World Hydrography Day 2024 : ಪರಿಸರ ರಕ್ಷಣೆ, ಸಮುದ್ರದ ಸಂರಕ್ಷಣೆಯಲ್ಲಿ ಹೈಡ್ರೋಗ್ರಫಿಯ ಪಾತ್ರವೇನು?

ಹೈಡ್ರೋಗ್ರಫಿಯು ಭೂಮಿಯ ಜಲಮೂಲಗಳ ಭೌತಿಕ ಲಕ್ಷಣಗಳನ್ನು ವಿವರಿಸುವ ವಿಜ್ಞಾನವಾಗಿದೆ. ಪ್ರತಿ ವರ್ಷ, ಜೂನ್ 21 ರಂದು ವಿಶ್ವ ಹೈಡ್ರೋಗ್ರಫಿ ದಿನ (ವಿಶ್ವ ಜಲವಿಜ್ಞಾನ ದಿನ) ವನ್ನಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

World Hydrography Day 2024 : ಪರಿಸರ ರಕ್ಷಣೆ, ಸಮುದ್ರದ ಸಂರಕ್ಷಣೆಯಲ್ಲಿ ಹೈಡ್ರೋಗ್ರಫಿಯ ಪಾತ್ರವೇನು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 21, 2024 | 12:36 PM

ಸಮುದ್ರದಾಳದ ರಹಸ್ಯಗಳನ್ನು ಬಲ್ಲವರು ಯಾರು ಹೇಳಿ, ಶಾಂತತೆಯಿಂದ ಕೂಡಿದ ಸಮುದ್ರವು ಏಕಾಏಕಿ ರೌದ್ರತೆಯನ್ನು ತೋರುತ್ತದೆ. ಈ ಹೈಡ್ರೋಗ್ರಫಿಯು ಸಾಗರಗಳು, ಸಮುದ್ರಗಳು, ನದಿಗಳು ಮತ್ತು ವಿವಿಧ ಜಲರಾಶಿಗಳ ಭೌತಿಕ ಗುಣಲಕ್ಷಣಗಳನ್ನು ಅಳೆಯಲು ಸಹಕಾರಿಯಾಗಿದೆ. ಈ ಹೈಡ್ರೋಗ್ರಾಫಿಕ್ ಸಮೀಕ್ಷೆಯಲ್ಲಿ ನೀರಿನ ದೇಹದ ಆಳ, ತಳದ ಪ್ರಕಾರ, ಪ್ರವಾಹಗಳು, ಉಬ್ಬರವಿಳಿತಗಳಂತಹ ವಿವಿಧ ಗುಣಲಕ್ಷಣಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಮಾಹಿತಿಯನ್ನು ಭದ್ರತೆ ಹಾಗೂ ಪರಿಸರ ಸಂರಕ್ಷಣೆಯಂತಹ ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಹೀಗಾಗಿ ಹೈಡ್ರೋಗ್ರಾಫರ್‌ಗಳು ನಮ್ಮನ್ನು ಸುರಕ್ಷಿತವಾಗಿರಿಸುವಲ್ಲಿ ಮತ್ತು ಪರಿಸರವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ವಿಶ್ವ ಹೈಡ್ರೋಗ್ರಫಿ ದಿನದ ಇತಿಹಾಸ

ಹೈಡ್ರೋಗ್ರಫಿ ಮತ್ತು ಪ್ರಪಂಚದಾದ್ಯಂತ ಹೈಡ್ರೋಗ್ರಾಫರ್‌ಗಳ ಕೆಲಸದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 21 ರಂದು ವಿಶ್ವ ಹೈಡ್ರೋಗ್ರಫಿ ದಿನವನ್ನು ಆಚರಿಸಲಾಗುತ್ತದೆ. ಇಂಟರ್ನ್ಯಾಷನಲ್ ಹೈಡ್ರೋಗ್ರಾಫಿಕ್ ಆರ್ಗನೈಸೇಶನ್ (IHO) 2005 ರಲ್ಲಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ವಿಶ್ವ ಹೈಡ್ರೋಗ್ರಾಫಿ ದಿನವನ್ನು ಆಚರಿಸಲು ನಿರ್ಧರಿಸಿತು. ಈ ದಿನವನ್ನು 2006 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ಅಂದಿನಿಂದ ಪ್ರಪಂಚದಾದ್ಯಂತ ಜಲಶಾಸ್ತ್ರಜ್ಞರು ಮತ್ತು ಇತರ ಸಾಗರ ವೃತ್ತಿಪರರು ಈ ದಿನವನ್ನು ಆಚರಿಸುತ್ತಾರೆ.

ಇದನ್ನೂ ಓದಿ: ಯೋಗ ಮಾಡುವ ವೇಳೆ ಪಾಲಿಸಲೇಬೇಕಾದ ನಿಯಮಗಳಿವು

ವಿಶ್ವ ಹೈಡ್ರೋಗ್ರಫಿ ದಿನದ ಮಹತ್ವ

ಹೈಡ್ರೋಗ್ರಾಫರ್‌ಗಳ ಕೆಲಸ, ಹೈಡ್ರೋಗ್ರಫಿಯ ಪ್ರಾಮುಖ್ಯತೆ ಹಾಗೂ ಕಡಲ ಭದ್ರತೆ, ಪರಿಸರ ಸಂರಕ್ಷಣೆ, ಆರ್ಥಿಕ ಅಭಿವೃದ್ಧಿ ಮತ್ತು ವೈಜ್ಞಾನಿಕ ಸಂಶೋಧನೆಯಂತಹ ವಿವಿಧ ಅಂಶಗಳಲ್ಲಿ ಅದರ ಪ್ರಮುಖ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಈ ದಿನದಂದು ಚಟುವಟಿಕೆಗಳು, ಪ್ರದರ್ಶನಗಳು, ಕಾರ್ಯಾಗಾರ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ