AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ಸಪ್ಟೆಂಬರ್‌ 14 ರಂದು ರಾಷ್ಟ್ರೀಯ ಹಿಂದಿ ದಿವಸವನ್ನು ಆಚರಿಸುವಂತೆ ಜನವರಿ 10 ರಂದು ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಿಂದಿ ಪ್ರಪಂಚದಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದ್ದು, ಹಿಂದಿ ಭಾಷೆಯನ್ನು ವಿಶ್ವ ಬಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ಹಾಗೂ ಹಿಂದಿ ಭಾಷೆಯ ಜನಪ್ರಿಯತೆಯನ್ನು ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?
ವಿಶ್ವ ಹಿಂದಿ ದಿನ
ಮಾಲಾಶ್ರೀ ಅಂಚನ್​
|

Updated on: Jan 10, 2026 | 10:17 AM

Share

ವಿವಿಧತೆಯಲ್ಲಿ ಏಕತೆಯ ನಾಡಾಗಿರುವ ಭಾರತದಲ್ಲಿ ಹಲವು ವಿಭಿನ್ನ ಸಂಸ್ಕೃತಿ, ಭಾಷೆ, ಲಿಪಿಗಳಿವೆ. ನಮ್ಮ ಕರ್ನಾಟಕದಲ್ಲಿ ಕನ್ನಡ ಭಾಷೆ ಮಾತನಾಡುವಂತೆ ದೇಶದ ಹೆಚ್ಚಿನ ಕಡೆ ಹಿಂದಿ (Hindi) ಭಾಷೆಯನ್ನೇ ಮಾತನಾಡುತ್ತಾರೆ. ಅಲ್ಲದೆ ಹಿಂದಿ ಪ್ರಪಂಚದಲ್ಲಿಯೇ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಹೌದು ಹಿಂದಿ ಭಾಷೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್ ಮತ್ತು ಫಿಲಿಪೈನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಜನಪ್ರಿಯವಾಗಿದೆ. ಹಾಗಾಗಿ ಹಿಂದಿ ಭಾಷೆಯನ್ನು ವಿಶ್ವ ಭಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಯಾವಾಗ ಪ್ರಾರಂಭವಾಯಿತು ಎಂಬುದರ ಬಗ್ಗೆ ತಿಳಿಯಿರಿ.

ವಿಶ್ವ ಹಿಂದಿ ದಿನದ ಇತಿಹಾಸವೇನು?

ವಿಶ್ವ ಹಿಂದಿ ದಿನದ ಇತಿಹಾಸವು ತುಂಬಾ ಹಳೆಯದು. ಜನವರಿ 10, 1975 ರಂದು, ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊದಲ ವಿಶ್ವ ಹಿಂದಿ ಸಮ್ಮೇಳನ ನಡೆಯಿತು. ಭಾರತ ಸೇರಿದಂತೆ ಹಲವು ದೇಶಗಳ ಹಿಂದಿ ವಿದ್ವಾಂಸರು, ಬರಹಗಾರರು ಮತ್ತು ಭಾಷಾ ಪ್ರೇಮಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮ್ಮೇಳನವು ಜಾಗತಿಕವಾಗಿ ಹಿಂದಿಗೆ ಸಂಘಟಿತ ವೇದಿಕೆಯನ್ನು ಒದಗಿಸಿತು. ವಿದೇಶಗಳಲ್ಲಿ ವಾಸಿಸುವ ಹಿಂದಿ ಭಾಷಿಕರನ್ನು ಒಗ್ಗೂಡಿಸುವುದು ಮತ್ತು ಹಿಂದಿಯ ಪ್ರಚಾರಕ್ಕಾಗಿ ಜಂಟಿ ಪ್ರಯತ್ನಗಳನ್ನು ಮಾಡುವುದು ಇದರ ಉದ್ದೇಶವಾಗಿತ್ತು. ಆನಂತರ 2006 ರಲ್ಲಿ, ಆಗಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಪ್ರತಿ ವರ್ಷ ಜನವರಿ 10 ಅನ್ನು “ವಿಶ್ವ ಹಿಂದಿ ದಿನ” ಎಂದು ಆಚರಿಸುವುದಾಗಿ ಘೋಷಿಸಿದರು. ಮತ್ತು  ವಿಶ್ವ ಹಿಂದಿ ದಿನವನ್ನು ಮೊದಲು ಭಾರತ ಸರ್ಕಾರವು 2006 ರಲ್ಲಿ ಅಧಿಕೃತವಾಗಿ ಆಚರಿಸಿತು. ಅಂದಿನಿಂದ ಪ್ರತಿವರ್ಷ ಜನವರಿ 10 ರಂದು ವಿಶ್ವ ಹಿಂದಿ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಪಕ್ಷಿಗಳಿಗೆ ಜೀವಿಸಲು ಸ್ವಚ್ಛಂದ ಪರಿಸರ ನಿರ್ಮಿಸೋಣ

ವಿಶ್ವ ಹಿಂದಿ ದಿನವನ್ನು ಆಚರಿಸುವ ಉದ್ದೇಶವೇನು?

  • ವಿಶ್ವಾದ್ಯಂತ ಹಿಂದಿ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅದನ್ನು ಅಂತರರಾಷ್ಟ್ರೀಯ ಭಾಷೆಯಾಗಿ ಸ್ಥಾಪಿಸುವುದು ಇದರ ಉದ್ದೇಶವಾಗಿದೆ.
  • ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಹಿಂದಿ ಬಳಕೆಯನ್ನು ಉತ್ತೇಜಿಸುವುದು.
  • ಶಿಕ್ಷಣ, ತಂತ್ರಜ್ಞಾನ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಹಿಂದಿ ಭಾಷೆಯನ್ನು ಬಲಪಡಿಸುವುದು.
  • ಬಾಲಿವುಡ್, ಸಾಹಿತ್ಯ ಮತ್ತು ಮಾಧ್ಯಮಗಳ ಮೂಲಕ ಜಾಗತಿಕ ಹಿಂದಿ ಚಿತ್ರಣವನ್ನು ಉತ್ತೇಜಿಸುವುದು.
  • ಹಿಂದಿಯೇತರ ಭಾಷಿಕರಿಗೆ ಹಿಂದಿ ಕಲಿಯಲು ಪ್ರೋತ್ಸಾಹ ನೀಡುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ