AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Environment Day 2025: ಹಸಿರೇ ಉಸಿರು; ಪ್ರಕೃತಿ ಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಹಸಿರೇ ಉಸಿರು ಅಂತ ಹೇಳ್ತಾರೆ. ಆದರೆ ಇಂದು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನೇ ನಾಶ ಮಾಡುತ್ತಿದ್ದಾನೆ. ಹೀಗಾಗಿ ಪ್ರಕೃತಿ ಮಾತೆಯ ರಕ್ಷಣೆ ಮಾಡಬೇಕು, ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಬೇಕು, ಗಿಡ-ಮರಗಳನ್ನು ನೆಟ್ಟು ಪರಿಸರವನ್ನು ಉಳಿಸಿ ಬೆಳೆಸಬೇಕು ಎಂಬ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 05 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಜೂನ್‌ 05 ರಂದೇ ಏಕೆ ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

World Environment Day 2025: ಹಸಿರೇ ಉಸಿರು; ಪ್ರಕೃತಿ ಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ
ವಿಶ್ವ ಪರಿಸರ ದಿನಾಚರಣೆImage Credit source: Google
ಮಾಲಾಶ್ರೀ ಅಂಚನ್​
|

Updated on: Jun 05, 2025 | 9:12 AM

Share

ಪ್ರಕೃತಿ ಸಕಲ ಜೀವ ರಾಶಿಗಳನ್ನು ತನ್ನ ಮಡಿಲಲ್ಲಿ ಹೊತ್ತು ಸಲಹುತ್ತಿದೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಪ್ರಕೃತಿಯ ಮಡಿಲು ಬರಿದಾಗುತ್ತಿದೆ. ಹೌದು ಅಭಿವೃದ್ಧಿ, ನಗರೀಕರಣ ಅಂತೆಲ್ಲಾ ಮನುಷ್ಯನ ಸ್ವಾರ್ಥಕ್ಕೆ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ, ಅದೆಷ್ಟೋ ಜೀವ ಸಂಕುಲಗಳು, ಮರಗಿಡಗಳ ಪ್ರಬೇಧಗಳು ಅಳಿವಿನಂಚಿಗೆ ತಲುಪಿವೆ. ಅರಣ್ಯ ನಾಶ, ಮಾಲಿನ್ಯಗಳ ಕಾರಣದಿಂದಾಗಿ ಪರಿಸರ ಮಾಲಿನ್ಯವಾಗುತ್ತಿದೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಹಾಗೂ ಪರಿಸರವನ್ನು ಉಳಿಸಬೇಕು ಗಿಡ-ಮರಗಳನ್ನು ಬೆಳೆಸಬೇಕು ಎಂಬ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 05 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ.

ಜೂನ್‌ 05 ರಂದೇ ಏಕೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ?

1972 ರಲ್ಲಿ ಈ ದಿನದಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಸ್ಟಾಕ್‌ಹೋಮ್ ಸಮ್ಮೇಳನ ಎಂದು ಕರೆಯಲ್ಪಡುವ ಪರಿಸರ ಸಂರಕ್ಷಣೆಯ ಕುರಿತಾದ ಮೊದಲ ಜಾಗತಿಕ ಶೃಂಗಸಭೆಯನ್ನು ಆಯೋಜಿಸಿದ್ದರಿಂದ ಜೂನ್ 5 ರಂದು ವಿಶ್ವ ಪರಿಸರ ದಿನವೆಂದು ಆಯ್ಕೆ ಮಾಡಲಾಯಿತು. ಅನೇಕ ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಪರಿಸರ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿದವು. ಇದರ ನಂತರ, ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ಅನ್ನು ಸ್ಥಾಪಿಸಲಾಯಿತು ಮತ್ತು ಜೂನ್ 5 ಅನ್ನು ವಿಶ್ವ ಪರಿಸರ ದಿನವೆಂದು ಘೋಷಿಸಲಾಯಿತು.

ವಿಶ್ವ ಪರಿಸರ ದಿನದ ಇತಿಹಾಸ:

ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜಾಗತಿಕ ಮಟ್ಟದಲ್ಲಿ ಆಚರಿಸಲಾಗುತ್ತದೆ. ಇದನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು  1972 ರಲ್ಲಿ ಪ್ರಾರಂಭಿಸಿತು. 1972 ರಲ್ಲಿ, ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಮಾನವ ಪರಿಸರದ ಕುರಿತಾದ ಸ್ಟಾಕ್‌ಹೋಮ್ ಸಮ್ಮೇಳನವನ್ನು ಆಯೋಜಿಸಲಾಯಿತು. ಈ ಸಮ್ಮೇಳನದಲ್ಲಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 5 ಅನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲು ಘೋಷಿಸಿತು. ಈ ದಿನವನ್ನು ಮೊದಲ ಬಾರಿಗೆ 1973 ರಲ್ಲಿ ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ
Image
ಪರಿಸರ, ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ ಸೈಕಲ್‌ ಸವಾರಿ
Image
ಪೋಷಕರ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲಾಗದು
Image
ವಿಶ್ವ ಹಾಲು ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?
Image
ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?

ವಿಶ್ವ ಪರಿಸರ ದಿನದ ಮಹತ್ವ:

ಇಂದಿನ ಜಗತ್ತಿನಲ್ಲಿ, ಹೆಚ್ಚುತ್ತಿರುವ ಮಾಲಿನ್ಯ, ಪ್ಲಾಸ್ಟಿಕ್ ಬಳಕೆ, ಅರಣ್ಯನಾಶ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಪರಿಸರವನ್ನು ರಕ್ಷಿಸುವುದು ಎಷ್ಟು ಮುಖ್ಯವೆಂದು ತಿಳಿಸಲು ಈ ದಿನವನ್ನು ಆಚರಿಸುವುದು ಬಹಳ ಮುಖ್ಯವಾಗಿದೆ.  ಈ ವಿಶೇಷ ದಿನದಂದು, ಪ್ರಪಂಚದಾದ್ಯಂತದ ಜನರು ಒಗ್ಗೂಡಿ ಪರಿಸರವನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತಾರೆ. ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ.

ಇದನ್ನೂ ಓದಿ: ಪರಿಸರ, ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ ಸೈಕಲ್‌ ಸವಾರಿ; ವಿಶ್ವ ಬೈಸಿಕಲ್‌ ದಿನದ ಮಹತ್ವ ತಿಳಿಯಿರಿ

ವಿಶ್ವ ಪರಿಸರ ದಿನದ ಈ ವರ್ಷದ ಥೀಮ್:

ಪ್ರತಿ ವರ್ಷವೂ ಒಂದು ನಿರ್ದಿಷ್ಟ ಥೀಮ್‌ ಇಟ್ಟುಕೊಂಡು ಪರಿಸರ ದಿನವನ್ನು ಆಚರಿಸಲಾಗುತ್ತದೆ.  ಈ ವರ್ಷದ ಥೀಮ್ “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗಳಿಸುವುದು” (Ending Plastic Pollution).

ಪರಿಸರ ರಕ್ಷಣೆಗೆ ನಾವು ಏನು ಮಾಡಬಹುದು?

  • ಪ್ಲಾಸ್ಟಿಕ್ ಪಾಲಿಥಿನ್ ಬದಲಿಗೆ ಬಟ್ಟೆ ಚೀಲಗಳನ್ನು ಬಳಸುವುದು
  • ಅನಗತ್ಯವಾಗಿ ನೀರು ಮತ್ತು ವಿದ್ಯುತ್ ವ್ಯರ್ಥ ಮಾಡದಿರುವುದು.
  • ಸಾಧ್ಯವಾದಷ್ಟು ಗಿಡಗಳನ್ನು ನೆಟ್ಟು ಇತರರನ್ನು ಇತರರಿಗೂ ಗಿಡ ನೆಡಲು  ಪ್ರೇರೇಪಿಸುವುದು.
  • ಅಲ್ಲಲ್ಲಿ ಕಸಗಳನ್ನು ಎಸೆಯದಿರುವುದು.
  • ಸಾಮಾಜಿಕ ಮಾಧ್ಯಮಗಳ ಮೂಲಕವೂ ಪರಿಸರ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್