
ಆನ್‌ಲೈನ್ ಆಗಿರಲಿ ಅಥವಾ ಆಫ್‌ಲೈನ್ ಮಾರುಕಟ್ಟೆಗಳಲ್ಲಾಗಿರಲಿ ಗ್ರಾಹಕರಿಗೆ (Consumer) ಸರಿಯಾದ ಸೇವೆಗಳು ಲಭಿಸುವುದಿಲ್ಲ ಹಾಗೆಯೇ ಕಲಬೆರಕೆ, ಕಳಪೆ ಗುಣಮಟ್ಟದ ಉತ್ಪನ್ನ, ಬೆಲೆ ಹೆಚ್ಚಳ, ಕಳಪೆ ಗುಣಮಟ್ಟದ ಸರಕುಗಳ ಮಾರಾಟ ಸೇರಿದಂತೆ ಒಂದಷ್ಟು ವಿಷಯಗಳಲ್ಲಿ ಮೋಸಗಳಾಗುತ್ತವೆ. ಮಾರುಕಟ್ಟೆಗಳಲ್ಲಿ ನಡೆಯುವಂತಹ ಈ ಮೋಸ ಮತ್ತು ವಂಚನೆಗಳಿಗೆ ಪರಿಹಾರ ಪಡೆಯುವುದು ಹೇಗೆ ಎಂಬ ಬಗ್ಗೆ ಹೆಚ್ಚಿನ ಗ್ರಾಹಕರಿಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರಿಗಾಗಿ ಇರುವಂತಹ ಹಕ್ಕುಗಳು ಯಾವುವು, ಆ ಹಕ್ಕುಗಳ ಮುಖಾಂತರ ಯಾವ ರೀತಿ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಜನರಿಗೆ ಶಿಕ್ಷಣ ನೀಡಲು, ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.
ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು 1983 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತುರಿಸಲಾಯಿತು. ಹೌದು, ಮಾರ್ಚ್ 15, 1962 ರಂದು ಆಗಿನ ಯುಎಸ್ ಅಧ್ಯಕ್ಷ ಜಾನ್ ಎಫ್. ಕೆನಡಿ ಯುಎಸ್ ಕಾಂಗ್ರೆಸ್‌ಗೆ ವಿಶೇಷ ಸಂದೇಶವನ್ನು ನೀಡಿ, ಗ್ರಾಹಕರ ಹಕ್ಕುಗಳ ಸಮಸ್ಯೆಯ ವಿಚಾರದ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದರು. ಹೀಗಾಗಿ ಗ್ರಾಹಕರ ಹಕ್ಕುಗಳ ವಿಷಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಮೊದಲ ವಿಶ್ವ ನಾಯಕ ಎನ್ನುವ ಖ್ಯಾತಿಗೆ ಪಾತ್ರರಾದರು. 1983 ರಿಂದ ಪ್ರತಿವರ್ಷ ಮಾರ್ಚ್ 15ರಂದು ಜಾಗತಿಕವಾಗಿ ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:19 am, Sun, 15 March 26