World Heart Day 2021: ಇಂದು ವಿಶ್ವ ಹೃದಯ ದಿನ; ಇತಿಹಾಸ ಮಹತ್ವದ ಜತೆ ಉತ್ತಮ ಆರೋಗ್ಯಕ್ಕಾಗಿ ತಿಳಿಯಬೇಕಾದ ಮಾಹಿತಿ ಇಲ್ಲಿದೆ

ವಿಶ್ವ ಹೃದಯ ದಿನ 2021: ಹೃದಯ ರೋಗಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ಸೇರುವ 100 ಜನರಿದ್ದರೆ ಅದರಲ್ಲಿ ಮಾನಸಿಕವಾಗಿ ಸದೃಢರಾದರೆ ಅಥವಾ ಮನಸ್ಥಿತಿ ಬದಲಾವಣೆಯಿಂದಾಗಿ ಶೇ 97 ರಷ್ಟು ಜನ ಗುಣಮುಖರಾಗುತ್ತಾರೆ ಮತ್ತು ಹೃದಯ ರೋಗದಿಂದ ದೂರವಿರುತ್ತಾರೆ ಎಂದು ತಜ್ಞರು ಹೇಳುತ್ತಾರೆ.

World Heart Day 2021: ಇಂದು ವಿಶ್ವ ಹೃದಯ ದಿನ; ಇತಿಹಾಸ ಮಹತ್ವದ ಜತೆ ಉತ್ತಮ ಆರೋಗ್ಯಕ್ಕಾಗಿ ತಿಳಿಯಬೇಕಾದ ಮಾಹಿತಿ ಇಲ್ಲಿದೆ
World Heart Day
Follow us
TV9 Web
| Updated By: shruti hegde

Updated on: Sep 29, 2021 | 8:34 AM

ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಬೇಕಾದರೆ ಆರೋಗ್ಯಕರ ಹೃದಯವು ಮುಖ್ಯ. ಹೃದಯ ಆರೋಗ್ಯದ ಕುರಿತಾಗಿ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಪ್ರತೀ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಹೃದ್ರೋಗದ ಕುರಿತಾಗಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಹೃದಯಕ್ಕೆ ಸಂಬಂಧಿಸಿದ ರೋಗವನ್ನು ನಿರ್ವಹಣೆ ಮಾಡುವ ಜತೆಗೆ ಆರೋಗ್ಯವನ್ನು ಸುಧಾರಿಸುವ ದೃಷ್ಟಿಯಿಂದ ಈ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಹೃದಯವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಏನೆಲ್ಲಾ ಮಾಡಬಹುದು ಎಂಬುದರ ಕುರಿತಾಗಿ ಅರಿಯುವುದೇ ಈ ದಿನದ ಮಹತ್ವ.

ಹೃದಯ ರೋಗಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ಸೇರುವ 100 ಜನರಿದ್ದರೆ ಅದರಲ್ಲಿ ಮಾನಸಿಕವಾಗಿ ಸದೃಢರಾದರೆ ಅಥವಾ ಮನಸ್ಥಿತಿ ಬದಲಾವಣೆಯಿಂದಾಗಿ ಶೇ 97 ರಷ್ಟು ಜನ ಗುಣಮುಖರಾಗುತ್ತಾರೆ ಮತ್ತು ಹೃದಯ ರೋಗದಿಂದ ದೂರವಿರುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಈ ದೃಷ್ಟಿಯಿಂದ ಧೈರ್ಯ ಜತೆಗೆ ಆರೋಗ್ಯದ ಕುರಿತಾಗಿ ಹೆಚ್ಚು ಗಮನ ಕೊಡುವುದು ಮುಖ್ಯ.

ಇತಿಹಾಸ 1999ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದೊಂದಿಗೆ ವಿಶ್ವ ಹೃದಯ ಒಕ್ಕೂಟವು ಮೊದಲ ಬಾರಿಗೆ ಈ ದಿನವನ್ನು ಘೋಷಿಸಿತು. ಬಳಿಕ 2000ರಲ್ಲಿ ಈ ದಿವನ್ನು ಸೆಪ್ಟೆಂಬರ್ 24ರಂದು ಆಚರಿಸಲಾಯಿತು. ಆದಾಗ್ಯೂ, 2011ರಿಂದ ವಿಶ್ವ ಹೃದಯ ದಿನವನ್ನು ಪ್ರತೀ ವರ್ಷ ಸೆಪ್ಟೆಂಬರ್ 29ರಂದು ಆಚರಿಸಲಾಗುತ್ತಿದೆ. ವಿಶ್ವ ಹೃದಯ ದಿನವು, ಹೃದಯ ರಕ್ತನಾಳದ ಖಾಯಿಲೆಗೆ (CVD) ಸಂಬಂಧಿಸಿದಂತೆ ಜನರಿಗೆ ತಿಳಿವಳಿಕೆ ನೀಡುತ್ತದೆ. ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂಥಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಧೈರ್ಯ ಮತ್ತು ಮುನ್ನಚ್ಚೆರಿಕಾ ಕ್ರಮಗಳ ಕುರಿತಾಗಿ ಜಾಗೃತಿ ಮೂಡಿಸವ ಉದ್ದೇಶವನ್ನು ಹೊಂದಿದೆ.

ಈ ದಿನ, ಆರೋಗ್ಯಕ್ಕೆ ಸಂಬಂಧಿಸಿದಂತೆ ಅನಾರೋಗ್ಯಕರ ಆಹಾರ, ತಂಬಾಕು ಸೇವನೆ, ಮತ್ತು ದೈಹಿಕ ದುರ್ಬಲತೆಗೆ ಸಂಬಂಧಿಸದಂತೆ ಉಂಟಾಗವ ಅಪಾಯವನ್ನು ಹೇಗೆ ನಿಯಂತ್ರಿಸಬೇಕು ಎಂಬುದನ್ನು ಸಾರುತ್ತದೆ. ಶೇ. 80ರಷ್ಟು ಅಕಾಲಿಕ ಮರಣಗಳಿಗೆ ಕಾರಣವಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯುವನ್ನು ತಡೆಗಟ್ಟಲು ಜಾಗೃತಿ ಮೂಡಿಸುವ ದಿನವಾಗಿದೆ.

ಇದನ್ನೂ ಓದಿ:

World Heart Day: ಪಿಸಿಒಎಸ್ ನಿಮ್ಮ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ: ಅಧ್ಯಯನ

Heart Failure Symptoms: ಹೃದಯ ವೈಫಲ್ಯದ ಈ ಲಕ್ಷಣಗಳನ್ನು ಎಂದು ನಿರ್ಲಕ್ಷಿಸಬೇಡಿ

(World Heart day 2021 know about date history importance and significance check in Kannada)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್