World Food Safety Day 2022:ವಿಶ್ವ ಆಹಾರ ಭದ್ರತಾ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವ

World Food Safety Day 2022: ನಿತ್ಯದ ಅವಶ್ಯಕತೆಗಳಲ್ಲಿ ಆಹಾರ ಪ್ರಮುಖ ಪಾತ್ರವಹಿಸುತ್ತದೆ. ಹಾಗೆಯೇ ಪೌಷ್ಠಿಕ ಆಹಾರ ಸೇವನೆಯಿಂದ ಸದೃಢ ದೇಹ ನಮ್ಮದಾಗುತ್ತದೆ. ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಭದ್ರತಾ ದಿನವನ್ನು ಆಚರಿಸಲಾಗುತ್ತದೆ.

World Food Safety Day 2022:ವಿಶ್ವ ಆಹಾರ ಭದ್ರತಾ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವ
Food
Follow us
TV9 Web
| Updated By: ನಯನಾ ರಾಜೀವ್

Updated on:Jun 06, 2022 | 3:21 PM

ನಿತ್ಯದ ಅವಶ್ಯಕತೆಗಳಲ್ಲಿ ಆಹಾರ ಪ್ರಮುಖ ಪಾತ್ರವಹಿಸುತ್ತದೆ. ಹಾಗೆಯೇ ಪೌಷ್ಠಿಕ ಆಹಾರ ಸೇವನೆಯಿಂದ ಸದೃಢ ದೇಹ ನಮ್ಮದಾಗುತ್ತದೆ. ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಭದ್ರತಾ ದಿನವನ್ನು ಆಚರಿಸಲಾಗುತ್ತದೆ. ಆಹಾರವು ನಮ್ಮ ದೇಹದಲ್ಲಿನ ಶಕ್ತಿಯ ವೇಗವರ್ಧಕವಾಗಿದೆ. ಆಹಾರವು ನಮ್ಮ ದೇಹದ ಬೆಳವಣಿಗೆಗೆ ಎಲ್ಲಾ ಅಗತ್ಯ ಪೋಷಕಾಂಶಗಳು, ಕಾರ್ಬೋಹೈಡ್ರೇಟ್‌ಗಳು, ಕೊಬ್ಬುಗಳು ಮತ್ತು ಪ್ರೋಟೀನ್‌ಗಳನ್ನು ಒದಗಿಸುತ್ತದೆ.

ಈ ದಿನದಂದು ಆಹಾರದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು, ಪತ್ತೆಹಚ್ಚಲು ಮತ್ತು ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಪ್ರತಿಯೊಬ್ಬ ಮನುಷ್ಯನೂ ಭೂಮಿಯ ಮೇಲೆ ತನ್ನ ಅಸ್ತಿತ್ವಕ್ಕಾಗಿ ಆಹಾರ (ನೀರು ಸೇರಿದಂತೆ), ಗಾಳಿ ಮತ್ತು ಬಟ್ಟೆಯ ಮೇಲೆ ಅವಲಂಬನೆಯನ್ನು ಹೊಂದಿರುತ್ತಾನೆ.

ವಿಶ್ವ ಆಹಾರ ಸುರಕ್ಷತಾ ದಿನ 2022: ಥೀಮ್

2022ರ ವಿಶ್ವ ಆಹಾರ ಸುರಕ್ಷತಾ ದಿನದ ಥೀಮ್ ಆರೋಗ್ಯಕರ ನಾಳೆಗಾಗಿ ಇಂದು ಸುರಕ್ಷಿತ ಆಹಾರ. ಸುರಕ್ಷಿತ ಆಹಾರವನ್ನು ಉತ್ಪಾದಿಸುವುದು ಮತ್ತು ಸೇವಿಸುವತ್ತ ಗಮನಹರಿಸುವುದು ಈ ವರ್ಷದ ವಿಷಯವಾಗಿದೆ. ಸುರಕ್ಷಿತ ಆಹಾರವನ್ನು ಸೇವಿಸುವುದರಿಂದ ಮನುಷ್ಯನಿಗೆ ದೀರ್ಘಕಾಲದ ಆರೋಗ್ಯ ಲಭಿಸುತ್ತದೆ.

ಇದರಿಂದ ಮನುಷ್ಯನು ಪ್ರಾಣಿಗಳು, ಸಸ್ಯಗಳು, ಪರಿಸರ ಮತ್ತು ಆರ್ಥಿಕತೆಯ ನಡುವೆ ವ್ಯವಸ್ಥಿತ ಸಂಪರ್ಕವನ್ನು ರೂಪಿಸುವಲ್ಲಿ ಮುಂದಾಗುತ್ತಾನೆ. ಹಾಗಾಗಿ ಇದು ಭವಿಷ್ಯದ ಅಗತ್ಯಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ.

ವಿಶ್ವ ಆಹಾರ ಭದ್ರತಾ ದಿನ 2022: ಇತಿಹಾಸ ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯೂಎಚ್​ಒ)) 5 ವರ್ಷದೊಳಗಿನ ಮಕ್ಕಳು ಮತ್ತು ಕಡಿಮೆ ಆದಾಯವನ್ನು ಹೊಂದಿರುವ ದೇಶಗಳಲ್ಲಿ ವಾಸಿಸುವ ವ್ಯಕ್ತಿಗಳಲ್ಲಿ ಹರಡುತ್ತಿರುವ ಆಹಾರ ಸಮಸ್ಯೆಗಳನ್ನು ಗುರುತಿಸುತ್ತದೆ. ಹಾಗಾಗಿ 2018ರಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಭದ್ರತಾ ದಿನವೆಂದು ಘೋಷಿಸಲಾಗುತ್ತದೆ.

ವಿಶ್ವ ಆರೋಗ್ಯ ಅಸೆಂಬ್ಲಿಯು ಆಹಾರದಿಂದ ಹರಡುವ ರೋಗದ ಹೊರೆ ಕಡಿಮೆ ಮಾಡಲು ಆಹಾರ ಸುರಕ್ಷತೆಗಾಗಿ ಜಾಗತಿಕ ಪ್ರಯತ್ನಗಳನ್ನು ಬಲಪಡಿಸುವ ನಿರ್ಣಯವನ್ನು ಅಂಗೀಕರಿಸಿತು.

ಡಬ್ಲ್ಯುಎಚ್‌ಒ ಹಾಗೂ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) ಜಂಟಿಯಾಗಿ ಸದಸ್ಯ ರಾಷ್ಟ್ರಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲು ಅನುಕೂಲ ಮಾಡಿಕೊಡುತ್ತವೆ.

ವಿಶ್ವ ಆಹಾರ ಭದ್ರತಾ ದಿನ 2022: ದಿನಾಂಕ ಆಹಾರ ಮತ್ತು ನೀರಿನ ಮಾಲಿನ್ಯದ ಬಗ್ಗೆ ಜಾಗತಿಕವಾಗಿ ಗಮನ ಸೆಳೆಯಲು ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಇಂದು ವಿಶ್ವ ಆಹಾರ ಭದ್ರತಾ ದಿನದ (ಡಬ್ಲ್ಯುಎಫ್‌ಎಸ್‌ಡಿ) ಮೂರನೇ ವಾರ್ಷಿಕೋತ್ಸವವಾಗಿದೆ. ಈ ದಿನ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕವಾಗಿ ಆಹಾರದಿಂದ ಹರಡುವ ರೋಗವನ್ನು ಕಡಿಮೆ ಮಾಡುವ ಪ್ರಯತ್ನಗಳನ್ನು ಮಾಡಲು ಪ್ರಯತ್ನಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Mon, 6 June 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್