ಪ್ರತಿಯೊಬ್ಬ ನಾಗರಿಕನಾಗಿ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಸರಕು ಸಾಮಾಗ್ರಿಗಳನ್ನು ಖರೀದಿಸುತ್ತಾನೆ. ಆದರೆ ಖರೀದಿಯ ವೇಳೆಯಲ್ಲಿ ಕೆಲವೊಮ್ಮೆ ಅಂಗಡಿಯ ಮಾಲೀಕನು ಮೋಸ ಮಾಡುವ ಸಾಧ್ಯತೆಯೇ ಹೆಚ್ಚು. ತೂಕದಲ್ಲಿ ವ್ಯತ್ಯಾಸ, ಬೆಲೆಯಲ್ಲಿ ಹೆಚ್ಚಳ ಹಾಗೂ ಕಳಪೆ ಗುಣಮಟ್ಟದ ವಸ್ತುಗಳನ್ನು ನೀಡುವ ಮೂಲಕ ಗ್ರಾಹಕನನ್ನು ಮೋಸಗೊಳಿಸಲಾಗುತ್ತದೆ. ಈ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಿ ಅವರ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ಪ್ರಪಂಚದಾದಂತ್ಯ ಪ್ರತಿ ವರ್ಷವೂ ಮಾರ್ಚ್ 15ರಂದು ‘ವಿಶ್ವ ಗ್ರಾಹಕರ ದಿನ’ವನ್ನು ಆಚರಿಸುತ್ತ ಬರಲಾಗುತ್ತಿದೆ.
ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತುರಿಸಲಾಯಿತು. ಹೌದು, ಮಾರ್ಚ್ 15, 1962 ರಂದು ಆಗಿನ ಯುಎಸ್ ಅಧ್ಯಕ್ಷ ಜಾನ್ ಎಫ್. ಕೆನಡಿ ಯುಎಸ್ ಕಾಂಗ್ರೆಸ್‌ಗೆ ವಿಶೇಷ ಸಂದೇಶವನ್ನು ನೀಡಿ, ಗ್ರಾಹಕರ ಹಕ್ಕುಗಳ ಸಮಸ್ಯೆಯ ವಿಚಾರದ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದರು. ಹೀಗಾಗಿ ಗ್ರಾಹಕರ ಹಕ್ಕುಗಳ ವಿಷಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಮೊದಲ ವಿಶ್ವ ನಾಯಕ ಎನ್ನುವ ಖ್ಯಾತಿಗೆ ಪಾತ್ರರಾದರು. 1983 ರಿಂದ ಪ್ರತಿವರ್ಷ ಮಾರ್ಚ್ 15ರಂದು ಜಾಗತಿಕವಾಗಿ ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಇದನ್ನೂ ಓದಿ: ಹೋಳಿದಂದು ನಿಮ್ಮ ಮನೆಯ ಅಲಂಕಾರ ಹೇಗಿರಬೇಕು? ಕಡಿಮೆ ಖರ್ಚಿನಲ್ಲಿ ಮಾಡುವುದು ಹೇಗೆ?
ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಯಾವುದೇ ವಂಚನೆಗೆ ಗುರಿಯಾಗಬಾರದು, ಅವರಿಗಿರುವ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಸಿ ಕೊಡುವುದು ಈ ವಿಶ್ವ ಗ್ರಾಹಕ ಹಕ್ಕುಗಳ ದಿನದ ಉದ್ದೇಶವಾಗಿದೆ. ಗ್ರಾಹಕನಾದವನು ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ವಸ್ತುವಿನ ಕೋಣೆಯ ದಿನಾಂಕವನ್ನು ಪರಿಶೀಲಿಸಿ ಕೊಂಡುಕೊಳ್ಳಬೇಕು. ಆದರೆ ಎಷ್ಟೋ ಜನರು ಕಡಿಮೆ ಬೆಲೆಗೆ ಸಿಗುತ್ತದೆ ಎನ್ನುವ ಕಾರಣಕ್ಕೆ ಗುಣ ಮಟ್ಟವಲ್ಲದ ವಸ್ತುಗಳನ್ನು ಖರೀದಿಸುತ್ತಾರೆ. ಆದರೆ ಹೆಚ್ಚಿನ ಗ್ರಾಹಕರಿಗೆ ಜ್ಞಾನವಿರುವುದಿಲ್ಲ. ತಮಗಿರುವ ಗ್ರಾಹಕ ಹಕ್ಕುಗಳ ಬಗ್ಗೆಯೂ ತಿಳಿದಿರುವುದಿಲ್ಲ. ಈ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಈ ದಿನದಂದು ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣಗಳು, ಚರ್ಚಾಗೋಷ್ಠಿಗಳು, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ, ಈ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ