AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Earth Day 2025: ಮನುಷ್ಯನ ಸ್ವಾರ್ಥಕ್ಕೆ ನಶಿಸಿ ಹೋಗುತ್ತಿದ್ದೆ ಭೂಮಿ ತಾಯಿಯ ಮಡಿಲು; ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಭೂಮಿ ತಾಯಿ ಮನುಷ್ಯ ಮಾತ್ರವಲ್ಲದೆ ಸಸ್ಯ ಸಂಕುಲ, ಪ್ರಾಣಿ ಸಂಕುಲ ಸೇರಿದಂತೆ ಅದೆಷ್ಟೋ ಜೀವ ಸಂಕುಲಗಳನ್ನು ತನ್ನ ಒಡಲಿನಲ್ಲಿಟ್ಟು ಸಾಕಿ ಸಲಹುತ್ತಿದ್ದಾಳೆ. ಆದರೆ ಇಂದು ಈ ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದ್ದೆ, ಅದೆಷ್ಟೋ ಜೀವ ಸಂಕುಲಗಳು ಅಳಿವಿನಂಚಿನಲ್ಲಿದೆ. ಈ ನಿಟ್ಟಿನಲ್ಲಿ ಪರಿಸರ ಮತ್ತು ಭೂಮಿಯನ್ನು ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್‌ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

World Earth Day 2025: ಮನುಷ್ಯನ ಸ್ವಾರ್ಥಕ್ಕೆ ನಶಿಸಿ ಹೋಗುತ್ತಿದ್ದೆ ಭೂಮಿ ತಾಯಿಯ ಮಡಿಲು; ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 22, 2025 | 9:29 AM

ಭೂಮಿ ತಾಯಿ ಮನುಷ್ಯರು, ಪ್ರಾಣಿ-ಪಕ್ಷಿಗಳು, ಮರ ಗಿಡಗಳು ಸೇರಿದಂತೆ ಜಗತ್ತಿನ ಅಷ್ಟೂ ಜೀವ ಸಂಕುಲಗಳಿಗೂ ಆಶ್ರಯದಾತೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಭೂಮಿ (Earth) ತನ್ನ ಸಮತೋಲನ, ಅಸ್ತಿತ್ವವನ್ನು ಕಳೆದುಕೊಂಡು ವಿನಾಶದತ್ತ ಹೆಜ್ಜೆ ಹಾಕುತ್ತಿದೆ.   ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ, ಜಾಗತಿಕ ತಾಪಮಾನ ಏರಿಕೆ, ಶಾಖ ಹೆಚ್ಚಳ, ಪ್ರವಾಹ ಮತ್ತು ಕಾಡ್ಗಿಚ್ಚಿನಂತಹ  ಸಮಸ್ಯೆಗಳು ತೀರಾ ಹೆಚ್ಚಾಗಿದ್ದು, 2030 ರ ವೇಳೆಗೆ ನಾವು ಪರಿಸರ ಮಾಲಿನ್ಯವನ್ನು ಕಡಿಮೆ ಮಾಡದಿದ್ದರೆ, ಭೂಮಿಯ ಉಷ್ಣತೆ ಬಹಳಷ್ಟು ಹೆಚ್ಚಾಗಿ ಇದರಿಂದ ಬಹಳಷ್ಟು ಹಾನಿಗಳಾಗುತ್ತವೆ ಎಂದ ವಿಶ್ವ ಸಂಸ್ಥೆಯ ವರದಿಯೊಂದು ತಿಳಿಸಿದೆ. ಈ ನಿಟ್ಟಿನಲ್ಲಿ ನಮ್ಮ ಮುಂದಿನ ಪೀಳಿಗೆಗಾಗಿ ಸಕಲ ಜೀವ ಸಂಕುಲಗಳ ಉಳಿವಿಗಾಗಿ ಪರಿಸರ ಮತ್ತು ಭೂಮಿಯನ್ನು ರಕ್ಷಿಸಬೇಕು ಎನ್ನುವ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್‌ 22 ರಂದು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದೇ ಏಕೆ ಭೂ ದಿನವನ್ನು ಆಚರಿಸಲಾಗುತ್ತದೆ, ಇದರ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿದುಕೊಳ್ಳಿ.

ಭೂ ದಿನದ ಆಚರಣೆ ಯಾವಾಗ ಪ್ರಾರಂಭವಾಯಿತು?

1969 ರಲ್ಲಿ ಯುನೆಸ್ಕೋ ಸಮ್ಮೇಳನದಲ್ಲಿ ಶಾಂತಿ ಕಾರ್ಯಕರ್ತ ಜಾನ್ ಮೆಕ್‌ಕಾನ್ನೆಲ್ ಮೊದಲು ಭೂ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮುಂದಿಟ್ಟರು. ನಂತರ 1970 ರಲ್ಲಿ ಅಮೆರಿಕದಲ್ಲಿ ಭೂ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು.  ಆ ಸಮಯದಲ್ಲಿ ಮಾಲಿನ್ಯದ ಸಮಸ್ಯೆ ಅಲ್ಲಿ ತುಂಬಾ ಹೆಚ್ಚಾಗಿದ್ದ ಕಾರಣ, ಹಾಗೂ  1969 ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ತೈಲ ಸೋರಿಕೆ ಘಟನೆ ನಂತರ ಯುಎಸ್ ಸೆನೆಟರ್ ಗೇಲಾರ್ಡ್ ನೆಲ್ಸನ್ ಪರಿಸರವನ್ನು ಉಳಿಸಲು ಒಂದು ಚಳುವಳಿಯನ್ನು ಪ್ರಾರಂಭಿಸಿದರು. ಇದರಲ್ಲಿ 20 ದಶಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಜನರು ರ್ಯಾಲಿಗಳನ್ನು ನಡೆಸಿ ಮಾಲಿನ್ಯದ ವಿರುದ್ಧ ಧ್ವನಿ ಎತ್ತಿದರು. ಈ ಆಂದೋಲನದ ಕಾರಣದಿಂದಾಗಿ, ಅಮೆರಿಕದಲ್ಲಿ ಪರಿಸರ ಸಂರಕ್ಷಣಾ ಸಂಸ್ಥೆ (ಇಪಿಎ) ರಚನೆಯಾಯಿತು ಮತ್ತು ಮಾಲಿನ್ಯವನ್ನು ತಡೆಯಲು ಹೊಸ ಕಾನೂನುಗಳನ್ನು ರೂಪಿಸಲಾಯಿತು. 1990 ರ ಹೊತ್ತಿಗೆ, ಈ ದಿನವನ್ನು ಪ್ರಪಂಚದಾದ್ಯಂತ ಆಚರಿಸಲು ಪ್ರಾರಂಭಿಸಲಾಯಿತು. ಅಂದಿನಿಂದ ಪ್ರತಿವರ್ಷ ವಿಶ್ವ ಭೂ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.  ನಂತರ 2016 ರಲ್ಲಿ, ಭೂ ದಿನವನ್ನು ಹವಾಮಾನ ಸಂರಕ್ಷಣೆಗೆ ಮೀಸಲಿಡಲಾಯಿತು.

ವಿಶ್ವ ಭೂ ದಿನದ ಮಹತ್ವ:

ನಗರೀಕರಣ, ಆಧುನೀಕರಣ ಸೇರಿದಂತೆ ಇಂದು ಮನುಷ್ಯನ ಸ್ವಾರ್ಥಕ್ಕೆ ಹವಾಮಾನ ಬದಲಾವಣೆ, ಜೀವ ಸಂಕುಲಗಳ ನಾಶ, ಮಾಲಿನ್ಯ ಮತ್ತು ಅರಣ್ಯನಾಶ ಸೇರಿದಂತೆ ಇಡೀ ಪರಿಸರವೇ ನಾಶವಾಗುತ್ತಿದೆ. ಇವುಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮುಂದಿನ ಪೀಳಿಗೆಗಾಗಿ ಸುಸ್ಥಿರ ಪರಿಸರವನ್ನು ನಿರ್ಮಿಸಲು ಜನರಿಗೆ ಶಿಕ್ಷಣ ನೀಡಲು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಗಿಡ ನೆಡುವುದು, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.  ಭೂ ದಿನವು ಕೇವಲ ಒಂದು ಆಚರಣೆಯಲ್ಲ, ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಇದನ್ನೂ ಓದಿ
Image
ಬೇಸಿಗೆಯಲ್ಲಿ ಹಸಿ ಮಾವು ತಿನ್ಬೇಕಂತೆ; ಯಾಕೆ ಗೊತ್ತಾ?
Image
ಯುವಕರೇ ಕೆಲಸದ ಸ್ಥಳದಲ್ಲಿ ಗಂಟೆಗಟ್ಟಲೆ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೀರಾ?
Image
Brain teaser: ಬುದ್ದಿವಂತರು ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯ
Image
ಬೆಂಗಳೂರಿನಲ್ಲಿ ಆರಾಮ ಜೀವನ ನಡೆಸಲು ಯುವಕನ ಪ್ಲಾನಿಂಗ್‌ ಹೇಗಿದೆ ನೋಡಿ

ಇದನ್ನೂ ಓದಿ: ಯುವಕರೇ ಕೆಲಸದ ಸ್ಥಳದಲ್ಲಿ ಗಂಟೆಗಟ್ಟಲೆ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೀರಾ? ಈ ಕಾಯಿಲೆ ಬರುವುದು ಖಂಡಿತ

 ಭೂ ದಿನದ ಈ ವರ್ಷದ ಥೀಮ್:

ಪ್ರತಿ ವರ್ಷ ವಿವಿಧ ಥೀಮ್‌ಗಳೊಂದಿಗೆ ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. 2025 ರ ಭೂ ದಿನದ ಥೀಮ್ ” ನಮ್ಮ ಶಕ್ತಿ, ನಮ್ಮ ಭೂಮಿ” (OUR POWER, OUR PLANET) ಈ ಧ್ಯೇಯವಾಕ್ಯವು ನವೀಕರಿಸಬಹುದಾದ ಶಕ್ತಿಯನ್ನು ಉತ್ತೇಜಿಸುವುದು ಮತ್ತು 2030 ರ ವೇಳೆಗೆ ಜಾಗತಿಕ ಶುದ್ಧ ವಿದ್ಯುತ್ ಉತ್ಪಾದನೆಯನ್ನು ಮೂರು ಪಟ್ಟು ಹೆಚ್ಚಿಸುವುವ ಗುರಿಯನ್ನು ಹೊಂದಿದೆ.

ಭೂ ದಿನವನ್ನು ಆಚರಿಸುವ ಮಾರ್ಗಗಳು:

ವಿಶ್ವ ಭೂ ದಿನದಂದು ಭೂಮಿಯ ಸಂರಕ್ಷಣೆಗೆ ನಿಮ್ಮ ಕೈಲಾದ ಕೊಡುಗೆಗಳನ್ನು ನೀಡಲು ನೀವು ಈ ರೀತಿ ಕೈ ಜೋಡಿಸಬಹುದು.

  • ಸ್ವಚ್ಛತಾ ಅಭಿಯಾನ: ನಿಮ್ಮ ನೆರೆಹೊರೆ, ಉದ್ಯಾನವನ, ಕಡಲತೀರ ಅಥವಾ ನದಿ ತೀರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡಿ.
  • ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ: ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ.
  • ಗಿಡ ಮರಗಳನ್ನು ನೆಡಿ:  ನಿಮ್ಮ ಸುತ್ತಮುತ್ತ ಗಿಡಗಳನ್ನು ನೆಡುವ ಮೂಲಕ ಭೂ ದಿನವನ್ನು ವಿಶೇಷವಾಗಿ ಆಚರಿಸಬಹುದು.
  • ಶಿಕ್ಷಣ ನೀಡಿ: ಹವಾಮಾನ ಬದಲಾವಣೆಯ ಬಗ್ಗೆ, ಪರಿಸರ ಸಂರಕ್ಷಣೆಯ ಬಗ್ಗೆ, ಸ್ವಚ್ಛತೆಯ ಬಗ್ಗೆ ಜನರಿಗೆ ತಿಳುವಳಿಕೆಯನ್ನು ಮೂಡಿಸಿ.
  • ಭೂ ದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ: ಈ ದಿನ ಅನೇಕ ಕಾರ್ಯಾಗಾರಗಳು, ಕಾರ್ಯಕ್ರಮಗಳು ಮತ್ತು ಪರಿಸರ ಚಟುವಟಿಕೆಗಳನ್ನು ವಿವಿಧ ಸಂಘಟನೆಗಳು ಆಯೋಜಿಸುತ್ತವೆ. ಅದರಲ್ಲಿ ಭಾಗವಹಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ