AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Coconut Day 2022: ತೆಂಗಿನಕಾಯಿ ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

World Coconut Day 2022: ಹಿಂದೂ ಧರ್ಮದಲ್ಲಿ ತೆಂಗಿನಕಾಯಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ತೆಂಗಿನ ಕಾಯಿ ಇಲ್ಲದೆ ಯಾವುದೇ ಶುಭ ಕಾರ್ಯವೂ ನಡೆಯುವುದಿಲ್ಲ.

World Coconut Day 2022: ತೆಂಗಿನಕಾಯಿ ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
Coconut
Follow us
TV9 Web
| Updated By: ನಯನಾ ರಾಜೀವ್

Updated on:Sep 02, 2022 | 11:03 AM

ಹಿಂದೂ ಧರ್ಮದಲ್ಲಿ ತೆಂಗಿನಕಾಯಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ತೆಂಗಿನ ಕಾಯಿ ಇಲ್ಲದೆ ಯಾವುದೇ ಶುಭ ಕಾರ್ಯವೂ ನಡೆಯುವುದಿಲ್ಲ. ಇದಲ್ಲದೆ, ತೆಂಗಿನಕಾಯಿ ಆರೋಗ್ಯಕ್ಕೆ ಮಾತ್ರವಲ್ಲ, ಚರ್ಮಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನ ನೀರು ಅಸಂಖ್ಯಾತ ಪ್ರಯೋಜನಗಳಿಂದ ಕೂಡಿದೆ, ತೆಂಗಿನಕಾಯಿಯನ್ನು ತಿನ್ನುವುದು ಕೂಡ ಅಷ್ಟೇ ಒಳ್ಳೆಯದು.

ತೆಂಗಿನಕಾಯಿ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಈ ಕಾರಣದಿಂದಾಗಿ, ಇದನ್ನು ಸೂಪರ್ ಫುಡ್ ಪಟ್ಟಿಗೆ ಸೇರಿಸಲಾಗಿದೆ. ತೆಂಗಿನಕಾಯಿಯನ್ನು ವಿವಿಧ ಭಕ್ಷ್ಯಗಳನ್ನು ತಯಾರಿಸಲು ಸಹ ಬಳಸಲಾಗುತ್ತದೆ.

ಗರ್ಭಾವಸ್ಥೆಯಲ್ಲಿ ತೆಂಗಿನ ಕಾಯಿ ತಿನ್ನುವುದು ಉತ್ತಮ ಆರೋಗ್ಯ ಮತ್ತು ಉತ್ತಮ ಚರ್ಮದೊಂದಿಗೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ತೆಂಗಿನಕಾಯಿ ತಿನ್ನುವುದರಿಂದಾಗು ಪ್ರಯೋಜನಗಳ ಬಗ್ಗೆ ತಿಳಿಯೋಣ.

ಮಲಬದ್ಧತೆ ಸಮಸ್ಯೆಯಾಗುವುದಿಲ್ಲ ತೆಂಗಿನಕಾಯಿಯಲ್ಲಿ ನಾರಿನಂಶ ಉತ್ತಮವಾಗಿದೆ. ಮಲಬದ್ಧತೆಯ ಸಮಸ್ಯೆ ಇದ್ದರೆ ತೆಂಗಿನಕಾಯಿ ತಿನ್ನುವುದು ನಿಮಗೆ ತುಂಬಾ ಒಳ್ಳೆಯದು. ಈ ಕಾರಣದಿಂದಾಗಿ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಸಹ ನಿಯಂತ್ರಣದಲ್ಲಿರುತ್ತವೆ.

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ ತೆಂಗಿನಕಾಯಿಯನ್ನು ತಿನ್ನುವುದರಿಂದ ನಿಮ್ಮ ತ್ವಚೆ ಮಾತ್ರವಲ್ಲದೆ ನಿಮ್ಮ ಕೂದಲು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ಕೂದಲು ಡ್ರೈ ಆದ ಅನುಭವವಾಗುತ್ತಿದ್ದರೆ ಅದೂ ಕೂಡ ಕಡಿಮೆಯಾಗುತ್ತದೆ. ತೆಂಗಿನಕಾಯಿಯಲ್ಲಿರುವ ಕೊಬ್ಬು ಚರ್ಮವನ್ನು ಪೋಷಿಸುತ್ತದೆ. ಸಮಸ್ಯೆಯ ಮೊದಲು ಚರ್ಮವು ಸುಕ್ಕುಗಟ್ಟುವುದಿಲ್ಲ.

ತೂಕ ಇಳಿಸಿಕೊಳ್ಳಲು ಸಹಾಯಕ ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಲು ನೀವು ಬಯಸಿದರೆ, ಖಂಡಿತವಾಗಿಯೂ ನಿಮ್ಮ ಆಹಾರದಲ್ಲಿ ತೆಂಗಿನಕಾಯಿಯನ್ನು ಸೇರಿಸಿ. ತೆಂಗಿನಕಾಯಿ ತಿನ್ನುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಟ್ರೈಗ್ಲಿಸರೈಡ್‌ಗಳಿಂದ ಸಮೃದ್ಧವಾಗಿರುವ ತೆಂಗಿನಕಾಯಿ ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಸಿ ಕೊಬ್ಬರಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ತೆಂಗಿನಕಾಯಿಯನ್ನು ತಿನ್ನುವುದರಿಂದ, ನೀವು ಎಲ್ಲಾ ರೀತಿಯ ವೈರಸ್‌ಗಳು ಮತ್ತು ಸೋಂಕುಗಳಿಂದ ದೂರವಿರಬಹುದು. ಅಲ್ಲದೆ ಎಲ್ಲಾ ರೋಗಗಳನ್ನು ದೂರವಿಡುತ್ತದೆ.

ಅಲ್ಝೈಮರ್​ನ ಅಪಾಯವು ಕಡಿಮೆಯಾಗುತ್ತದೆ ತೆಂಗಿನಕಾಯಿಯಲ್ಲಿ ಟ್ರೈಗ್ಲಿಸರೈಡ್‌ಗಳಿವೆ, ಇದು ಅಲ್ಝೈಮರ್ನ ಅಪಾಯವನ್ನು ಕಡಿಮೆ ಮಾಡುತ್ತದೆ. ತೆಂಗಿನಕಾಯಿಯು ಮಾನಸಿಕ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ. ನೀವು ಆರೋಗ್ಯಕರವಾಗಿ ಬದುಕಲು ಬಯಸಿದರೆ, ತೆಂಗಿನಕಾಯಿಯನ್ನು ನಿಯಮಿತವಾಗಿ ತಿನ್ನಲು ಪ್ರಾರಂಭಿಸಿ.ಆದರೆ ಜೀವನಶೈಲಿಯಲ್ಲಿ ಯಾವುದೇ ಬದಲಾವಣೆ ಮಾಡುವ ಮೊದಲು, ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Fri, 2 September 22

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ