World Blood Donor Day 2024: ಶ್ರೇಷ್ಠ ದಾನಗಳಲ್ಲಿ ರಕ್ತದಾನವು ಒಂದು, ಯುವಕರಲ್ಲಿ ರಕ್ತದಾನ ಜಾಗೃತಿ ಮೂಡಿಸುವುದು ಅಗತ್ಯ

ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನ ದಿನವನ್ನು ಆಚರಿಸಲಾಗುತ್ತದೆ. ಇದು ರಕ್ತದಾನದ ಅಗತ್ಯತೆಗಾಗಿ ಜಾಗೃತಿ ಮೂಡಿಸುವುದರ ಜೊತೆಗೆ ಅಸಂಖ್ಯಾತ ಜೀವಗಳನ್ನು ಉಳಿಸಲು ಸಹಾಯ ಮಾಡಿದ ದಾನಿಗಳಿಗೆ ಧನ್ಯವಾದ ಹೇಳುವ ದಿನವಾಗಿದೆ. ರಕ್ತದಾನವು ಒಂದು ಉದಾತ್ತ ಕಾರ್ಯವಾಗಿದ್ದು ರಕ್ತ ನಷ್ಟ, ರಕ್ತಹೀನತೆ ಮತ್ತು ಕ್ಯಾನ್ಸರ್ ನಂತಹ ವಿವಿಧ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಈ ವಿಶೇಷ ದಿನವನ್ನು ಆಚರಿಸುವಾಗ ನಾವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ.

World Blood Donor Day 2024: ಶ್ರೇಷ್ಠ ದಾನಗಳಲ್ಲಿ ರಕ್ತದಾನವು ಒಂದು, ಯುವಕರಲ್ಲಿ ರಕ್ತದಾನ ಜಾಗೃತಿ ಮೂಡಿಸುವುದು ಅಗತ್ಯ
Edited By:

Updated on: Jun 13, 2024 | 5:43 PM

ದಾನಗಳಲ್ಲಿ ರಕ್ತದಾನವನ್ನು ಸಹ ಬಹಳ ಶ್ರೇಷ್ಠ ದಾನವೆಂದು ಕರೆಯಲಾಗುತ್ತಾದೆ. ಹಾಗಾಗಿಯೇ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನ ದಿನ(World Blood Donor Day) ವನ್ನು ಆಚರಿಸಲಾಗುತ್ತದೆ. ಇದು ರಕ್ತದಾನದ ಅಗತ್ಯತೆಗಾಗಿ ಜಾಗೃತಿ ಮೂಡಿಸುವುದರ ಜೊತೆಗೆ ಅಸಂಖ್ಯಾತ ಜೀವಗಳನ್ನು ಉಳಿಸಲು ಸಹಾಯ ಮಾಡಿದ ದಾನಿಗಳಿಗೆ ಧನ್ಯವಾದ ಹೇಳುವ ದಿನವಾಗಿದೆ. ರಕ್ತದಾನವು ಒಂದು ಉದಾತ್ತ ಕಾರ್ಯವಾಗಿದ್ದು ರಕ್ತ ನಷ್ಟ, ರಕ್ತಹೀನತೆ ಮತ್ತು ಕ್ಯಾನ್ಸರ್ ನಂತಹ ವಿವಿಧ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಈ ವಿಶೇಷ ದಿನವನ್ನು ಆಚರಿಸುವಾಗ ನಾವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ.

ಇತಿಹಾಸ:

1940ರಲ್ಲಿ, ರಿಚರ್ಡ್ ಲೋವರ್ ಎಂಬ ವಿಜ್ಞಾನಿ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಎರಡು ನಾಯಿಗಳ ನಡುವೆ ರಕ್ತ ವರ್ಗಾವಣೆಯನ್ನು ಮಾಡಿದರು. ಬಳಿಕ ಈ ಪ್ರಗತಿಯು ಆಧುನಿಕ ರಕ್ತ ವರ್ಗಾವಣೆ ಮಾಡಲು ಅವಕಾಶ ಮಾಡಿಕೊಟ್ಟಿತು ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ವರದಾನವಾಯಿತು. ಬಳಿಕ 2005ರಲ್ಲಿ, ವಿಶ್ವ ಆರೋಗ್ಯ ಅಸೆಂಬ್ಲಿ ಪ್ರತಿ ವರ್ಷ ಜೂನ್ 14 ಅನ್ನು ವಿಶ್ವ ರಕ್ತದಾನಿಗಳ ದಿನವೆಂದು ಘೋಷಿಸಿತು. ಅಂದಿನಿಂದ ಈ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಲಕ್ಷ್ಮಣ ಫಲ ಕ್ಯಾನ್ಸರ್ ರೋಗಕ್ಕೆ ರಾಮಬಾಣ

ರಕ್ತದಾನದ ಮಹತ್ವ

ಪ್ರತಿ ವರ್ಷ ರಕ್ತ ದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ರಕ್ತ ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದು ಈ ದಿನದ ಉದ್ದೇಶವಾಗಿದೆ. ಇದರ ಜೊತೆ ಅಗತ್ಯವಿರುವ ರೋಗಿಗಳಿಗೆ ರಕ್ತ ಲಭಿಸುವಂತೆ ನೋಡಿಕೊಳ್ಳುವುದಾಗಿದೆ. ರಕ್ತ ದಾನಿಗಳಿಂದ ಪ್ರತಿ ವರ್ಷ ಕೋಟ್ಯಾಂತರ ಜನರು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ ರಕ್ತ ನೀಡುವುದರ ಪರಿಣಾಮವು ಜೀವ ಉಳಿಸುವುದಕ್ಕಿಂತ ಮೀಗಿಲಾಗಿದೆ. ಇದು ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ ಮತ್ತು ತುರ್ತು ಪರಿಸ್ಥಿತಿಗಳಿಗೆ ಒಳಗಾಗುವ ರೋಗಿಗಳಿಗೆ ಅಗತ್ಯವಾದ ಬೆಂಬಲವನ್ನು ಒದಗಿಸುವುದಲ್ಲದೆ, ದಾನಿಗಳಿಗೆ ಗಮನಾರ್ಹ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ರೋಗಿ ರಕ್ತ ಕೊಡುವ ಮೊದಲು ಕಠಿಣ ಪರೀಕ್ಷೆಗೆ ಒಳಗಾಗುವುದರಿಂದ, ದಾನಿಯ ಆರೋಗ್ಯ ತಪಾಸಣೆ ಆದಂತೆಯೂ ಆಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

 

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us