
ನೀರು, ಗಾಳಿಯಂತೆ ನಮ್ಮ ಬದುಕಿಗೆ ಆಹಾರ (Food) ತುಂಬಾನೇ ಮುಖ್ಯ. ನಾವು ಆಹಾರವೇನೋ ಸೇವನೆ ಮಾಡುತ್ತೇವೆ. ಆದರೆ ಇಂದಿನ ದಿನಗಳಲ್ಲಿ ನಾವುಗಳು ಕಲ್ಮಶ, ರಾಸಯನಿಕಯುಕ್ತ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸೇವನೆ ಮಾಡುತ್ತಿದ್ದೇವೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಆಹಾರದ ವಿಷಯದಲ್ಲಿ ನಾವು ತೋರುವ ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಮಾರಕವಾಗಬಹುದು. ಹೌದು ಕಳಪೆ ಗುಣಮಟ್ಟದ ಆಹಾರ ಫುಡ್ ಪಾಯಿಸನ್, ಅತಿಸಾರ ಮತ್ತು ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಶುದ್ಧ ಮತ್ತು ಆರೋಗ್ಯಕರ ಆಹಾರದ ಮಹತ್ವವನ್ನು ಸಾರಲು, ಆರೋಗ್ಯಕರ ಆಹಾರ ಸೇವನೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯೇನು ಎಂಬುದನ್ನು ತಿಳಿಯೋಣ ಬನ್ನಿ.
ವಿಶ್ವ ಆಹಾರ ಸುರಕ್ಷತಾ ದಿನವನ್ನು ಮೊದಲು ಜೂನ್ 7, 2019 ರಂದು ಆಚರಿಸಲಾಯಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 2018 ರಲ್ಲಿ ನಿರ್ಣಯವನ್ನು ಅಂಗೀಕರಿಸುವ ಮೂಲಕ ಈ ದಿನವನ್ನು ಅಧಿಕೃತವಾಗಿ ಗುರುತಿಸಿತು. ಇದು ಜಾಗತಿಕವಾಗಿ ಆಹಾರ ಭದ್ರತೆಯನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಜಂಟಿ ಉಪಕ್ರಮವಾಗಿದೆ. 2019 ರಿಂದ ಈ ದಿನವನ್ನು ಪ್ರತಿವರ್ಷ ಆಚರಿಸುತ್ತಾ ಬರಲಾಗುತ್ತಿದೆ.
ಇದನ್ನೂ ಓದಿ: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ