AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ

ಸುರಕ್ಷಿತ ಆಹಾರವು ಆರೋಗ್ಯಕರ ಜೀವನದ ಅಡಿಪಾಯವಾಗಿದೆ. ಅದರಲ್ಲೂ ಆರೋಗ್ಯಕರ, ಪೌಷ್ಟಿಕಾಂಶಯುಕ್ತ, ಕಲ್ಮಶ ರಾಸಾಯನಿಕ ಪದಾರ್ಥಗಳಿಂದ ಮುಕ್ತವಾಗಿರುವ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ತಿನ್ನುವ ಆಹಾರದಲ್ಲಿ ತೋರುವ ಸಣ್ಣ ಅಜಾಗರೂಕತೆಯೂ ಸಹ ನಮ್ಮ ಆರೋಗ್ಯಕ್ಕೆ ಮಾರಕವಾಗಿ ಪರಿಣಾಮಿಸಬಹುದು. ಹಾಗಾಗಿ ಸುರಕ್ಷಿತ ಆಹಾರ ಸೇವನೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 7 ರಂದು ವಿಶ್ವ ಅಹಾರ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ.

World Food Safety Day 2026: ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ಶುದ್ಧ, ಸುರಕ್ಷಿತ ಆಹಾರ
ವಿಶ್ವ ಆಹಾರ ಸುರಕ್ಷತಾ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jun 06, 2026 | 9:22 PM

Share

ನೀರು, ಗಾಳಿಯಂತೆ ನಮ್ಮ ಬದುಕಿಗೆ ಆಹಾರ (Food) ತುಂಬಾನೇ ಮುಖ್ಯ. ನಾವು ಆಹಾರವೇನೋ ಸೇವನೆ ಮಾಡುತ್ತೇವೆ. ಆದರೆ ಇಂದಿನ ದಿನಗಳಲ್ಲಿ ನಾವುಗಳು ಕಲ್ಮಶ, ರಾಸಯನಿಕಯುಕ್ತ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸೇವನೆ ಮಾಡುತ್ತಿದ್ದೇವೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆಹಾರದ ವಿಷಯದಲ್ಲಿ ನಾವು ತೋರುವ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಮಾರಕವಾಗಬಹುದು. ಹೌದು ಕಳಪೆ ಗುಣಮಟ್ಟದ ಆಹಾರ ಫುಡ್‌ ಪಾಯಿಸನ್‌, ಅತಿಸಾರ ಮತ್ತು ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು.  ಹಾಗಾಗಿ ಶುದ್ಧ ಮತ್ತು ಆರೋಗ್ಯಕರ ಆಹಾರದ ಮಹತ್ವವನ್ನು ಸಾರಲು, ಆರೋಗ್ಯಕರ ಆಹಾರ ಸೇವನೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯೇನು ಎಂಬುದನ್ನು ತಿಳಿಯೋಣ ಬನ್ನಿ.

ವಿಶ್ವ ಆಹಾರ ಸುರಕ್ಷತಾ ದಿನದ ಇತಿಹಾಸವೇನು?

ವಿಶ್ವ ಆಹಾರ ಸುರಕ್ಷತಾ ದಿನವನ್ನು ಮೊದಲು ಜೂನ್ 7, 2019 ರಂದು ಆಚರಿಸಲಾಯಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 2018 ರಲ್ಲಿ ನಿರ್ಣಯವನ್ನು ಅಂಗೀಕರಿಸುವ ಮೂಲಕ ಈ ದಿನವನ್ನು ಅಧಿಕೃತವಾಗಿ ಗುರುತಿಸಿತು. ಇದು ಜಾಗತಿಕವಾಗಿ ಆಹಾರ ಭದ್ರತೆಯನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಜಂಟಿ ಉಪಕ್ರಮವಾಗಿದೆ. 2019 ರಿಂದ ಈ ದಿನವನ್ನು  ಪ್ರತಿವರ್ಷ ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ

ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವವೇನು?

  • ಸುರಕ್ಷಿತ ಮತ್ತು ಸ್ವಚ್ಛ ಆಹಾರವು ನಮ್ಮ ಆರೋಗ್ಯ ಮತ್ತು ಜೀವನದ ಅಡಿಪಾಯ ಎಂದು ಈ ದಿನ ನಮಗೆ ನೆನಪಿಸುತ್ತದೆ.
  • ವಿಶ್ವ ಆಹಾರ ಸುರಕ್ಷತಾ ದಿನದ ಉದ್ದೇಶ ಎಲ್ಲರಿಗೂ ಸುರಕ್ಷಿತ ಮತ್ತು ಪೌಷ್ಟಿಕ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳುವುದಾಗಿದೆ.
  • ಬ್ಯಾಕ್ಟೀರಿಯಾ, ವಿಷಕಾರಿ ವಸ್ತುಗಳು, ರಾಸಾಯನಿಕಗಳು ಅಥವಾ ಆಹಾರದಲ್ಲಿನ ಕಲ್ಮಶಗಳು ಫುಡ್‌ ಪಾಯಿಸನ್‌, ಅತಿಸಾರ ಮತ್ತು ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು. ಉತ್ಪಾದನೆಯಿಂದ ಬಳಕೆಯವರೆಗೆ ಆಹಾರ ಪ್ರಕ್ರಿಯೆಯ ಉದ್ದಕ್ಕೂ ನೈರ್ಮಲ್ಯ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಸರ್ಕಾರಗಳು, ಉತ್ಪಾದನಾ ಕಂಪನಿಗಳು, ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
  • ಈ ದಿನವು ಗ್ರಾಹಕರಿಗೆ ಆಹಾರವನ್ನು ಖರೀದಿಸುವಾಗ ಅಥವಾ ತಯಾರಿಸುವಾಗ ನೈರ್ಮಲ್ಯ ಮತ್ತು ಗುಣಮಟ್ಟಕ್ಕೆ ಗಮನ ಕೊಡಲು ಅರಿವು ಮೂಡಿಸುತ್ತದೆ.
  • ವಿಶ್ವ ಆಹಾರ ಸುರಕ್ಷತಾ ದಿನವು ಕೇವಲ ಜಾಗೃತಿಯ ದಿನವಲ್ಲ, ಬದಲಾಗಿ ನಮ್ಮ ಬಗ್ಗೆ, ನಮ್ಮ ಕುಟುಂಬಗಳ ಬಗ್ಗೆ ಮತ್ತು ನಮ್ಮ ಸಮಾಜಕ್ಕೆ ನಮ್ಮ ಜವಾಬ್ದಾರಿಯ ಜ್ಞಾಪನೆಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ