World First Aid Day 2024: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?

ಯಾವುದೇ ವ್ಯಕ್ತಿಗೆ ಗಾಯ ಅಥವಾ ನೋವು ಉಂಟಾದಾಗ ಮೊದಲು ನೀಡುವ ಚಿಕಿತ್ಸೆಯೇ ಈ ಪ್ರಥಮ ಚಿಕಿತ್ಸೆಯಾಗಿರುತ್ತದೆ. ಜನರಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದಾಗಿ ಪ್ರತಿ ವರ್ಷ ಸೆಪ್ಟೆಂಬರ್‌ನ ಎರಡನೇ ಶನಿವಾರದಂದು ವಿಶ್ವದಾದ್ಯಂತ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ 14 ರಂದು ಆಚರಿಸಲಾಗುತ್ತಿದ್ದು, ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಹಾಗೂ ಒಬ್ಬ ವ್ಯಕ್ತಿಯು ಯಾವ ಸಂದರ್ಭದಲ್ಲಿ ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬಹುದು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

World First Aid Day 2024: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?
ಸಾಂದರ್ಭಿಕ ಚಿತ್ರ (ಟಿವಿ9 ಕನ್ನಡ )
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 14, 2024 | 9:35 AM

ಸಾಮಾನ್ಯವಾಗಿ ಯಾವುದೇ ಸಂದರ್ಭವಾಗಿರಲಿ ರೋಗಿಗಳಿಗೆ ತಕ್ಷಣಕ್ಕೆ ನೀಡುವ ಚಿಕಿತ್ಸೆಯಾಗಿದೆ. ಎಷ್ಟೋ ಬಾರಿ ಈ ಪ್ರಥಮ ಚಿಕಿತ್ಸೆ ರೋಗಿಗಳ ಜೀವ ಉಳಿದಿದೆ. ಈ ಪ್ರಥಮ ಚಿಕಿತ್ಸೆಯು ಆ ಕ್ಷಣಕ್ಕೆ ನೋವು ಕಡಿಮೆ ಮಾಡಲು ಹಾಗೂ ಜೀವಕ್ಕೆ ಹಾನಿಯಾಗುವುದನ್ನು ತಪ್ಪಿಸುತ್ತದೆ. ಇದರಿಂದ ವ್ಯಕ್ತಿಯು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳಲು ಸಾಧ್ಯ. ಪ್ರಥಮ ಚಿಕಿತ್ಸೆಯು ವಿಶೇಷವಾಗಿ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಹೆಚ್ಚು ಜೀವಗಳನ್ನು ಉಳಿಸಲು ನೆರವಾಗುತ್ತದೆ. ಹೀಗಾಗಿ ತುರ್ತು ಸಂದರ್ಭದಲ್ಲಿ ನೀಡುವ ಪ್ರಥಮ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪ್ರಥಮ ಚಿಕಿತ್ಸಾ ದಿನದ ಇತಿಹಾಸ

1859ರ ಸೋಲ್ಪೆರಿನೊ ಕದನದ ಸಮಯದಲ್ಲಿ ಯುವ ಉದ್ಯಮಿ ಹೆನ್ರಿ ಡ್ಯುನಾಂಟ್‌ ಸಾಮೂಹಿಕ ಹತ್ಯಾಕಾಂಡದಲ್ಲಿ ಗಾಯಗೊಂಡ ಹಲವರಿಗೆ ಸುಧಾರಿಸಿಕೊಳ್ಳಲು ಸಹಾಯ ಮಾಡಿದರು. ಈ ಘಟನೆಯಿಂದಾಗಿ ಎ ಮೆಮೊರಿ ಆಫ್ ಸೋಲ್ಫೆರಿನೊ ಎಂಬ ಪುಸ್ತಕವನ್ನು ಬರೆದರು. ಇದರಲ್ಲಿ ಅವರು ತಮ್ಮ ಅನುಭವಗಳ ಬಗ್ಗೆ ಹಂಚಿಕೊಂಡರು. ತದನಂತರದಲ್ಲಿ ಹೆನ್ರಿ ಡ್ಯೂನಾಂಟ್ ಇಂಟರ್ನ್ಯಾಷನಲ್ ಕಮಿಟಿ ಆಫ್ ರೆಡ್ ಕ್ರಾಸ್ ಅನ್ನು ಸ್ಥಾಪಿಸಿದರು. ಇದೊಂದು ಪ್ರಥಮ ಚಿಕಿತ್ಸಾ ಆರೈಕೆಯನ್ನು ಒದಗಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಮೀಸಲಾಗಿರುವ ಸಂಸ್ಥೆಯಾಗಿದ್ದು, 2000 ರಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸುವುದಾಗಿ ಈ ಸಂಸ್ಥೆಯು ಘೋಷಿಸಿತು. ಅಂದಿನಿಂದ, ಸೆಪ್ಟೆಂಬರ್ ತಿಂಗಳ ಎರಡನೇ ಶನಿವಾರದಂದು ಈ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪ್ರಥಮ ಚಿಕಿತ್ಸಾ ದಿನದ ಮಹತ್ವ ಹಾಗೂ ಆಚರಣೆ

ಪ್ರಥಮ ಚಿಕಿತ್ಸಾ ಆರೈಕೆಯ ಮಹತ್ವ ಮತ್ತು ಮಾನವನ ಜೀವವನ್ನು ಹೇಗೆ ಉಳಿಸಬಹುದು ಎಂಬುದರ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ದಿನದಂದು ಶಾಲಾ ಕಾಲೇಜುಗಳು ಸೇರಿದಂತೆ ರೆಡ್ ಕ್ರಾಸ್ ನಂತಹ ಸಂಸ್ಥೆಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ವ್ಯಕ್ತಿಗೆ ಯಾವಾಗ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ?

  • ಅಪಘಾತಗಳಾಗಿ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ ತೀವ್ರ ರಕ್ತಸ್ರಾವವಾಗುತ್ತಿದ್ದಾಗ ಅಥವಾ ಕೈ ಕಾಲುಗಳು ಮುರಿದಿದ್ದಾಗ
  • ವ್ಯಕ್ತಿಯು ನೀರಿನಲ್ಲಿ ಮುಳುಗಿ ಉಸಿರಾಡದಿದ್ದಾಗ, ಕರೆಂಟ್ ಶಾಕ್ ಹೊಡೆದಾಗ ತಕ್ಷಣವೇ ಪ್ರಥಮ ಚಿಕಿತ್ಸೆಯ ಅಗತ್ಯವಿರುತ್ತದೆ.
  • ಹಾವು ಅಥವಾ ಇನ್ನಾವುದೇ ವಿಷ ಜಂತುಗಳು ಕಚ್ಚಿದಾಗ ತುರ್ತು ಪ್ರಥಮ ಚಿಕಿತ್ಸೆ ಅತ್ಯಗತ್ಯವಾಗಿರುತ್ತದೆ.
  • ಎತ್ತರದ ಕಟ್ಟಡಗಳಿಂದ ಕಾಲು ಜಾರಿ ಬಿದ್ದಾಗ, ಮಧುಮೇಹಿ ರೋಗಿಗಳು ಗ್ಲುಕೋಸ್ ಮಟ್ಟ ಕುಸಿದು ಉಸಿರಾಡದೇ ಇದ್ದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವುದು ಅಗತ್ಯ.

ಇದನ್ನೂ ಓದಿ: ಮಹಿಳೆಯರೇ, ಕ್ಯಾಬ್ ನಲ್ಲಿ ಓಡಾಡುವಾಗ ನಿಮ್ಮ ಸುರಕ್ಷತೆಯನ್ನು ಹೇಗೆ ಮಾಡಿಕೊಳ್ಳಬಹುದು? ಇಲ್ಲಿದೆ ಸಲಹೆಗಳು

ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಪ್ರಥಮ ಚಿಕಿತ್ಸೆಯನ್ನು ನೀಡುವುದು ಹೇಗೆ?

  • ಗಾಯಗೊಂಡ ವ್ಯಕ್ತಿಯಿಂದ ತೀವ್ರ ರಕ್ತಸ್ರಾವವಾಗುತ್ತಿದ್ದಲ್ಲಿ ಒತ್ತಡ ಹಾಕಿ ಅಥವಾ ಬಟ್ಟೆಯಿಂದ ಗಾಯವನ್ನು ಸುತ್ತಿ ರಕ್ತಸ್ರಾವವಾಗದಂತೆ ತಡೆಯಬಹುದು.
  • ವಿಷಜಂತು ಹಾಗೂ ಹಾವು ಕಚ್ಚಿದಲ್ಲಿ ಗಾಯದ ಮೇಲ್ಬಾಗದಲ್ಲಿ ಬಟ್ಟೆ ಕಟ್ಟಿ ವಿಷವು ರಕ್ತಕ್ಕೆ ಸೇರದಂತೆ ತಡೆಯುವುದು ಮುಖ್ಯ.
  • ಗಾಯಗೊಂಡ ವ್ಯಕ್ತಿಯ ಎಲುಬು ಮುರಿತವಾಗಿದ್ದಲ್ಲಿ ಬ್ಯಾಂಡೇಜ್ ಹಾಕಿ ನೋವನ್ನು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಮಾಡಬಹುದು.
  • ಮಕ್ಕಳು ಚೂರಿ, ಪೆನ್ಸಿಲ್, ನಾಣ್ಯ, ರಬ್ಬರ್ ಮುಂತಾದ ವಸ್ತುಗಳನ್ನು ಬಾಯಿಗೆ ಹಾಕಿ ಗಂಟಲಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಲ್ಲಿ ತಕ್ಷಣವೇ ತಲೆಕೆಳಗೆ ಮಾಡಿ ಬೆನ್ನಿಗೆ ಬಡಿಯುವುದರಿಂದ ಆ ವಸ್ತುವು ಹೊರಗೆ ಬರುವ ಸಾಧ್ಯತೆಯೇ ಹೆಚ್ಚು. ಇನ್ನು ಉಸಿರಾಟದ ತೊಂದರೆಯಾಗದಂತೆ ತಡೆಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್