World Consumer Rights Day 2024 : ಗ್ರಾಹಕರೇ, ಹಣಕೊಟ್ಟು ವಸ್ತುಗಳನ್ನು ಖರೀದಿಸುವಾಗ ಮೋಸ ಹೋಗದಿರಿ!

ಹಣ ಕೊಟ್ಟು ವಿವಿಧ ಸಾಮಗ್ರಿಗಳನ್ನು ಖರೀದಿಸುವ ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಅಂಗಡಿ ಮಾಲೀಕನಿಂದ ಮೋಸವಾದರೂ, ಆ ಬಗ್ಗೆ ಧ್ವನಿ ಎತ್ತುವುವರ ಸಂಖ್ಯೆಯು ತುಂಬಾ ಕಡಿಮೆಯೇ. ಹೆಚ್ಚಿನ ಗ್ರಾಹಕರಿಗೆ ತಮಗಿರುವ ಗ್ರಾಹಕ ಹಕ್ಕುಗಳ ಬಗ್ಗೆ ಮಾಹಿತಿಯಿಲ್ಲ. ಹೀಗಾಗಿ ಖರೀದಿದಾರರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ದಿನವೇ ವಿಶ್ವ ಗ್ರಾಹಕ ಹಕ್ಕುಗಳ ದಿನ. ಹಾಗಾದ್ರೆ ಗ್ರಾಹಕರ ಹಿತಕ್ಕಾಗಿ ಆರಂಭವಾದ ಈ ದಿನದ ಮಹತ್ವ ಹಾಗೂ ಇತಿಹಾಸದ ಬಗೆಗಿನ ಮಾಹಿತಿಯು ಇಲ್ಲಿದೆ.

World Consumer Rights Day 2024 : ಗ್ರಾಹಕರೇ, ಹಣಕೊಟ್ಟು ವಸ್ತುಗಳನ್ನು ಖರೀದಿಸುವಾಗ ಮೋಸ ಹೋಗದಿರಿ!
World Consumer Rights Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Mar 13, 2024 | 8:42 PM

ಪ್ರತಿಯೊಬ್ಬ ನಾಗರಿಕನಾಗಿ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಸರಕು ಸಾಮಾಗ್ರಿಗಳನ್ನು ಖರೀದಿಸುತ್ತಾನೆ. ಆದರೆ ಖರೀದಿಯ ವೇಳೆಯಲ್ಲಿ ಕೆಲವೊಮ್ಮೆ ಅಂಗಡಿಯ ಮಾಲೀಕನು ಮೋಸ ಮಾಡುವ ಸಾಧ್ಯತೆಯೇ ಹೆಚ್ಚು. ತೂಕದಲ್ಲಿ ವ್ಯತ್ಯಾಸ, ಬೆಲೆಯಲ್ಲಿ ಹೆಚ್ಚಳ ಹಾಗೂ ಕಳಪೆ ಗುಣಮಟ್ಟದ ವಸ್ತುಗಳನ್ನು ನೀಡುವ ಮೂಲಕ ಗ್ರಾಹಕನನ್ನು ಮೋಸಗೊಳಿಸಲಾಗುತ್ತದೆ. ಈ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಿ ಅವರ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ಪ್ರಪಂಚದಾದಂತ್ಯ ಪ್ರತಿ ವರ್ಷವೂ ಮಾರ್ಚ್‌ 15ರಂದು ‘ವಿಶ್ವ ಗ್ರಾಹಕರ ದಿನ’ವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಗ್ರಾಹಕ ಹಕ್ಕುಗಳ ದಿನದ ಇತಿಹಾಸ:

ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತುರಿಸಲಾಯಿತು. ಹೌದು, ಮಾರ್ಚ್ 15, 1962 ರಂದು ಆಗಿನ ಯುಎಸ್ ಅಧ್ಯಕ್ಷ ಜಾನ್ ಎಫ್. ಕೆನಡಿ ಯುಎಸ್ ಕಾಂಗ್ರೆಸ್‌ಗೆ ವಿಶೇಷ ಸಂದೇಶವನ್ನು ನೀಡಿ, ಗ್ರಾಹಕರ ಹಕ್ಕುಗಳ ಸಮಸ್ಯೆಯ ವಿಚಾರದ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದರು. ಹೀಗಾಗಿ ಗ್ರಾಹಕರ ಹಕ್ಕುಗಳ ವಿಷಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಮೊದಲ ವಿಶ್ವ ನಾಯಕ ಎನ್ನುವ ಖ್ಯಾತಿಗೆ ಪಾತ್ರರಾದರು. 1983 ರಿಂದ ಪ್ರತಿವರ್ಷ ಮಾರ್ಚ್ 15ರಂದು ಜಾಗತಿಕವಾಗಿ ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಹೋಳಿದಂದು ನಿಮ್ಮ ಮನೆಯ ಅಲಂಕಾರ ಹೇಗಿರಬೇಕು? ಕಡಿಮೆ ಖರ್ಚಿನಲ್ಲಿ ಮಾಡುವುದು ಹೇಗೆ?

ವಿಶ್ವ ಗ್ರಾಹಕ ಹಕ್ಕುಗಳ ದಿನ ಆಚರಣೆಯ ಮಹತ್ವ:

ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಯಾವುದೇ ವಂಚನೆಗೆ ಗುರಿಯಾಗಬಾರದು, ಅವರಿಗಿರುವ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಸಿ ಕೊಡುವುದು ಈ ವಿಶ್ವ ಗ್ರಾಹಕ ಹಕ್ಕುಗಳ ದಿನದ ಉದ್ದೇಶವಾಗಿದೆ. ಗ್ರಾಹಕನಾದವನು ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ವಸ್ತುವಿನ ಕೋಣೆಯ ದಿನಾಂಕವನ್ನು ಪರಿಶೀಲಿಸಿ ಕೊಂಡುಕೊಳ್ಳಬೇಕು. ಆದರೆ ಎಷ್ಟೋ ಜನರು ಕಡಿಮೆ ಬೆಲೆಗೆ ಸಿಗುತ್ತದೆ ಎನ್ನುವ ಕಾರಣಕ್ಕೆ ಗುಣ ಮಟ್ಟವಲ್ಲದ ವಸ್ತುಗಳನ್ನು ಖರೀದಿಸುತ್ತಾರೆ. ಆದರೆ ಹೆಚ್ಚಿನ ಗ್ರಾಹಕರಿಗೆ ಜ್ಞಾನವಿರುವುದಿಲ್ಲ. ತಮಗಿರುವ ಗ್ರಾಹಕ ಹಕ್ಕುಗಳ ಬಗ್ಗೆಯೂ ತಿಳಿದಿರುವುದಿಲ್ಲ. ಈ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಈ ದಿನದಂದು ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ, ಈ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ