AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cotton Day 2025: ಇಂದು ವಿಶ್ವ ಹತ್ತಿ ದಿನ; ರೈತರ ಬದುಕಿನ ಆಧಾರ ಈ ಬಿಳಿ ಬಂಗಾರ

ಹತ್ತಿ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಜವಳಿ, ಪಶು ಆಹಾರ ಸೇರಿದಂತೆ ಹಲವು ಉದ್ಯಮಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಆದರೆ ಇಂದು ಹತ್ತಿ ಉತ್ಪಾದನೆ ಕುಂಠಿತವಾಗಿದ್ದು, ಈ ನಿಟ್ಟಿನಲ್ಲಿ ಹತ್ತಿ ಬೆಳೆ ಉತ್ಪಾದನೆಯನ್ನು ಉತ್ತೇಜಿಸುವ, ಹತ್ತಿ ಕೃಷಿ ಮತ್ತು ಅದರಲ್ಲಿ ತೊಡಗಿರುವ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್‌ 7 ರಂದು ವಿಶ್ವ ಹತ್ತಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

World Cotton Day 2025: ಇಂದು ವಿಶ್ವ ಹತ್ತಿ ದಿನ; ರೈತರ ಬದುಕಿನ ಆಧಾರ ಈ ಬಿಳಿ ಬಂಗಾರ
ವಿಶ್ವ ಹತ್ತಿ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on:Oct 07, 2025 | 9:20 AM

Share

ರೈತರ ಪಾಲಿನ ಬಿಳಿ ಬಂಗಾರ ಅಂತಾನೇ ಹೆಸರುವಾಸಿಯಾಗಿರುವ  ಹತ್ತಿ (Cotton) ದೇಶದ ಲಕ್ಷಾಂತರ ಜನರಜೀವನಕ್ಕೆ ಆಧಾರವೂ ಹೌದು. ಹತ್ತಿಯು ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಪ್ರಪಂಚದಾದ್ಯಂತದ ಅನೇಕ ದೇಶಗಳ ಆರ್ಥಿಕತೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಜವಳಿಗಳಿಗೆ ಮಾತ್ರವಲ್ಲದೆ, ವೈದ್ಯಕೀಯ ಕ್ಷೇತ್ರ, ಪಶು ಆಹಾರಗಳು, ಅಡುಗೆ ಎಣ್ಣೆ, ಸೌಂದರ್ಯ ವರ್ಧಕ, ಸಾಬೂನು ತಯಾರಿಕೆ ಸೇರಿದಂತೆ  ಹಲವು ಉದ್ಯಮಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಆದರೆ ಇಂದು ಹವಾಮಾನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆಗಳ ಕಾರಣದಿಂದ ಹತ್ತಿ ಉತ್ಪಾದನೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹತ್ತಿ ಹತ್ತಿ ಕೃಷಿ ಮತ್ತು ಅದರಲ್ಲಿ ತೊಡಗಿರುವ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಎತ್ತಿ ತೋರಿಸಲು, ಹತ್ತಿ ಉತ್ಪಾದನೆಗೆ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಹತ್ತಿ ಬೆಳೆಯನ್ನು ಜಾಗತಿಕ ಮಟ್ಟದಲ್ಲಿ ಉತ್ತೇಜಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್‌ 7 ರಂದು ವಿಶ್ವ ಹತ್ತಿ ದಿನವನ್ನು (World Cotton Day) ಆಚರಿಸಲಾಗುತ್ತದೆ. ಈ ಆಚರಣೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ವಿಶ್ವ ಹತ್ತಿ ದಿನದ ಆಚರಣೆ ಯಾವಾಗ ಪ್ರಾರಂಭವಾಯಿತು?

ವಿಶ್ವ ಹತ್ತಿ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 7 ರಂದು ಆಚರಿಸಲಾಗುತ್ತದೆ,  ಬೆನಿನ್, ಬುರ್ಕಿನಾ, ಫಾಸೊ, ಚಾಡ್ ಮತ್ತು ಮಾಲಿ ಈ ನಾಲ್ಕು ದೇಶಗಳು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಗೆ   ಸಲ್ಲಿಸಿದ ಪ್ರಸ್ತಾವನೆಯ  ಮೇರೆಗೆ  ವಿಶ್ವ ವ್ಯಾಪರ ಸಂಸ್ಥೆ (WTO) ಸಚಿವಾಲಯವು  ವಿಶ್ವ ಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO), ವಿಶ್ವಸಂಸ್ಥೆಯ  ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನ (UNCTAD), ಅಂತಾರಾಷ್ಟ್ರೀಯ ವ್ಯಾಪಾರ ಕೇಂದ್ರ (ITC) ಮತ್ತು ಅಂತಾರಾಷ್ಟ್ರೀಯ ಹತ್ತಿ ಸಲಹಾ ಸಮಿತಿಯ ಕಾರ್ಯದರ್ಶಿಗಳ ಸಹಯೋಗದೊಂದಿಗೆ  ವಿಶ್ವ ಹತ್ತಿ ದಿನದ ಆಚರಣೆಯನ್ನು 2019 ರಲ್ಲಿ ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಹತ್ತಿಬೆಳೆಯನ್ನು ಉತ್ತೇಜಿಸುವ  ಹಾಗೂ ಹತ್ತಿ ಬೆಳೆಗಾರರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಅಕ್ಟೋಬರ್ 07 ರಂದು ವಿಶ್ವದಾದ್ಯಂತ ಹತ್ತಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಗುರಿ ತೋರಿದ ಗುರುಗಳನ್ನು ಮರೆಯದಿರೋಣ; ವಿಶ್ವ ಶಿಕ್ಷಕರ ದಿನದ ಆಚರಣೆಯ ಬಗ್ಗೆ ತಿಳಿಯಿರಿ

ಇದನ್ನೂ ಓದಿ
Image
ಗುರಿ ತೋರಿದ ಗುರುಗಳನ್ನು ಮರೆಯದಿರೋಣ
Image
ನದಿಗಳು ಬರೀ ನೀರಿನ ಮೂಲವಲ್ಲ, ಪರಿಸರ ವ್ಯವಸ್ಥೆಯ ಜೀವನಾಡಿ
Image
ಮಾನವನ ಕ್ಷೇಮಕ್ಕೆ ಸುಸ್ಥಿರ, ಆರೋಗ್ಯಕರ ಪರಿಸರ ಅತ್ಯಗತ್ಯ
Image
ವಿಶ್ವ ಘೇಂಡಾಮೃಗ ದಿನದ ಆಚರಣೆಯ ಇತಿಹಾಸ, ಮಹತ್ವ

ವಿಶ್ವ ಹತ್ತಿ ದಿನದ ಆಚರಣೆಯ ಉದ್ದೇಶವೇನು?

  • ಆಹಾರ ಮತ್ತು ವಸತಿಯಷ್ಟೇ ಬಟ್ಟೆ ಅತ್ಯಗತ್ಯವಾದರೂ, ಹತ್ತಿ ಉದ್ಯಮಕ್ಕೆ ಅದಕ್ಕೆ ಸಿಗಬೇಕಾದ ಪ್ರಾಮುಖ್ಯತೆ ಸಿಗುತ್ತಿಲ್ಲ. ಹತ್ತಿ ಉದ್ಯಮವು ಬಟ್ಟೆಗಳನ್ನು ತಯಾರಿಸುವುದಷ್ಟೇ ಅಲ್ಲ, ಹಲವರಿಗೆ ಉದ್ಯೋಗದ ಪ್ರಮುಖ ಮೂಲವಾಗಿದೆ. ಆದ್ದರಿಂದ, ಹತ್ತಿಯ ಮಹತ್ವವನ್ನು ಎತ್ತಿ ತೋರಿಸುವುದು ಈ ದಿನವನ್ನು ಆಚರಿಸುವ ಪ್ರಾಥಮಿಕ ಉದ್ದೇಶವಾಗಿದೆ.
  • ಈ ದಿನದ ಉದ್ದೇಶ ಹತ್ತಿ ಉತ್ಪಾದನೆ ಮತ್ತು ಅದರ ಜಾಗತಿಕ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವುದು.
  • ಹತ್ತಿ ಕೃಷಿ ಮತ್ತು ಕೈಗಾರಿಕೆಗಳ ಮಹತ್ವವನ್ನು ಉತ್ತೇಜಿಸುವುದು, ರೈತರು, ಕಾರ್ಮಿಕರು ಮತ್ತು ಸಂಬಂಧಿತ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಸುಸ್ಥಿರ ಹತ್ತಿ ಉತ್ಪಾದನೆ ಮತ್ತು ಅದರ ಪರಿಸರದ ಮೇಲಿನ ಪ್ರಭಾವದ ಬಗ್ಗೆ ಚರ್ಚಿಸಲು ಅವಕಾಶವನ್ನು ಒದಗಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
  • ಹತ್ತಿ ಉತ್ಪಾದನೆಯಲ್ಲಿ ಅಗತ್ಯವಿರುವ ಎಲ್ಲಾ ಬದಲಾವಣೆಗಳನ್ನು ತರುವುದು, ಹತ್ತಿ ಉತ್ಪಾದನಾ ತಂತ್ರಗಳ ಅಭಿವೃದ್ಧಿಯನ್ನು ಉತ್ತೇಜಿಸುವುದು, ಈ ಕೆಲಸದಲ್ಲಿ ತೊಡಗಿರುವ ಎಲ್ಲ ಜನರನ್ನು ಒಗ್ಗೂಡಿಸುವುದು ಮತ್ತು ಗರಿಷ್ಠ ಉದ್ಯೋಗಾವಕಾಶಗಳನ್ನು ಒದಗಿಸುವುದು ವಿಶ್ವ ಹತ್ತಿ ದಿನದ ಉದ್ದೇಶವಾಗಿದೆ.
  • ಈ ದಿನ ಹತ್ತಿಯ ಅನೇಕ ಪ್ರಯೋಜನಗಳ ಕುರಿತು ಜನರಿಗೆ ಅರಿವು ಮೂಡಿಸಲು  ಹಾಗೂ ಹತ್ತಿಯ ಉತ್ತಮ ಫಸಲನ್ನು ಪಡೆಯುವ ಮಾರ್ಗಗಳ ಬಗ್ಗೆ ಹತ್ತಿ ಬೆಳೆಗಾರರಿಗೆ ಮಾರ್ಗದರ್ಶನ ಹಾಗೂ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
  • ವಿಶ್ವ ಹತ್ತಿ ದಿನದ ಸಂದರ್ಭದಲ್ಲಿ, ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳಂತಹ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ, ಇದರಲ್ಲಿ ಹತ್ತಿ ಕೃಷಿ, ಅದರ ಪ್ರಯೋಜನಗಳು ಮತ್ತು ಸವಾಲುಗಳನ್ನು ಚರ್ಚಿಸಲಾಗುತ್ತದೆ, ಇದಲ್ಲದೆ, ಪ್ರದರ್ಶನಗಳನ್ನು ಸಹ ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 am, Tue, 7 October 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ