AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Coconut Day 2025: ತೆಂಗು ದಿನದ ಆಚರಣೆಯ ಹಿನ್ನೆಲೆ, ಮಹತ್ವದ ಬಗ್ಗೆ ನಿಮ್ಗೊತ್ತಾ?

ತೆಂಗಿನಕಾಯಿ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಸೇವನೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಅಲ್ಲದೆ ತೆಂಗು ಬಹುಪಯೋಗಿ ವೃಕ್ಷವೂ ಹೌದು. ಹಾಗಾಗಿ ತೆಂಗು ಕೃಷಿಯ ಪ್ರಾಮುಖ್ಯತೆ, ತೆಂಗಿನಕಾಯಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್‌ 02 ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

World Coconut Day 2025: ತೆಂಗು ದಿನದ ಆಚರಣೆಯ ಹಿನ್ನೆಲೆ, ಮಹತ್ವದ ಬಗ್ಗೆ ನಿಮ್ಗೊತ್ತಾ?
ವಿಶ್ವ ತೆಂಗು ದಿನ
ಮಾಲಾಶ್ರೀ ಅಂಚನ್​
|

Updated on: Sep 01, 2025 | 8:17 PM

Share

ತೆಂಗನ್ನು (Coconut)ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ಏಕೆಂದರೆ ಇದರ ಪ್ರತಿಯೊಂದು ಭಾಗವೂ ಉಪಯೋಗಕ್ಕೆ ಬರುತ್ತವೆ. ತೆಂಗಿನ ನಾರಿನಿಂದ ಹಗ್ಗ, ಗರಿಯಿಂದ ಪೊರಕೆ ಚಪ್ಪರ, ತೆಂಗಿನ ಕಾಯಿಯನ್ನು ಅಡುಗೆಗೆ, ಪೂಜೆಗೆ ಬಳಸಲಾಗುತ್ತದೆ. ಹೀಗೆ ತೆಂಗು ಒಂದು ಬಹುಪಯೋಗಿ ವೃಕ್ಷವಾಗಿದ್ದು, ಇವುಗಳ ಪೌಷ್ಟಿಕಾಂಶ ಮೌಲ್ಯ  ಹಾಗೂ ತೆಂಗು ಕೃಷಿ, ಅದರ ಆರ್ಥಿಕ ಪ್ರಾಮುಖ್ಯತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಮತ್ತು ತೆಂಗು ಬೆಳೆಗಾರರನ್ನು ಗೌರವಿಸಲು ಪ್ರತಿವರ್ಷ ಸೆಪ್ಟೆಂಬರ್‌ 02 ರಂದು ವಿಶ್ವ ತೆಂಗು (World Coconut Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ವಿಶ್ವ ತೆಂಗು ದಿನದ ಇತಿಹಾಸವೇನು?

ತೆಂಗಿನಕಾಯಿ ಬೆಳೆ ಬೆಳೆಯುವ ಪ್ರತಿಯೊಂದು ದೇಶವೂ ಸೆಪ್ಟೆಂಬರ್‌ 02 ರಂದು ವಿಶ್ವ ತೆಂಗಿನಕಾಯಿ ದಿನವನ್ನು ಆಚರಿಸುತ್ತವೆ. ಈ ದಿನವನ್ನು ಮೊದಲ ಬಾರಿಗೆ 2009 ರಲ್ಲಿ ಆಚರಿಸಲಾಯಿತು. ಏಷ್ಯನ್‌ ಪೆಸಿಫಿಕ್‌ ತೆಂಗು ಸಮುದಾಯದ (APCC) ವತಿಯಿಂದ ಈ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು.

ಯುನೈಟೆಡ್ ನೇಷನ್ಸ್ ಎಕನಾಮಿಕ್ ಆಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಆಂಡ್ ಪೆಸಿಫಿಕ್ (UN-ESCAP) ಆಶ್ರಯದಲ್ಲಿ 1969, ಸೆಪ್ಟೆಂಬರ್ 2ರಂದು ಅಂತರಾಷ್ಟ್ರೀಯ ತೆಂಗು ಸಮುದಾಯವನ್ನು (ICC) ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ ಸೆಪ್ಟೆಂಬರ್ 2ರಂದು ವಿಶ್ವ ತೆಂಗು ದಿನವನ್ನು ಸ್ಥಾಪನೆ ಮಾಡಲಾಯಿತು. ಅಂತರಾಷ್ಟ್ರೀಯ ತೆಂಗು ಸಮುದಾಯವನ್ನು ನಂತರಲ್ಲಿ ಏಷ್ಯನ್ ಫೆಸಿಫಿಕ್ ತೆಂಗು ಸಮುದಾಯ ಎಂದು ಹೆಸರಿಸಲಾಯಿತು. ಇದರ ಪ್ರಧಾನ ಕಛೇರಿ ಇಂಡೋನೇಷ್ಯಾದ ಜಕಾರ್ತಾದಲ್ಲಿದೆ ಮತ್ತು ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಸಂಸ್ಥೆಯ ಸದಸ್ಯತ್ವವನ್ನು ಹೊಂದಿದೆ.

ಇದನ್ನೂ ಓದಿ
Image
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ
Image
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ
Image
ಅಂತಾರಾಷ್ಟ್ರೀಯ ಶ್ವಾನ ದಿನವನ್ನು ಆಚರಿಸುವುದೇಕೇ?
Image
ಫೋಟೋಗ್ರಫಿ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ

ಇದನ್ನೂ ಓದಿ: ಆರೋಗ್ಯದ ಬಗ್ಗೆ ಇರಲಿ ಅರಿವು; ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ

ವಿಶ್ವ ತೆಂಗಿನಕಾಯಿ ದಿನವನ್ನು ಆಚರಿಸುವುದೇಕೆ?

ನಮ್ಮ ದೈನಂದಿನ ಜೀವನದಲ್ಲಿ ತೆಂಗಿನಕಾಯಿಯ ಮಹತ್ವ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಅದರ ಪ್ರಭಾವವನ್ನು ಗುರುತಿಸಲು ವಿಶ್ವ ತೆಂಗಿನಕಾಯಿ ದಿನವನ್ನು ಆಚರಿಸಲಾಗುತ್ತದೆ. ವಾರ್ಷಿಕವಾಗಿ ಸೆಪ್ಟೆಂಬರ್ 2 ರಂದು ಆಚರಿಸಲಾಗುವ ಈ ದಿನವು ತೆಂಗಿನಕಾಯಿಯ ಪೌಷ್ಟಿಕಾಂಶ, ಆರ್ಥಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸುತ್ತದೆ, ವಿಶೇಷವಾಗಿ ಉಷ್ಣವಲಯದ ಪ್ರದೇಶಗಳಲ್ಲಿ ತೆಂಗಿನಕಾಯಿ ಲಕ್ಷಾಂತರ ರೈತರಿಗೆ ಆದಾಯ ಮತ್ತು ಜೀವನೋಪಾಯದ ಪ್ರಮುಖ ಮೂಲವಾಗಿದ್ದು, ತೆಂಗು ಕೃಷಿ ಮತ್ತು ಅದರ ಉದ್ಯಮದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?