AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Day Of Social Justice: ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಯಾಕಾಗಿ ಆಚರಿಸಬೇಕು?

ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು, ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ತೊಲಗಿಸಲು ಪ್ರತಿ ವರ್ಷ ಫೆ. 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ.

World Day Of Social Justice: ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಯಾಕಾಗಿ ಆಚರಿಸಬೇಕು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 20, 2025 | 10:15 AM

Share

ಜನತೆಯ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅತ್ಯವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿದೆ. ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು, ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ತೊಲಗಿಸಲು ಪ್ರತಿ ವರ್ಷ ಫೆ. 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ.

ಈ ದಿನದ ಇತಿಹಾಸವೇನು?

ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಆಶಯದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆ. 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು ಹಾಗೂ 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ ನೀಡಲಾಯಿತು. ಪ್ರತಿ ಸಮಾಜದಲ್ಲು ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ಸಮಾಜದ ಅಭಿವೃದ್ಧಿಯಾಗುತ್ತದೆ. ಇದರಿಂದ ದೇಶ ಅಭಿವೃದ್ದಿಯಾಗುತ್ತದೆ. ದೇಶ ಅಭಿವೃದ್ಧಿಯಾದರೆ ವಿಶ್ವವೇ ಅಭಿವೃದ್ಧಿಯಾಗುತ್ತದೆ ಎಂಬುದು ವಿಶ್ವ ಸಂಸ್ಥೆಯ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ನಿಮಗೆ ಹಾರುತ್ತಿರುವ ಕನಸು ಬಿದ್ದರೆ, ಅದು ಶುಭವೇ, ಅಶುಭವೇ?

ಯಾಕಾಗಿ ಈ ದಿನವನ್ನು ಆಚರಿಸಬೇಕು?

ಸುಸ್ಥಿರ ಅಭಿವೃದ್ಧಿ, ಉದ್ಯೋಗ, ಬಡತನ ನಿರ್ಮೂಲನೆ, ಲಿಂಗ ಸಮಾನತೆ, ಭದ್ರತೆ ಮತ್ತು ಸಾಮಾಜಿಕ ಸಮಾನತೆಯ ಎಲ್ಲ ಹಕ್ಕುಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸುವುದು ವಿಶ್ವದ ಮುಂದಿರುವ ಬಹುಮುಖ್ಯ ಸವಾಲಾಗಿದೆ. ಈ ಸವಾಲನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲ ರಾಷ್ಟ್ರಗಳು ಪರಸ್ಪರ ಕೈಜೋಡಿಸಿ ಶ್ರಮಿಸಬೇಕಿದೆ. ಅಲ್ಲದೆ ಜಗತ್ತಿನಾದ್ಯಂತ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ದೇಶದ ಪ್ರಜೆಗಳಿಗೆ ಜಾತಿ- ಮತ ಭೇದಗಳಿಲ್ಲದೆ ಸಮಾನವಾಗಿ ಹಂಚಿಕೆಯಾಗಬೇಕು. ಅವಕಾಶ ವಂಚಿತರಾದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇನ್ನಷ್ಟು ಹೆಚ್ಚಿನ ಪ್ರಯತ್ನಗಳಾಗಬೇಕು. ಜಾಗತಿಕ ಒಗ್ಗಟ್ಟಿನ ಶಕ್ತಿಯನ್ನು ಎತ್ತಿ ಹಿಡಿಯುವುದೇ ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಯುಎನ್‌ , ಇಂಟರ್‌ನ್ಯಾಷನಲ್‌ ಲೇಬರ್‌ ಆಫೀಸ್‌ ಸೇರಿದಂತೆ ಹಲವು ಸಂಘಟನೆಗಳು ಸಾಮಾಜಿಕ ನ್ಯಾಯದ ಮಹತ್ವ ಕುರಿತು ಹಲವು ಚಟುವಟಿಕೆಗಳ್ನು ಹಮ್ಮಿಕೊಳ್ಳುತ್ತವೆ. ಈ ದಿನದ ಉದ್ದೇಶವನ್ನು ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ