
ಆಹಾರ (Food)ಮಾನವನ ಮೂಲಭೂ ಹಕ್ಕುಗಳಲ್ಲಿ ಒಂದು. ಇದಿಲ್ಲದೆ ಮನುಷ್ಯ ಮಾತ್ರವಲ್ಲ ಭೂಮಿಯ ಮೇಲಿನ ಯಾವ ಜೀವಿಯೂ ಬದುಕುವುದು ಕಷ್ಟ. ಅದಕ್ಕಾಗಿ ಆಹಾರವನ್ನು ವ್ಯರ್ಥ ಮಾಡಬಾರದು ಅನ್ನೋದು. ಹೀಗಿದ್ರೂ ಅದೆಷ್ಟೋ ಜನರು ಊಟವನ್ನು ವ್ಯರ್ಥ ಮಾಡುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ ಜಗತ್ತಿನಾದ್ಯಂತ ಪ್ರತಿನಿತ್ಯ 1 ಬಿಲಿಯನ್‌ಗೂ ಹೆಚ್ಚು ಊಟ ವ್ಯರ್ಥವಾಗುತ್ತಿದೆಯಂತೆ. ಅದೇ ರೀತಿ ಜಗತ್ತಿನ ಮೂರನೇ ಒಂದು ಭಾಗದಷ್ಟು ಜನರು ಆಹಾರ ಅಭದ್ರತೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಒಪ್ಪೊತ್ತಿನ ಊಟ ಸಿಗದೆ ಹಸಿವಿನಿಂದ ದಿನ ದೂಡುತ್ತಿದ್ದಾರೆ, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಹಾರ ಸಮಸ್ಯೆಯ ಕುರಿತು ಜಾಗೃತಿ ಮೂಡಿಸಲು ಆಹಾರದ ಮಹತ್ವದ ಬಗ್ಗೆ ಜನರಿಗೆ ತಿಳಿಸಲು ಜಾಗತಿಕ ಮಟ್ಟದಲ್ಲಿ ಪ್ರತಿವರ್ಷ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನವನ್ನು (World Food Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
1945 ರಲ್ಲಿ, ರೋಮ್‌ನಲ್ಲಿ, ಆಹಾರ ಮತ್ತು ಕೃಷಿ ಸಂಸ್ಥೆ (FAO) ಸ್ಥಾಪನೆಯಾಯಿತು. ಇದು ಪ್ರಪಂಚದಾದ್ಯಂತ ಹಸಿವು ಮತ್ತು ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಮೂಸಲಾಗಿರುವ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆಯ ನೆನಪಿಗಾಗಿ 1981 ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (FAO) 20 ನೇ ಸಾಮಾನ್ಯ ಸಮ್ಮೇಳನದಲ್ಲಿ ವಿಶ್ವ ಆಹಾರ ದಿನವನ್ನು ಆಚರಿಸುವುದಾಗಿ ಘೋಷಿಸಲಾಯಿತು. ಅಂದಿನಿಂದ ಪ್ರತಿವರ್ಷ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಈ ದಿನವು, ಆಹಾರವು ನಮ್ಮ ಹೊಟ್ಟೆಯನ್ನು ತುಂಬುವ ಸಾಧನವಲ್ಲ, ಬದಲಾಗಿ ಆರೋಗ್ಯಕರ ಜೀವನ ಮತ್ತು ಉತ್ತಮ ಭವಿಷ್ಯದ ಅಡಿಪಾಯವಾಗಿದೆ ಎಂಬುದನ್ನು ನೆನಪಿಸುತ್ತದೆ.
ಇದನ್ನೂ ಓದಿ: ಸರಿಯಾರ ರೀತಿಯಲ್ಲಿ ಕೈ ತೊಳೆಯಿರಿ, ರೋಗ ರುಜಿನಗಳಿಂದ ದೂರವಿರಿ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ