World Day of Safety and Health at Work 2025: ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನ, ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಕೆಲಸದ ಸ್ಥಳದಲ್ಲಿ ವಾತಾವರಣವು ಸುರಕ್ಷಿತ ಹಾಗೂ ಆರೋಗ್ಯಕರವಾಗಿದ್ದರೆ ಮಾತ್ರ ಕೆಲಸ ಮಾಡಲು ಸಾಧ್ಯ. ಹೀಗಾಗಿ ಉದ್ಯೋಗಿಗಳ ಸುರಕ್ಷತೆ ಹಾಗೂ ಅವರ ಆರೋಗ್ಯಕ್ಕೆ ಒತ್ತು ನೀಡುವ ಸಲುವಾಗಿ ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನವನ್ನು ಮೀಸಲಿಡಲಾಗಿದೆ. ಹಾಗಾದ್ರೆ ಏಪ್ರಿಲ್ 28 ರಂದು ಆಚರಿಸಲಾಗುವ ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

ಮನೆಯಿರಲಿ, ಉದ್ಯೋಗ ಸ್ಥಳ (work place) ವಿರಲಿ ನಮ್ಮ ಸುರಕ್ಷತೆ ಹಾಗೂ ಆರೋಗ್ಯದ ಕಡೆಗೆ ಗಮನ ವಹಿಸುವುದು ಬಹಳ ಮುಖ್ಯ. ಬದುಕು ಸಾಗಿಸಲು ಎಲ್ಲರೂ ಉದ್ಯೋಗದ ಮೇಲೆ ಅವಲಂಬಿತರಾಗಿದ್ದಾರೆ. ಜಗತ್ತಿನಾದಂತ್ಯ ಜನರು ಕಾರ್ಖಾನೆ, ಕಂಪೆನಿ ಸೇರಿದಂತೆ ಇನ್ನಿತ್ತರ ಕೆಲಸಗಳಿಗೆ ತೆರಳುತ್ತಾರೆ. ಈ ವೇಳೆಯಲ್ಲಿ ಕೆಲಸದ ಸ್ಥಳದಲ್ಲಿ ತಮ್ಮ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಕೆಲಸದ ಸ್ಥಳದಲ್ಲಿ ಸಣ್ಣ ಪುಟ್ಟ ಅಪಘಾತಗಳು ಸಂಭವಿಸಬಹುದು. ಕೆಲವೊಮ್ಮೆ ಆರೋಗ್ಯ (health) ವು ಕೈ ಕೊಡಬಹುದು. ಹೀಗಾಗಿ ಪ್ರತಿಯೊಬ್ಬ ಉದ್ಯೋಗಿಗೂ ಅಪಘಾತಗಳು, ಆರೋಗ್ಯ ಸಂಬಂಧಿ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಏಪ್ರಿಲ್ 28 ರಂದು ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನ (World Day of Safety and Health at Work) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನದ ಇತಿಹಾಸ
ಪ್ರತಿ ವರ್ಷ ಏಪ್ರಿಲ್ 28 ರಂದು ಕೆಲಸದ ಸ್ಥಳದಲ್ಲಿ ತಮ್ಮ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) 2003 ರಲ್ಲಿ ಮೊದಲ ಬಾರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯಕ್ಕಾಗಿ ವಿಶ್ವ ದಿನವನ್ನು ಅಧಿಕೃತವಾಗಿ ಆಚರಿಸಿತು. ಈ ದಿನವನ್ನು ಏಪ್ರಿಲ್ 28 ರಂದೇ ಆಚರಿಸುವುದರ ಹಿಂದೆ ಈ ಒಂದು ಕಾರಣವು ಒಳಗೊಂಡಿದೆ. ‘ಮೃತ ಮತ್ತು ಗಾಯಗೊಂಡ ಕಾರ್ಮಿಕರ ಅಂತಾರಾಷ್ಟ್ರೀಯ ಸ್ಮರಣಾರ್ಥ ದಿನ’ದೊಂದಿಗೆ ಹೊಂದಿಕೆಯಾಗುವ ಕಾರಣ ಈ ದಿನದ ಆಚರಣೆಯೂ ಏಪ್ರಿಲ್ 28 ರಂದೇ ಆಚರಿಸಲಾಯಿತು. ಅದಲ್ಲದೆ, ಈ ದಿನವನ್ನು ಟ್ರೇಡ್ ಯೂನಿಯನ್ ಚಳುವಳಿ 1996 ರಲ್ಲಿ ಆಚರಿಸಲು ಪ್ರಾರಂಭಿಸಿತು. ಅಂದಿನಿಂದ ಕಾರ್ಮಿಕರ ಹಾಗೂ ಉದ್ಯೋಗದಲ್ಲಿರುವವರ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನದ ಆಚರಣೆಯೂ ಚಾಲ್ತಿಯಲ್ಲಿದೆ.
ಇದನ್ನೂ ಓದಿ : ಕುಡಿಯೋ ನೀರನ್ನು ಇದಕ್ಕಿಂತ ಹೆಚ್ಚು ಹೊತ್ತು ಫ್ರಿಡ್ಜ್ನಲ್ಲಿ ಸಂಗ್ರಹಿಸಿಡಬಾರದಂತೆ; ಏಕೆ ಗೊತ್ತಾ?
ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನದ ಮಹತ್ವ ಹಾಗೂ ಆಚರಣೆ
ತಂತ್ರಗಳು ವೇಗವಾಗಿ ಬೆಳೆಯುತ್ತಿರುವ ಕಾಲಘಟ್ಟದಲ್ಲಿ ಉದ್ಯೋಗಿ ಸುರಕ್ಷತೆ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡುವುದು ಬಹಳ ಮುಖ್ಯವಾಗಿದೆ. ಕೆಲಸ ಮಾಡುವ ವಿಧಾನ ಹಾಗೂ ಸಮಯದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿದೆ. ಹೀಗಾಗಿ ಉದ್ಯೋಗದಲ್ಲಿರುವವರ ಆರೋಗ್ಯ ಹಾಗೂ ಸುರಕ್ಷತೆಗೆ ಭದ್ರತಾ ಕ್ರಮದಲ್ಲಿ ಬದಲಾವಣೆ ಮಾಡುವುದು ಅಗತ್ಯವಾಗಿದ್ದು, ಈ ಹಿನ್ನಲೆಯಲ್ಲಿ ಈ ದಿನವು ಮಹತ್ವದ್ದಾಗಿದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ದಿನವು ಮಹತ್ವದ್ದಾಗಿದೆ. ಪ್ರತಿ ವರ್ಷವು ಒಂದೊಂದು ಥೀಮ್ ನಲ್ಲಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯೂ ಈ ದಿನದ ಆಚರಣೆಗೆ ಹೆಚ್ಚು ಒತ್ತು ನೀಡುತ್ತವೆ. ಈ ಹಿನ್ನಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಅಭಿಯಾನಗಳು, ವಿಚಾರ ಸಂಕಿರಣ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕೆಲಸದ ಸ್ಥಳದಲ್ಲಿ ಸುರಕ್ಷತೆ ಹಾಗೂ ಆರೋಗ್ಯಕ್ಕಾಗಿ ವಿಶ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತದೆ.
ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ