AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Development Information Day 2024: ಅಕ್ಟೋಬರ್ 24ರಂದೇ ವಿಶ್ವ ಅಭಿವೃದ್ಧಿ ಮಾಹಿತಿ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ

ಪ್ರತಿ ವರ್ಷ ಸಮಸ್ಯೆಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಸಾರ್ವಜನಿಕರ ಅಭಿಪ್ರಾಯಗಳನ್ನು ಗಮನ ಸೆಳೆಯುವ ಉದ್ದೇಶ ಕೂಡ ಜನರಲ್‌ ಅಸ್ಲೆಂಬಿಯದಾಗಿತ್ತು. ಸಮಸ್ಯೆಗ್ಯಾಲಬ್ಬು ಬಗೆಹರಿಸಲು ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವುದು ಕೂಡ ಅಗತ್ಯವಾಗಿತ್ತು. ಈ ಹಿನ್ನಲೆಯಲ್ಲಿ ಹುಟ್ಟಿಕೊಂಡ ದಿನವೇ ವಿಶ್ವ ಅಭಿವೃದ್ಧಿ ಮಾಹಿತಿ ದಿನ. ಹಾಗಾದರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Development Information Day 2024: ಅಕ್ಟೋಬರ್ 24ರಂದೇ ವಿಶ್ವ ಅಭಿವೃದ್ಧಿ ಮಾಹಿತಿ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 24, 2024 | 9:55 AM

Share

ಇತ್ತೀಚಿನ ವರ್ಷಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ದೂರವಾಣಿಗಳಂತಹ ಆಧುನಿಕ ಮಾಹಿತಿ ತಂತ್ರಜ್ಞಾನಗಳು ಜಗತ್ತಿನಲ್ಲಿ ನಡೆಯುವ ಸಮಸ್ಯೆಗಳು ಹಾಗೂ ಘಟನೆಗಳ ಬಗ್ಗೆ ಜನರನ್ನು ಎಚ್ಚರಿಸುವಲ್ಲಿ ಮತ್ತು ವ್ಯಾಪಾರ ಮತ್ತು ಅಭಿವೃದ್ಧಿ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಆದರೆ ಅಂದು ವಿವಿಧ ರಾಷ್ಟ್ರಗಳಲ್ಲಿ ಅಭಿವೃದ್ಧಿಯ ಸುತ್ತಲಿನ ಸಮಸ್ಯೆಗಳು ಮತ್ತು ಅವುಗಳನ್ನು ನಿವಾರಿಸುವ ಸಲುವಾಗಿ ವಿಶ್ವ ಅಭಿವೃದ್ಧಿ ಮಾಹಿತಿ ದಿನವು ಹುಟ್ಟಿಕೊಂಡಿತು. ಹೀಗಾಗಿ ಪ್ರತಿ ವರ್ಷ ಅಕ್ಟೋಬರ್ 24 ರಂದು ವಿಶ್ವ ಅಭಿವೃದ್ಧಿ ಮಾಹಿತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

*ವಿಶ್ವ ಅಭಿವೃದ್ಧಿ ಮಾಹಿತಿ ದಿನದ ಇತಿಹಾಸ*

ವಿಶ್ವ ಸಂಸ್ಥೆಯ ದಿನದಂದೇ ಅಂದರೆ ಅಕ್ಟೋಬರ್‌ 24ರಂದು ವಿಶ್ವ ಅಭಿವೃದ್ಧಿ ದಿನಾಚರಣೆಯನ್ನು ಕೂಡ ಆಚರಿಸಬೇಕು ಎಂದು 1972ರಲ್ಲಿ ನಿರ್ಧರಿಸಿತು. ಪ್ರತಿ ವರ್ಷ ಸಮಸ್ಯೆಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಸಾರ್ವಜನಿಕರ ಅಭಿಪ್ರಾಯಗಳನ್ನು ಗಮನ ಸೆಳೆಯುವ ಉದ್ದೇಶ ಕೂಡ ಜನರಲ್‌ ಅಸ್ಲೆಂಬಿಯದಾಗಿತ್ತು. ಅವುಗಳನ್ನು ಬಗೆಹರಿಸಲು ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವುದು ಬಹಳ ಅಗತ್ಯವಾಗಿತ್ತು. ಈ ಸಮಸ್ಯೆಗಳನ್ನು ಬಗೆಹರಿಸಲು ದಾರಿಗಳನ್ನು ಕಂಡುಕೊಳ್ಳುವುದಕ್ಕಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಉದ್ದೇಶವನ್ನು ಹೊಂದಿತ್ತು. ಹೀಗಾಗಿ ವಿಶ್ವ ಅಭಿವೃದ್ಧಿ ಮಾಹಿತಿ ದಿನವನ್ನು ಅಕ್ಟೋಬರ್‌ 24, 1973ರಲ್ಲಿ ಪ್ರಥಮ ಬಾರಿಗೆ ಆಚರಿಸಲಾಯಿತು. ಆದಾದ ಬಳಿಕ ಪ್ರತಿ ವರ್ಷ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

*ವಿಶ್ವ ಅಭಿವೃದ್ಧಿ ಮಾಹಿತಿ ದಿನದ ಮಹತ್ವ ಹಾಗೂ ಆಚರಣೆ*

ವಿವಿಧ ರಾಷ್ಟ್ರಗಳಲ್ಲಿ ಅಭಿವೃದ್ಧಿಯ ಸುತ್ತಲಿನ ಸಮಸ್ಯೆಗಳು ಮತ್ತು ಅವುಗಳನ್ನು ನಿವಾರಿಸಲು ಪರಿಹಾರಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಇಂದಿಗೂ ಸಹ, ಅಭಿವೃದ್ಧಿ ಸಮಸ್ಯೆಗಳನ್ನು ಪರಿಹರಿಸುವ, ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಮತ್ತು ವಿಶ್ವ ಸಾರ್ವಜನಿಕ ಅಭಿಪ್ರಾಯದ ಗಮನವನ್ನು ಸೆಳೆಯುವ ಉದ್ದೇಶದಿಂದ ಈ ದಿನವು ಮಹತ್ವದಾಗಿದೆ. ವಿವಿಧ ದೇಶಗಳಲ್ಲಿ, ವ್ಯಾಪಾರ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸರ್ಕಾರಗಳು ಮತ್ತು ಸಂಸ್ಥೆಗಳು ಈ ವಿಶೇಷ ದಿನದಂದು ಮಾಧ್ಯಮಗಳಲ್ಲಿ ಜಾಹೀರಾತುಗಳ ಮೂಲಕ ಜನರಿಗೆ ಅನೇಕ ಮಾಹಿತಿಯನ್ನು ಒದಗಿಸುತ್ತವೆ. ವಿಚಾರ ಸಂಕಿರಣಗಳು ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನಿಮ್ಮ ತುಟಿಗಳ ಆಕಾರವು ಬಿಚ್ಚಿಡುತ್ತೆ ನಿಮ್ಮ ವ್ಯಕ್ತಿತ್ವ, ತುಟಿ ನೋಡಿಯೇ ಸ್ವಭಾವ ತಿಳಿಯಿರಿ

*ಮಾಹಿತಿಯನ್ನು ತಲುಪಿಸುವಲ್ಲಿ ಆಧುನಿಕ ತಂತ್ರಜ್ಞಾನಗಳ ಪ್ರಾಮುಖ್ಯತೆ*

ಇಂದು ನಾವು ನೀವುಗಳು ಅಭಿವೃದ್ಧಿಯತ್ತ ಸಾಗುತ್ತಿದ್ದೇವೆ. ಹೀಗಾಗಿ ಕಾಲಕ್ಕೆ ತಕ್ಕಂತೆ ಸಾಕಷ್ಟು ಬದಲಾಗಿದೆ. ಮೊಬೈಲ್, ಇಂಟರ್ ನೆಟ್ ಮತ್ತಿತರ ಸಂವಹನ ಕ್ರಾಂತಿಗಳು ತನ್ನ ಆಯಾಮಗಳನ್ನು ವಿಸ್ತರಿಸಿಕೊಂಡಿದ್ದು, ಇದೀಗ ಅವುಗಳ ಮೂಲಕ ಜನರಿಗೆ ತ್ವರಿತ ಮಾಹಿತಿ ತಲುಪಿಸಲಾಗುತ್ತಿದೆ. ಈ ಆಧುನಿಕ ಮಾಹಿತಿ ತಂತ್ರಜ್ಞಾನಗಳು ಜನರನ್ನು ಎಚ್ಚರಿಸುವಲ್ಲಿ ಮತ್ತು ವ್ಯಾಪಾರ ಮತ್ತು ಅಭಿವೃದ್ಧಿ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​