AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ

ಸಾಮಾಜಿಕವಾಗಿ ಸಮಗ್ರ ಸಮಾಜವನ್ನು ಮಾಡಲು ಬಡತನ, ಲಿಂಗ, ದೈಹಿಕ ತಾರತಮ್ಯ, ಅನಕ್ಷರತೆ, ಧಾರ್ಮಿಕ ತಾರತಮ್ಯವನ್ನು ತೊಡೆದುಹಾಕುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಜಾರಿಯಲ್ಲಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಆಚರಣೆ ಶುರುವಾದದ್ದು ಯಾವಾಗ ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Feb 20, 2026 | 10:01 AM

Share

ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ.

ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು?

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ ನೀಡಲಾಯಿತು. ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವು ಈ ದಿನದಾಗಿತ್ತು. ಹೀಗಾಗಿ ಅಂದಿನಿಂದ ಪ್ರತಿ ವರ್ಷ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ:ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ

ವಿಶ್ವ ಸಾಮಾಜಿಕ ನ್ಯಾಯ ದಿನದ ಮಹತ್ವವೇನು?

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಪೂರ್ಣ ಉದ್ಯೋಗ , ಯೋಗ್ಯ ಕೆಲಸದ ಪ್ರಚಾರ, ಸಾರ್ವತ್ರಿಕ ಸಾಮಾಜಿಕ ರಕ್ಷಣೆ, ಲಿಂಗ ಸಮಾನತೆ, ಸಾಮಾಜಿಕ ಯೋಗಕ್ಷೇಮ ಹಾಗೂ ಎಲ್ಲರಿಗೂ ನ್ಯಾಯ ದೊರಕುವ ಪರಿಹಾರಗಳನ್ನು ಹುಡುಕುವ ಅಂತಾರಾಷ್ಟ್ರೀಯ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಈ ದಿನವೂ ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಜನರಲ್ಲಿ ಜಾಗೃತಿ ಮೂಡಿಸಲು ಹತ್ತು ಹಲವು ಕಾರ್ಯಕ್ರಮಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ  ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ