ವಿಶ್ವದಲ್ಲಿ ನೂರಾರು ಪಾರಂಪರಿಕ, ಐತಿಹಾಸಿಕ, ಸಾಂಸ್ಕೃತಿಕ ಮಹತ್ವಪೂರ್ಣ ತಾಣಗಳು ಇವೆ. ಇದು ನಮ್ಮ ಸಾಂಸ್ಕೃತಿಕ ವೈವಿದ್ಯತೆಯನ್ನು ತೋರಿಸುತ್ತವೆ. ಈ ತಾಣಗಳನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಈಗಾಗಲೇ ಯುನೆಸ್ಕೋವು 167 ದೇಶಗಳಲ್ಲಿ ಒಟ್ಟು 1155 ಸ್ಮಾರಕಗಳನ್ನು ವಿಶ್ವ ಪರಂಪರೆಯ ತಾಣಗಳಾಗಿ ಗೊತ್ತುಪಡಿಸಿದೆ. ಅದಲ್ಲದೇ ನಮ್ಮ ಮುಂದಿನ ಪೀಳಿಗೆಯವರಿಗೆ ಈ ತಾಣಗಳು ಹಾಗೂ ಸ್ಮಾರಕಗಳ ಮಹತ್ವವನ್ನು ತಿಳಿಸುವ ಉದ್ದೇಶವನ್ನು ವಿಶ್ವ ಪರಂಪರೆಪರೆ ದಿನವು ಹೊಂದಿದೆ.
1982 ರಲ್ಲಿ, ಸ್ಮಾರಕಗಳು ಮತ್ತು ತಾಣಗಳ ಇಂಟರ್ನ್ಯಾಷನಲ್ ಕೌನ್ಸಿಲ್ (ICOMOS) ಏಪ್ರಿಲ್ 18 ಅನ್ನು ವಿಶ್ವ ಪರಂಪರೆಯ ದಿನವಾಗಿ ಆಚರಿಸಲು ನಿರ್ಧರಿಸಿತು. ಆ ಬಳಿಕ ಯುನೆಸ್ಕೋ 1983 ರಲ್ಲಿ 22 ನೇ ಸಾಮಾನ್ಯ ಸಮ್ಮೇಳನದಲ್ಲಿ ಅನುಮೋದನೆಯನ್ನು ನೀಡಿತು. ಅಂದಿನಿಂದ ಪ್ರತಿ ವರ್ಷ ಏಪ್ರಿಲ್ 18 ರಂದು ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: Red Banana: ಹಳದಿ ಬಾಳೆಹಣ್ಣಿಗಿಂತಲೂ ಕೆಂಪು ಬಾಳೆ ಹಣ್ಣು ಆರೋಗ್ಯಕರವೇ?
ವಿಶ್ವ ಪರಂಪರೆಯ ದಿನದ ಮುಖ್ಯ ಉದ್ದೇಶವೆ ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಸ್ಮಾರಕಗಳ ಬಗ್ಗೆ ಜ್ಞಾನವನ್ನು ಹೆಚ್ಚಿಸುವುದು ಹಾಗೂ ಆ ತಾಣಗಳಜು ಸಂರಕ್ಷಿಸಲು ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಅದಲ್ಲದೇ, ವಾಸ್ತುಶಿಲ್ಪಿಗಳು, ಎಂಜಿನಿಯರ್‌ಗಳು, ಭೂಗೋಳಶಾಸ್ತ್ರಜ್ಞರು, ಸಿವಿಲ್ ಎಂಜಿನಿಯರ್‌ಗಳು, ಕಲಾವಿದರು ಹಾಗೂ ಪುರಾತತ್ತ್ವ ಶಾಸ್ತ್ರಜ್ಞರು ಪರಂಪರೆಯನ್ನು ಸಂರಕ್ಷಿಸಲು ಕೊಡುಗೆ ನೀಡಿದ ಎಲ್ಲರನ್ನು ಗುರುತಿಸುವ ಕೆಲಸವನ್ನು ಈ ದಿನ ಮಾಡಲಾಗುತ್ತದೆ. ಈ ದಿನದಂದು ಪಾರಂಪರಿಕ ತಾಣಗಳನ್ನು ರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಸಮ್ಮೇಳನಗಳು, ಉಪನ್ಯಾಸಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:05 pm, Wed, 17 April 24