AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Day for International Justice 2025: ಕಾನೂನಿನ ಮುಂದೆ ಎಲ್ಲರೂ ಸಮಾನರು; ಅಂತಾರಾಷ್ಟ್ರೀಯ ನ್ಯಾಯ ದಿನದ ಇತಿಹಾಸ ತಿಳಿಯಿರಿ

ನ್ಯಾಯದ ಮಹತ್ವವನ್ನು ಉತ್ತೇಜಿಸಲು, ಅನ್ಯಾಯಕ್ಕೊಳಗಾದವರಿಗೆ ಸರಿಯಾದ ನ್ಯಾಯ ಒದಗಿಸಲು, ಅನ್ಯಾಯಕ್ಕೊಳಗಾದವರ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಹಾಗೂ ಸರ್ಕಾರಗಳು ಮತ್ತು ನಾಗರಿಕ ಸಮಾಜವು ಅಂತಾರಾಷ್ಟ್ರೀಯ ನ್ಯಾಯಕ್ಕೆ ಬದ್ಧರಾಗಿರುವಂತೆ ಜಾಗೃತಿ ಮೂಡಿಲಸು ಪ್ರತಿ ವರ್ಷ ಜುಲೈ 17 ರಂದು ಅಂತಾರಾಷ್ಟ್ರೀಯ ನ್ಯಾಯ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಇತಿಹಾಸ ಮತ್ತು ಮಹತ್ವ ಏನೆಂಬುದನ್ನು ನೋಡೋಣ ಬನ್ನಿ.

World Day for International Justice 2025: ಕಾನೂನಿನ ಮುಂದೆ ಎಲ್ಲರೂ ಸಮಾನರು; ಅಂತಾರಾಷ್ಟ್ರೀಯ ನ್ಯಾಯ ದಿನದ ಇತಿಹಾಸ ತಿಳಿಯಿರಿ
ಅಂತಾರಾಷ್ಟ್ರೀಯ ನ್ಯಾಯ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on:Jul 17, 2025 | 9:58 AM

Share

ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ಸಮಾನವಾಗಿ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯವನ್ನು ಒದಗಿಸಬೇಕೆನ್ನುವುದು ಕಾನೂನಿನ ಆಶಯ. ಆದ್ರೆ ಇಂದಿಗೂ ಕೂಡಾ ಅದೆಷ್ಟೋ ಮಂದಿ ಅನ್ಯಾಯಕ್ಕೊಳಗಾಗಿ ನ್ಯಾಯ ಸಿಗದೆ, ಸರಿಯಾದ ನ್ಯಾಯಕ್ಕಾಗಿ ಪರದಾಡುತ್ತಿದ್ದಾರೆ. ಹೀಗಾಗಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಲು, ಅನ್ಯಾಯಕ್ಕೊಳಗಾದವರ ಹಕ್ಕುಗಳನ್ನು ರಕ್ಷಿಸಲು ಹಾಗೂ ಮುಖ್ಯವಾಗಿ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು  ನ್ಯಾಯದ ಮಹತ್ವವನ್ನು ಉತ್ತೇಜಿಸಲು, ನ್ಯಾಯಯುತ, ಶಾಂತಿಯುತ ಮತ್ತು ಸುರಕ್ಷಿತ ಜಗತ್ತನ್ನು ನಿರ್ಮಿಸುವಲ್ಲಿ ಅಂತಾರಾಷ್ಟ್ರೀಯ ಕಾನೂನಿನ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಜುಲೈ 17 ರಂದು ಅಂತಾರಾಷ್ಟ್ರೀಯ ನ್ಯಾಯ ದಿನವನ್ನು (World Day for International Justice) ಆಚರಿಸಲಾಗುತ್ತದೆ. ಈ ವಿಶೇಷ ಆಚರಣೆಯ ಹಿನ್ನೆಲೆ ಏನೆಂಬುದನ್ನು ನೋಡೋಣ ಬನ್ನಿ.

ಅಂತಾರಾಷ್ಟ್ರೀಯ ನ್ಯಾಯ ದಿನದ ಇತಿಹಾಸ:

ಅಂತಾರಾಷ್ಟ್ರೀಯ ಕ್ರಿಮಿನಲ್‌ ನ್ಯಾಯಾಲಯದ ರಚನೆಗೆ ಕಾರಣವಾದ ರೋಮ್‌ ಶಾಸನ ಒಪ್ಪಂದದ ಸವಿ ನೆನಪಿಗಾಗಿ ಅಂತಾರಾಷ್ಟ್ರೀಯ ನ್ಯಾಯ ದಿನವನ್ನು ಆಚರಿಸಲಾಗುತ್ತದೆ. ಜುಲೈ 17, 1998 ರಂದು, ರೋಮ್ ಶಾಸನವನ್ನು ಅಂಗೀಕರಿಸಲಾಯಿತು, ಇದು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ICC) ಸ್ಥಾಪನೆಗೆ ನಿರ್ಣಾಯಕ ದಾಖಲೆಯಾಗಿದೆ. ರೋಮ್ ಶಾಸನವನ್ನು 1998 ರಲ್ಲಿ ಅಂಗೀಕರಿಸಲಾಗಿದ್ದರೂ, ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ತನ್ನ ಔಪಚಾರಿಕ ಕಾರ್ಯಾಚರಣೆಗಳನ್ನು ಜುಲೈ 1, 2002 ರಂದು ಪ್ರಾರಂಭಿಸಿತು. ಹೀಗೆ ಜುಲೈ 17, 1998 ರಲ್ಲಿ ರೋಮ್‌ ಶಾಸನವನ್ನು ಅಳವಡಿಸಿಕೊಂಡ ನೆನಪಿಗಾಗಿ ಈ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು.

ಇದನ್ನೂ ಓದಿ: ಯುವಕರು ದೇಶದ ಭವಿಷ್ಯ; ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುವ ಉದ್ದೇಶವನ್ನು ತಿಳಿಯಿರಿ

ಇದನ್ನೂ ಓದಿ
Image
ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುವ ಉದ್ದೇಶವನ್ನು ತಿಳಿಯಿರಿ
Image
ಜನಸಂಖ್ಯಾ ದಿನವನ್ನು ಆಚರಿಸುವುದೇಕೇ?
Image
ಸಿಹಿಯಾದ ಚಾಕೊಲೇಟ್‌ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ
Image
ಜುಲೈ 1 ರಂದೇ ಏಕೆ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ ಗೊತ್ತಾ?

ಅಂತಾರಾಷ್ಟ್ರೀಯ ನ್ಯಾಯ ದಿನದ ಮಹತ್ವ:

ಈ ದಿನ ವಿಶೇಷವಾಗಿ ಶಿಕ್ಷೆಯ ವಿನಾಯಿತಿಯನ್ನು ನಿಭಾಯಿಸುವಲ್ಲಿ, ಜಾಗತಿಕ ಶಾಂತಿ, ಭದ್ರತೆಗೆ ಕೊಡುಗೆ ನೀಡುವಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್‌ ನ್ಯಾಯಾಲಯ ಸೇರಿದಂತೆ ಅಂತಾರಾಷ್ಟ್ರೀಯ ನ್ಯಾಯ ಕಾರ್ಯ ವಿಧಾನಗಳ ಪಾತ್ರಗಳ ಬಗ್ಗೆ ಒತ್ತಿ ಹೇಳುತ್ತದೆ. ಅಲ್ಲದೆ ನ್ಯಾಯದ ಬಗ್ಗೆ ಹಾಗೂ ಮಾನವೀಯತೆಗೆ ವಿರುದ್ಧವೆನಿಸುವ ಅಪರಾಧ ಕೃತ್ಯಗಳು, ದೌರ್ಜನ್ಯ, ಚಿತ್ರಹಿಂಸೆ, ಯುದ್ಧ ಅಪರಾಧಗಳು, ಮಿಲಿಟರಿ ಆಕ್ರಮಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಜೊತೆಗೆ ಈ ದಿನ ನ್ಯಾಯಯುತ, ಶಾಂತಿಯು ಮತ್ತು ಸುರಕ್ಷಿತ ಜಗತ್ತನ್ನು ನಿರ್ಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 am, Thu, 17 July 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!