AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ಮತ್ತು ಸಾಂಸ್ಕೃತಿಕ ಪರಂಪರೆಯು ನಮ್ಮ ಗುರುತು ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯ ಪಾರಂಪರಿಕ ತಾಣಗಳನ್ನು ರಕ್ಷಿಸಲು ಮತ್ತು ಅವುಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್‌ 18 ರಂದು ವಿಶ್ವ ಪರಂಪರೆಯ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ನಮ್ಮ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಸಂರಕ್ಷಿಸುವ ನಮ್ಮ ಜವಾಬ್ದಾರಿಯನ್ನು ನೆನಪಿಸುತ್ತದೆ.

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು?
ವಿಶ್ವ ಪರಂಪರೆಯ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on: Apr 18, 2026 | 10:06 AM

Share

ಭಾರತ ಸೇರಿದಂತೆ ವಿಶ್ವದ ಹಲವೆಡೆ ಐತಿಹಾಸಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ನೈಸರ್ಗಿಕ ಪ್ರಾಮುಖ್ಯತೆಯನ್ನು ಹೊಂದಿರುವ ಹಲವಾರು ತಾಣಗಳಿವೆ (Heritage Sites). ಈ ತಾಣಗಳು ಮಾನವ ನಾಗರಿಕತೆಯ ಸಾಧನೆಗಳು ಮತ್ತು ಪ್ರಕೃತಿಯ ಅದ್ಭುತ ಸೃಷ್ಟಿಗಳನ್ನು ಸಂಕೇತಿಸುತ್ತವೆ. ಅಷ್ಟೇ ಅಲ್ಲದೆ ಈ ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 18 ರಂದು ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಸಂದರ್ಭದಲ್ಲಿ ಭಾರತದಲ್ಲಿ ಯುನೆಸ್ಕೋ ಗುರುತಿಸಿರುವ ಪಾರಂಪರಿಕ ತಾಣಗಳು ಎಷ್ಟಿವೆ ಎಂಬುದನ್ನು ನೋಡೋಣ ಬನ್ನಿ.

ವಿಶ್ವ ಪರಂಪರೆಯ ದಿನದ ಇತಿಹಾಸವೇನು?

ಪ್ರಪಂಚದಾದ್ಯಂತದ ಪ್ರಸಿದ್ಧ ಕಟ್ಟಡಗಳು ಮತ್ತು ನೈಸರ್ಗಿಕ ತಾಣಗಳನ್ನು ಸಂರಕ್ಷಿಸುವ ಉದ್ದೇಶದಿಂದ 1982 ರಲ್ಲಿ, ಅಂತರರಾಷ್ಟ್ರೀಯ ಸ್ಮಾರಕಗಳು ಮತ್ತು ತಾಣಗಳ ಮಂಡಳಿ (ICOMOS) ಪ್ರತಿ ವರ್ಷ ಏಪ್ರಿಲ್ 18 ರಂದು ವಿಶ್ವ ಪರಂಪರೆಯ ದಿನವನ್ನು ಆಚರಿಸುವ ಕಲ್ಪನೆಯನ್ನು ಪ್ರಸ್ತಾಪಿಸಿತು. ಅದರ ಮುಂದಿನ ವರ್ಷ, ಅಂದರೆ 1983 ರಲ್ಲಿ ಯುನೆಸ್ಕೋದ ಸಾಮಾನ್ಯ ಸಮ್ಮೇಳನದಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಯಿತು. ಈ ದಿನದಂದು, ಟುನೀಶಿಯಾದಲ್ಲಿ ಮೊದಲ ಬಾರಿಗೆ ವಿಶ್ವ ಪಾರಂಪರಿಕ ದಿನವನ್ನು ಆಚರಿಸಲಾಯಿತು. ಆ ನಂತರದಲ್ಲಿ ವಿಶ್ವ ಪರಂಪರೆಯ ದಿನವನ್ನು ಅಧಿಕೃತವಾಗಿ ಗುರುತಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಪರಂಪರೆಯ ದಿನದ ಮಹತ್ವವೇನು?

  • ನೈಸರ್ಗಿಕ ಭೂದೃಶ್ಯಗಳು, ಐತಿಹಾಸಿಕ, ಸಾಂಸ್ಕೃತಿಕ ಸ್ಮಾರಕಗಳು, ಪ್ರಾಚೀನ ಅವಶೇಷಗಳ ರಕ್ಷಣೆ ಮತ್ತು ಇವುಗಳ ಬಗ್ಗೆ ಜನರಿಗೆ ಜ್ಞಾನ ಮೂಡಿಸಲು ವಿಶ್ವ ಪರಂಪರೆಯ ದಿನವನ್ನು ಆಚರಿಸಲಾಗುತ್ತದೆ.
  • ಸಾಂಸ್ಕೃತಿಕ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಪರಂಪರೆಯ ಮೌಲ್ಯ ಎತ್ತಿ ಹಿಡಿಯುವುದರೊಂದಿಗೆ ಮುಂದಿನ ಪೀಳಿಗೆಗಾಗಿ ಈ ಸ್ಮಾರಕಗಳನ್ನು ರಕ್ಷಿಸಬೇಕೆಂಬುದು ಈ ದಿನವನ್ನು ಆಚರಿಸುವ ಉದ್ದೇಶವಾಗಿದೆ.
  • ಈ ದಿನ ಪುರಾತತ್ವ ಶಾಸ್ತ್ರಜ್ಞರು, ಇತಿಹಾಸಕಾರರು, ವಾಸ್ತುಶಿಲ್ಪಿಗಳು, ಎಂಜಿನಿಯರ್‌ಗಳು ಹಾಗೂ ಕಲಾವಿದರು ಸೇರಿದಂತೆ ಪಾರಂಪರಿಕ ತಾಣಗಳು ಮತ್ತು ಸ್ಮಾರಕಗಳನ್ನು ಸಂರಕ್ಷಿಸಲು ಕೊಡುಗೆ ನೀಡುವ ಜನರನ್ನು ಗುರುತಿಸಿ ಗೌರವಿಸಲಾಗುತ್ತದೆ.

ಇದನ್ನೂ ಓದಿ: ಏಪ್ರಿಲ್‌ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸುವುದು ಗೊತ್ತಾ?

ವಿಶ್ವ ಪರಂಪರೆಯ ತಾಣ ಎಂದರೇನು?

ವಿಶ್ವ ಪರಂಪರೆಯ ತಾಣಗಳು ಸಾಂಸ್ಕೃತಿಕ ಮತ್ತು ನೈಸರ್ಗಿಕ ಮಹತ್ವವನ್ನು ಹೊಂದಿರುವ ತಾಣಗಳಾಗಿವೆ. ಅವು ಐತಿಹಾಸಿಕವಾಗಿ ಮತ್ತು ಪರಿಸರೀಯವಾಗಿಯೂ ಮಹತ್ವದ್ದಾಗಿವೆ. ಅಂತಹ ತಾಣಗಳನ್ನು ವಿಶ್ವಸಂಸ್ಥೆಯ ಸಂಸ್ಥೆಯ UNESCO ಅಧಿಕೃತವಾಗಿ ವಿಶ್ವ ಪರಂಪರೆಯ ತಾಣಗಳೆಂದು ಗುರುತಿಸಿದೆ.

ಭಾರತದಲ್ಲಿರುವ ವಿಶ್ವ ಪರಂಪರೆಯ ತಾಣಗಳು ಯಾವುವು?

ಪ್ರಪಂಚದಾದ್ಯಂತ ಒಟ್ಟು 1,052 ವಿಶ್ವ ಪರಂಪರೆಯ ತಾಣಗಳಿವೆ. ಅದರಲ್ಲಿ ಭಾರತವು ಪ್ರಸ್ತುತ ಒಟ್ಟು 44 ವಿಶ್ವ ಪರಂಪರೆಯ ತಾಣಗಳನ್ನು ಹೊಂದಿದೆ. ಅವುಗಳು ಯಾವುವು ಎಂದರೆ,

  • ಆಗ್ರಾ ಕೋಟೆ
  • ಅಜಂತಾ ಗುಹೆಗಳು
  • ಎಲ್ಲೋರಾ ಗುಹೆಗಳು
  • ನಳಂದ ಮಹಾವಿಹಾರ (ನಳಂದ ವಿಶ್ವವಿದ್ಯಾಲಯ)
  • ಸಾಂಚಿ ಬೌದ್ಧ ಸ್ಮಾರಕ
  • ಚಂಪಾನೇರ್-ಪಾವಗಢ್ ಪುರಾತತ್ವ ಉದ್ಯಾನವನ
  • ಛತ್ರಪತಿ ಶಿವಾಜಿ ಟರ್ಮಿನಸ್
  • ಗೋವಾದ ಚರ್ಚುಗಳು ಮತ್ತು ಕಾನ್ವೆಂಟ್‌ಗಳು
  • ಎಲಿಫೆಂಟಾ ಗುಹೆಗಳು
  • ಫತೇಪುರ್ ಸಿಕ್ರಿ
  • ಗ್ರೇಟ್ ಲಿವಿಂಗ್ ಚೋಳ ಟೆಂಪಲ್ಸ್
  • ಹಂಪಿಯಲ್ಲಿರುವ ಸ್ಮಾರಕಗಳು
  • ಮಹಾಬಲಿಪುರಂನಲ್ಲಿರುವ ಸ್ಮಾರಕಗಳು
  • ಪಟ್ಟದಕಲ್ಲು
  • ರಾಜಸ್ಥಾನದ ಬೆಟ್ಟದ ಕೋಟೆ
  • ಕುತುಬ್‌ ಮಿನಾರ್‌
  • ರಾಣಿ-ಕಿ-ವಾವ್ ಪಟಾನ್, ಗುಜರಾತ್ (2014)
  • ಕೆಂಪು ಕೋಟೆ
  • ಭಿಂಬೆಟ್ಕಾದ ರಾಕ್ ಶೆಲ್ಟರ್ಸ್
  • ಸೂರ್ಯ ದೇವಾಲಯ, ಕೋನಾರ್ಕ್
  • ತಾಜ್ ಮಹಲ್
  • ಜಂತರ್ ಮಂತರ್, ಜೈಪುರ
  • ಕಾಜಿರಂಗ ರಾಷ್ಟ್ರೀಯ ಉದ್ಯಾನ
  • ಕಿಯೋಲಾಡಿಯೊ ರಾಷ್ಟ್ರೀಯ ಉದ್ಯಾನವನ
  • ಮಾನಸ ವನ್ಯಜೀವಿ ಅಭಯಾರಣ್ಯ
  • ಖಜುರಾಹೊದಲ್ಲಿರುವ ಸ್ಮಾರಕಗಳು
  • ಪಶ್ಚಿಮಘಟ್ಟಗಳು
  • ನಂದಾದೇವಿ ರಾಷ್ಟ್ರೀಯ ಉದ್ಯಾನವನ
  • ಸುಂದರಬನ್ಸ್ ರಾಷ್ಟ್ರೀಯ ಉದ್ಯಾನವನ

ಇವೆಲ್ಲವು ಭಾರತದಲ್ಲಿರುವ ಪ್ರಮುಖ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳಾಗಿವೆ. ಈ ಸುಂದರ ತಾಣಗಳಿಗೆ ನೀವು ಒಮ್ಮೆಯಾದರೂ ಭೇಟಿ ನೀಡಲೇಬೇಕು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ
ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ?
ಕುಂಕುಮಾರ್ಚನೆಯನ್ನ ಮನೆಯಲ್ಲಿ ಮಾಡಬಹುದಾ?
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY