಧನ ಬಳಕೆಯ ಪ್ರಯೋಜನಗಳೇನು?

  • ಪಳೆಯುಳಿಕೆ ಇಂಧನಗಳಿಗೆ ಹೋಲಿಸಿದರೆ ಜೈವಿಕ ಇಂಧನಗಳು ಪರಿಸರಕ್ಕೆ ಅಷ್ಟೇನೂ ಹಾನಿಕಾರಕವಲ್ಲ.
  • ನವೀಕರಿಸಬಹುದಾದ ಈ ಜೈವಿಕ ಇಂಧನ ಶಕ್ತಿಯು ಸುಸ್ಥಿರತೆಯನ್ನು ಉತ್ತೇಜಿಸುತ್ತದೆ ಮತ್ತು ಹವಾಮಾನ ಬದಲಾವಣೆಯನ್ನು ತಗ್ಗಿಸುತ್ತದೆ.
  • ಹೆಚ್ಚುವರಿಯಾಗಿ, ಜೈವಿಕ ಇಂಧನಗಳು ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತವೆ.
  • ಜೈವಿಕ ಇಂಧನದ ದೊಡ್ಡ ಪ್ರಯೋಜನವೆಂದರೆ ಅದು ಮಾಲಿನ್ಯವನ್ನು ನಿಯಂತ್ರಿಸುತ್ತದೆ.
  • ಇದರ ಮತ್ತೊಂದು ಪ್ರಮುಖ ಪ್ರಯೋಜನವೆಂದರೆ ಕೊಯ್ಲು ಮಾಡಿದ ನಂತರ ಬೆಳೆಯಿಂದ ವ್ಯರ್ಥವಾಗುವ ಭಾಗವನ್ನು ಜೈವಿಕ ಇಂಧನ ತಯಾರಿಸಲು ಬಳಸಬಹುದು.
  • ಬೆಳೆಯ ತ್ಯಾಜ್ಯ ಭಾಗವನ್ನು ಬಳಸುವುದರಿಂದ ಮಾಲಿನ್ಯ ಕಡಿಮೆಯಾಗುತ್ತದೆ ಮತ್ತು ರೈತರ ಆದಾಯವೂ ಹೆಚ್ಚಾಗುತ್ತದೆ.

ಇದನ್ನೂ ಓದಿ: ನೀವು ತಿಳಿದಿರದ ಸಿಂಹಗಳ ಕುರಿತಾದ ಆಸಕ್ತಿದಾಯಕ ಸಂಗತಿಗಳು

ಜೈವಿಕ ಇಂಧನಗಳ ಬಳಕೆಯತ್ತ ಸಾಗುತ್ತಿದೆ ಜಗತ್ತು:

ಮಾಹಿತಿಯ ಪ್ರಕಾರ, ಅಮೆರಿಕ ವಿಶ್ವದ ಅತಿದೊಡ್ಡ ಜೈವಿಕ ಇಂಧನ ಉತ್ಪಾದಕ ರಾಷ್ಟ್ರವಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಜೈವಿಕ ಇಂಧನ ಉತ್ಪಾದನೆಯ ಅತಿದೊಡ್ಡ ಮೂಲವೆಂದರೆ ಜೋಳ. ಜೋಳದಿಂದ ಎಥೆನಾಲ್ ಉತ್ಪಾದಿಸಲಾಗುತ್ತದೆ. ಈ ಎಥೆನಾಲ್ ಅನ್ನು ಗ್ಯಾಸೋಲಿನ್‌ನೊಂದಿಗೆ ಬೆರೆಸಲಾಗುತ್ತದೆ, ಇದು ಗ್ಯಾಸೋಲಿನ್ ಬಳಕೆಯನ್ನು ಕಡಿಮೆ ಮಾಡುತ್ತದೆ. ಯುನೈಟೆಡ್ ಸ್ಟೇಟ್ಸ್ ನಂತರ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಜೈವಿಕ ಇಂಧನ ಉತ್ಪಾದನೆಯಲ್ಲಿ ಇಂಡೋನೇಷ್ಯಾ ಮೂರನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಚೀನಾ ನಾಲ್ಕನೇ ಸ್ಥಾನದಲ್ಲಿದೆ.

ಭಾರತವು ವಿಶ್ವದ ಐದನೇ ಪ್ರಮುಖ ಜೈವಿಕ ಇಂಧನ ಉತ್ಪಾದಕ ರಾಷ್ಟ್ರವಾಗಿದೆ. ಭಾರತದ ಪ್ರಾಥಮಿಕ ಗಮನವು ಎಥೆನಾಲ್ ಮಿಶ್ರಣದಲ್ಲಿದೆ. ಪೆಟ್ರೋಲ್‌ನೊಂದಿಗೆ ಎಥೆನಾಲ್ ಮಿಶ್ರಣ ಮಾಡುವ ಮೂಲಕ, ಭಾರತವು ಪೆಟ್ರೋಲಿಯಂ ಆಮದುಗಳನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಿದೆ. ಕಬ್ಬಿನ ಜೊತೆಗೆ, ಜೋಳ, ಮುರಿದ ಅಕ್ಕಿ ಮತ್ತು ಇತರ ಅನುಮತಿಸಲಾದ ಕೃಷಿ ಮೂಲಗಳನ್ನು ಎಥೆನಾಲ್ ಉತ್ಪಾದನೆಗೆ ಬಳಸಲಾಗುತ್ತಿದೆ. ಭಾರತಕ್ಕೆ ಜೈವಿಕ ಇಂಧನಗಳ ಪ್ರಾಮುಖ್ಯತೆಯು ಕೇವಲ ಇಂಧನ ಶಕ್ತಿಯ ಸಂರಕ್ಷಣೆಗೆ ಸೀಮಿತವಾಗಿಲ್ಲ. ಇದು ರೈತರ ಆದಾಯ ಹೆಚ್ಚಿಸಲೂ ಸಹಾಯ ಮಾಡುತ್ತಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿವೇಶನಕ್ಕೂ ಮುನ್ನ ಖಾತೆ ಹಂಚಿಕೆಯಾಗದಿದ್ರೆ ಏನ್ಮಾಡ್ತಾರಂತೆ ಡಿಕೆಶಿ!
ಅಧಿವೇಶನಕ್ಕೂ ಮುನ್ನ ಖಾತೆ ಹಂಚಿಕೆಯಾಗದಿದ್ರೆ ಏನ್ಮಾಡ್ತಾರಂತೆ ಡಿಕೆಶಿ!
ರಸ್ತೆ ಗುಂಡಿಯಲ್ಲಿ 'ಕೆರೆ-ದಂಡೆ' ಆಟ
ರಸ್ತೆ ಗುಂಡಿಯಲ್ಲಿ 'ಕೆರೆ-ದಂಡೆ' ಆಟ
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಗಲ್ಲ ಅಂದ್ರೆ ಹೋಗ್ತಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ತಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ