World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?

ಹೆಚ್ಚಿನವರಲ್ಲಿ ಕಾಣಸಿಗುವ ಆರೋಗ್ಯ ಸಮಸ್ಯೆ ಗಳಲ್ಲಿ ಅಧಿಕ ರಕ್ತದೊತ್ತಡ ಕೂಡ ಒಂದಾಗಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 16, 2024 | 2:29 PM

ಇಂದಿನ ಬದಲಾದ ಜೀವನ ಶೈಲಿ ಹಾಗೂ ಗುಣಮಟ್ಟವಲ್ಲದ ಆಹಾರ ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಸಮಸ್ಯೆಗೆ ಕಾರಣವಾಗುತ್ತಿದೆ. ಒಂದು ವೇಳೆ ಅಧಿಕ ರಕ್ತದೊತ್ತಡದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳದೇ ಹೋದಲ್ಲಿ, ಹೃದ್ರೋಗಗಳು, ಪಾರ್ಶ್ವವಾಯು ಹೀಗೆ ಗಂಭೀರ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಅದಲ್ಲದೇ, ಅಧಿಕ ರಕ್ತದೊತ್ತಡವು ತಲೆನೋವು, ವಾಕರಿಕೆ, ವಾಂತಿ, ತಲೆತಿರುಗುವಿಕೆ ಹಾಗೂ ಉಸಿರಾಟದ ಸಮಸ್ಯೆ, ಗೊಂದಲ, ಆತಂಕ, ಎದೆ ನೋವು ಮತ್ತು ಸ್ನಾಯು ನಡುಕ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ವಿಶ್ವ ಅಧಿಕ ರಕ್ತದೊತ್ತಡ ದಿನ

2005 ಮೇ 14ರಂದು ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಅಧಿಕ ರಕ್ತದೊತ್ತಡ ದಿನವನ್ನು ಪರಿಚಯ ಮಾಡಿತು. ಆದರೆ 2006ರಿಂದ ಪ್ರತಿವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಎಂಬುದು ಅಧಿಕ ರಕ್ತದೊತ್ತಡ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಯಲ್ಲಿ ಒಂದು. ಹೀಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಅಧಿಕ ರಕ್ತದೊತ್ತಡ ದಿನದ ಮಹತ್ವ

ವಿಶ್ವ ಅಧಿಕ ರಕ್ತದೊತ್ತಡ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಆರೋಗ್ಯ ಸಮಸ್ಯೆ ಹೊಂದಿದವರಿಗೆ ಸಹಾಯ ಮಾಡಲು ಲೀಗ್‌ಗಳು ಸಹಕರಿಸುತ್ತವೆ. ಈ ದಿನದಂದು ಆರೋಗ್ಯ ಸಂಸ್ಥೆಗಳು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಇದನ್ನೂ ಓದಿ: ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಮುನ್ನೆಚ್ಚರಿಕೆ ಕ್ರಮಗಳು ಹೇಗೆ?

* ಉಪ್ಪು ಸೇವನೆಯು ಮಿತವಾಗಿರಲಿ.

* ಹಣ್ಣು ಹಂಪಲು ಮತ್ತು ಸೊಪ್ಪು ತರಕಾರಿಗಳನ್ನು ಸೇವಿಸಿ.

* ತಂಬಾಕು ಸೇವನೆ, ಆಲ್ಕೊಹಾಲ್ ನಿಂದ ದೂರವಿರುವುದು.

* ಕೊಬ್ಬಿನ ಅಂಶವಿರುವ ಆಹಾರ ಸೇವನೆಯನ್ನು ಕಡಿಮೆಗೊಳಿಸುವುದು.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ