Sign In

By signing in or creating an account, you agree with Associated Broadcasting Company's Terms & Conditions and Privacy Policy.

World Day for International Justice 2024: ‘ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯದ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕೂಡ ಕರೆಯಲಾಗುತ್ತದೆ. ಹಾಗಾದ್ರೆ ಈ ದಿನದ ಕುರಿತಾದ ಇನ್ನಷ್ಟು ಮಾಹಿತಿಯು ಇಲ್ಲಿದೆ.

World Day for International Justice 2024: ‘ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?
World Day for International Justice
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Jul 16, 2024 | 3:28 PM

ಅಪರಾಧಗಳು ಹಾಗೂ ಅಪರಾಧ ಜಗತ್ತು ಎಂದ ಕೂಡಲೇ ಎಲ್ಲರಿಗೂ ಹೇಳ ತೀರದ ಭಯ. ಹೀಗಾಗಿ ಒಬ್ಬ ವ್ಯಕ್ತಿಯು ಕೃತ್ಯಗಳನ್ನು ಮಾಡಿದರೆ ಅವರು ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಎಚ್ಚರಿಸಲು ಈ ದಿನದ ಆಚರಣೆಯು ಅತ್ಯಗತ್ಯ. ಅನ್ಯಾಯಕ್ಕೊಳಗಾದವರಿಗೆ ನ್ಯಾಯದ ಅವಶ್ಯಕತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಹಾಗೂ ಸಮಾಜದಲ್ಲಿರುವ ಜನರಿಗೆ ಮಾಡಿದ ಅಪರಾಧಗಳ ಬಗ್ಗೆ ಮಾತನಾಡಲು ಧೈರ್ಯ ತುಂಬುವುದಾಗಿದೆ. ಅದಲ್ಲದೇ ನ್ಯಾಯದ ಪರವಾಗಿ ನಿಲ್ಲುವ ಹಾಗೂ ಸಂತ್ರಸ್ತರ ಹಕ್ಕುಗಳಿಗಾಗಿ ಹೋರಾಡಲು ಸಲುವಾಗಿ ಎಲ್ಲರನ್ನೂ ಒಗ್ಗೂಡಿಸುತ್ತದೆ. ವಿಶ್ವ ಶಾಂತಿಯನ್ನು ಹಾಳು ಮಾಡುವಂತಹ ಕ್ರಿಮಿಕಲ್ ಕೃತ್ಯಗಳು ನಡೆಯದಂತೆ ತಡೆಯುತ್ತದೆ.

ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಇತಿಹಾಸ:

1998ರ ಜುಲೈ 17ರಲ್ಲಿ 139 ದೇಶಗಳು ಒಗ್ಗೂಡಿ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಶೀರ್ಷಿಕೆಯ ಒಪ್ಪಂದಕ್ಕೆ ಸಹಿ ಹಾಕಿತು. ಆದರೆ 2022ರ ಜುಲೈ 1ರಂದು ಜಾರಿಗೆ ಬಂದು ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯ ಎಂದು ಕರೆಯಲಾಯಿತು. ರೋಮ್ ಶಾಸನವನ್ನು ಅಳವಡಿಸಿಕೊಂಡ ದಿನವನ್ನು ನೆನಪಿಸುವ ಉದ್ದೇಶದಿಂದ ಜುಲೈ 17 ರನ್ನು ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ ಎಂದು ಘೋಷಿಸಲಾಯಿತು. ಹೀಗಾಗಿ ಪ್ರತಿ ವರ್ಷವು ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಮತ್ತಷ್ಟು ಓದಿ: Cleaning Tips : ಮನೆಯ ಸ್ವಚ್ಛತೆಗೂ ಇರಲಿ ಟೈಮ್ ಟೇಬಲ್, ಸ್ವಚ್ಛತೆ ಹೇಗಿರಬೇಕು? ಇಲ್ಲಿದೆ ನೋಡಿ

ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ನ್ಯಾಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದುಮೂಲ ಉದ್ದೇಶವಾಗಿದೆ. ಮಾನವೀಯತೆಗೆ ವಿರುದ್ದ ವೆನಿಸುವ ಅಪರಾಧ ಕೃತ್ಯಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಚಿತ್ರಹಿಂಸೆ, ಯುದ್ಧ ಅಪರಾಧಗಳು ಮತ್ತು ಮಿಲಿಟರಿ ಆಕ್ರಮಣ ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಗುರಿಯನ್ನು ಈ ದಿನವು ಹೊಂದಿದೆ. ಪ್ರಪಂಚದಾದ್ಯಂತ ವಿವಿಧ ಸಂಘಟನೆಗಳು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಅಪರಾಧ ಬಲಿಪಶುಗಳನ್ನು ನೆನಪಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ಈ ದಿನದಂದು ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ