Sign In

By signing in or creating an account, you agree with Associated Broadcasting Company's Terms & Conditions and Privacy Policy.

World Health Day 2023: ವಿಶ್ವ ಆರೋಗ್ಯ ದಿನ 2023: ಇತಿಹಾಸ, ಮಹತ್ವ, ಮತ್ತು ಥೀಮ್ ಬಗ್ಗೆ ಇಲ್ಲಿದೆ ಮಾಹಿತಿ

ವಿಶ್ವ ಆರೋಗ್ಯ ದಿನ 2023: ಜೀವನದ ಗುಣಮಟ್ಟವನ್ನು ನಿರ್ಧರಿಸುವಲ್ಲಿ ಆರೋಗ್ಯವು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ವಿಶ್ವ ಆರೋಗ್ಯ ದಿನವು ವಿಶ್ವಾದ್ಯಂತ ಆಚರಿಸಲಾಗುತ್ತಿದ್ದು ಇನ್ನಷ್ಟು ತಿಳಿಯಬೇಕಾ? ಇಲ್ಲಿದೆ ಮಾಹಿತಿ.

World Health Day 2023: ವಿಶ್ವ ಆರೋಗ್ಯ ದಿನ 2023: ಇತಿಹಾಸ, ಮಹತ್ವ, ಮತ್ತು ಥೀಮ್ ಬಗ್ಗೆ ಇಲ್ಲಿದೆ ಮಾಹಿತಿ
World Health Day 2023
Follow us
ಪ್ರೀತಿ ಭಟ್​, ಗುಣವಂತೆ
| Updated By: Digi Tech Desk

Updated on:Apr 06, 2023 | 1:08 PM

ಪ್ರತಿ ವರ್ಷ, ಪ್ರಪಂಚದಾದ್ಯಂತ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನು (World Health Day 2023) ಆಚರಿಸಲಾಗುತ್ತದೆ. ಆರೋಗ್ಯ ಮತ್ತು ಸ್ವಾಸ್ಥ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಈ ವಿಶೇಷ ಸಂದರ್ಭವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನ ಮತ್ತು ಅದು ಹೇಗೆ ಹುಟ್ಟಿಕೊಂಡಿತು ಎಂಬುದರ ಕುರಿತು ಇಲ್ಲಿದೆ ಮಾಹಿತಿ. ವಿಶ್ವ ಆರೋಗ್ಯ ಸಂಸ್ಥೆ (World Health Organization) ಪ್ರಕಾರ ಆರೋಗ್ಯಕರವಾಗಿ ತಿನ್ನುವುದು ಮಾತ್ರವಲ್ಲ, ಪ್ರತಿಯೊಬ್ಬರೂ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ಸಹಾಯ ಮಾಡಲು ಜಗತ್ತು ಹೇಗೆ ಒಗ್ಗೂಡಬಹುದು ಎಂಬುದರ ಬಗ್ಗೆಯೂ ಸಹ. ಇದು ಹೊಸ ಸಂಶೋಧನೆಗಳು, ಹೊಸ ಔಷಧಗಳು ಮತ್ತು ಲಸಿಕೆಗಳನ್ನು ಮಾಡುವ ಮೂಲಕ ಆಗಿರಬಹುದು. ಈ ಚಿಂತನೆಯೊಂದಿಗೆ ಮತ್ತು ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆರೋಗ್ಯ ಮತ್ತು ಆರೋಗ್ಯ ಸೌಲಭ್ಯಗಳು ಎಲ್ಲರಿಗೂ, ಎಲ್ಲೆಡೆ ಲಭ್ಯವಾಗುವಂತೆ ಮಾಡಲು, WHO ಪ್ರತಿ ವರ್ಷ ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.

ವಿಶ್ವ ಆರೋಗ್ಯ ದಿನದ ಇತಿಹಾಸ

1948ರಲ್ಲಿ, ಆರೋಗ್ಯ ಮತ್ತು ಯೋಗಕ್ಷೇಮ ಜೀವನದ ಪ್ರಮುಖ ಅಂಶಗಳಲ್ಲಿ ಒಂದಾಗಿ ಉತ್ತೇಜಿಸಲು ವಿಶ್ವ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಎರಡು ವರ್ಷಗಳ ನಂತರ, 1950 ರಲ್ಲಿ, ಮೊದಲ ವಿಶ್ವ ಆರೋಗ್ಯ ದಿನವನ್ನು ಏಪ್ರಿಲ್ 7 ರಂದು ಆಚರಿಸಲಾಯಿತು ಮತ್ತು ಅಂದಿನಿಂದ, ಇದನ್ನು ಪ್ರತಿವರ್ಷ ಆಚರಿಸಲಾಗುತ್ತದೆ. 1948 ರಲ್ಲಿ, ವಿಶ್ವದ ದೇಶಗಳು ಒಗ್ಗೂಡಿ ಆರೋಗ್ಯವನ್ನು ಉತ್ತೇಜಿಸಲು, ಜಗತ್ತನ್ನು ಸುರಕ್ಷಿತವಾಗಿಡಲು ಮತ್ತು ದುರ್ಬಲರಿಗೆ ಸೇವೆ ಸಲ್ಲಿಸಲು ಡಬ್ಲ್ಯುಎಚ್ಒ ಅನ್ನು ಸ್ಥಾಪಿಸಿದವು.

ವಿಶ್ವ ಆರೋಗ್ಯ ದಿನದ ಪ್ರಾಮುಖ್ಯತೆ

ಗುಣಮಟ್ಟದ ಜೀವನವನ್ನು ನಡೆಸಲು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಜನರಿಗೆ ಅರಿವು ನೀಡಲು ವಿಶ್ವ ಆರೋಗ್ಯ ದಿನವನ್ನು ಸ್ಮರಿಸಲಾಗುತ್ತದೆ. ಅಲ್ಲದೆ WHO ಸ್ಥಾಪನೆಯನ್ನು ಗುರುತಿಸಲು ಇದನ್ನು ಆಯೋಜಿಸಲಾಗಿದೆ ಮತ್ತು ಪ್ರತಿ ವರ್ಷ ಜಾಗತಿಕ ಆರೋಗ್ಯಕ್ಕೆ ಪ್ರಾಮುಖ್ಯತೆಯ ನೀಡಲು ಸಂಸ್ಥೆಗೆ ಇದೊಂದು ಅವಕಾಶವಾಗಿದೆ. ವಿಶ್ವ ಆರೋಗ್ಯ ದಿನವನ್ನು ವಿವಿಧ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಅಂಗೀಕರಿಸುತ್ತವೆ, ಅಲ್ಲದೆ ಕೆಲವು ಚಟುವಟಿಕೆಗಳನ್ನು ಆಯೋಜಿಸುತ್ತಾರೆ ಮತ್ತು ಮಾಧ್ಯಮದ ಬೆಂಬಲದಿಂದ ಜಾಗೃತಿ ಮೂಡಿಸುತ್ತಾರೆ.

ವಿಶ್ವ ಆರೋಗ್ಯ ದಿನ 2023: ಥೀಮ್

ವಿಶ್ವ ಆರೋಗ್ಯ ಸಂಸ್ಥೆಯ 75 ನೇ ವಾರ್ಷಿಕೋತ್ಸವದ ಅಂಗವಾಗಿ ಈ ಬಾರಿ ವಿಶ್ವ ಆರೋಗ್ಯ ದಿನವನ್ನು ‘ಎಲ್ಲರಿಗೂ ಆರೋಗ್ಯ’ ಎಂಬ ವಿಷಯದ ಮೇಲೆ ಕೇಂದ್ರೀಕರಿಸುತ್ತದೆ. ಇದು ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವದಾದ್ಯಂತ ವಿವಿಧ ಅಭಿಯಾನಗಳೊಂದಿಗೆ ಆಚರಿಸಲಾಗುವ ಜಾಗತಿಕ ಆರೋಗ್ಯ ಜಾಗೃತಿ ದಿನವಾಗಿದೆ.

ಇದನ್ನೂ ಓದಿ: 40ರ ನಂತರ ಹೃದಯದ ಆರೋಗ್ಯವನ್ನು ಹೇಗೆ ರಕ್ಷಿಸುವುದು? ಆಯುರ್ವೇದ ತಜ್ಞರು ಏನು ಸಲಹೆ ನೀಡುತ್ತಾರೆ?

ವಿಶ್ವ ಆರೋಗ್ಯ ದಿನದ ಆಚರಣೆ

ವಿಶ್ವ ಆರೋಗ್ಯ ದಿನವನ್ನು ಆಚರಿಸಲು ಹಲವಾರು ಮಾರ್ಗಗಳಿವೆ. ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ಶಿಕ್ಷಣ ನೀಡಲು ವಿವಿಧ ಶೈಕ್ಷಣಿಕ ಅಭಿಯಾನಗಳು ಮತ್ತು ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಆರೋಗ್ಯಕರ ಜೀವನ ಮತ್ತು ರೋಗ ಮುಕ್ತ ಸಮಾಜವನ್ನು ಉತ್ತೇಜಿಸಲು ಸರ್ಕಾರವು ಉಚಿತ ಆರೋಗ್ಯ ತಪಾಸಣೆಯನ್ನು ಸಹ ಆಯೋಜಿಸುತ್ತದೆ.

WHO ದತ್ತಾಂಶದ ಪ್ರಕಾರ ವಿಶ್ವದ ಆರೋಗ್ಯ ಸ್ಥಿತಿಯ ಒಂದು ನೋಟ

-ಜಾಗತಿಕ ಜನಸಂಖ್ಯೆಯ 30 ಪ್ರತಿಶತದಷ್ಟು ಜನರು ಇಂದಿನವರೆಗೂ ಅಗತ್ಯ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ -ಪ್ರಪಂಚದಾದ್ಯಂತ ಸುಮಾರು 930 ಮಿಲಿಯನ್ ಜನರು ತಮ್ಮ ಮನೆಯ ಬಜೆಟ್‌ನ 10 ಪ್ರತಿಶತ ಅಥವಾ ಅದಕ್ಕಿಂತ ಹೆಚ್ಚಿನ ಆರೋಗ್ಯದ ಖರ್ಚಿನಿಂದಾಗಿ ಬಡತನಕ್ಕೆ ಬರುವ ಅಪಾಯದಲ್ಲಿದ್ದಾರೆ. -ಕಡಿಮೆ, ಮಧ್ಯಮ-ಆದಾಯದ ದೇಶಗಳಾದ್ಯಂತ ಪ್ರಾಥಮಿಕ ಆರೋಗ್ಯ ರಕ್ಷಣೆ (PHC) ಹೆಚ್ಚಿಸುವುದರಿಂದ 60 ಮಿಲಿಯನ್ ಜೀವಗಳನ್ನು ಉಳಿಸಬಹುದು ಮತ್ತು 2030 ರ ವೇಳೆಗೆ ಸರಾಸರಿ ಜೀವಿತಾವಧಿಯನ್ನು 3.7 ವರ್ಷಗಳವರೆಗೆ ಹೆಚ್ಚಿಸಬಹುದು ಎಂದು WHO ಭಾವಿಸುತ್ತದೆ. -ವ್ಯಕ್ತಿಗಳು ಮತ್ತು ಸಮುದಾಯಗಳು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳಿಗೆ ಒಗ್ಗಿ ಕೊಂಡರೆ ಕುಟುಂಬಗಳ ಆರೋಗ್ಯವನ್ನು ನೋಡಿಕೊಳ್ಳಬಹುದು

ಆರೋಗ್ಯ ಮಾಹಿತಿಗಳ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:04 pm, Thu, 6 April 23

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ