Kidney Health: ಅತಿಯಾದ ನೋವು ನಿವಾರಕಗಳ ಬಳಕೆಯಿಂದ ಯುವಜನತೆಯಲ್ಲಿ ಕಿಡ್ನಿ ರೋಗ ಹೆಚ್ಚಳ

World Kidney Day 2024: ಕಡಿಮೆ ರಕ್ತದ ಹರಿವಿನ ಪರಿಣಾಮವಾಗಿ ದೀರ್ಘಕಾಲದ ನೋವು ನಿವಾರಕ ಬಳಕೆ ಮತ್ತು ಮೂತ್ರಪಿಂಡದ ಹಾನಿಯ ನಡುವಿನ ಸಂಪರ್ಕವನ್ನು ವೈದ್ಯರು ಒಪ್ಪಿಕೊಂಡಿದ್ದಾರೆ. ಆದರೆ, ಮೂತ್ರಪಿಂಡದ ಕಾಯಿಲೆಗಳಿಗೆ ನೋವು ನಿವಾರಕಗಳ ಸೇವನೆಯೇ ಏಕೈಕ ಅಂಶವಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ. ಹಾಗಾದರೆ, ನೋವು ನಿವಾರಕಗಳು ಕಿಡ್ನಿಯ ಸಮಸ್ಯೆಗೆ ಹೇಗೆ ಕಾರಣವಾಗುತ್ತವೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

Kidney Health: ಅತಿಯಾದ ನೋವು ನಿವಾರಕಗಳ ಬಳಕೆಯಿಂದ ಯುವಜನತೆಯಲ್ಲಿ ಕಿಡ್ನಿ ರೋಗ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Mar 14, 2024 | 12:19 PM

ನೋವು ನಿವಾರಕ (Pain Killers) ಮಾತ್ರೆಗಳನ್ನು ವಿಪರೀತ ಬಳಸುವುದರಿಂದ ಯುವಕ- ಯುವತಿಯರು ಕಿಡ್ನಿ ರೋಗದ (Kidney Disease) ಅಪಾಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಮೂತ್ರಪಿಂಡ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಯುವ ವಯಸ್ಕರು ಸಾಮಾನ್ಯವಾಗಿ AKI ಅಥವಾ ತೀವ್ರವಾದ ಮೂತ್ರಪಿಂಡದ ವೈಫಲ್ಯದಿಂದ (Kidney Failure) ಬಳಲುತ್ತಿದ್ದಾರೆ. ಸೋಂಕುಗಳು, ನೋವು ನಿವಾರಕಗಳ ಅಲ್ಪಾವಧಿಯ ಸೇವನೆ, ನಿರ್ಜಲೀಕರಣ, ಅತಿಸಾರ ಅಥವಾ ದ್ರವದ ಕೊರತೆಯಿಂದಾಗಿ ಮೂತ್ರಪಿಂಡದ ಸಮಸ್ಯೆ ಎದುರಾಗುತ್ತದೆ.

ಅನೇಕರು ಸಕ್ರಿಯ ಕ್ರೀಡೆಗಳಲ್ಲಿ ತೊಡಗುತ್ತಾರೆ. ಆಗ ಕೆಲವು ಜನರಿಗೆ ಗಾಯಗಳಾಗುತ್ತವೆ. ಇದಕ್ಕಾಗಿ ಅವರು ನೋವು ನಿವಾರಕಗಳನ್ನು ಬಳಸುತ್ತಾರೆ. ಕೆಲವು ವಾರಗಳಲ್ಲಿ ಈ ನೋವು ನಿವಾರಕ ಬಳಕೆಯು ತೀವ್ರವಾದ ಮೂತ್ರಪಿಂಡದ ಗಾಯಕ್ಕೆ ಕಾರಣವಾಗುತ್ತದೆ. ಜನರ ರಕ್ತದಲ್ಲಿ ಹೆಚ್ಚಿನ ಕ್ರಿಯೇಟಿನೈನ್ ಮಟ್ಟವನ್ನು ಅಥವಾ ಅವರ ಮೂತ್ರದಲ್ಲಿ ಪ್ರೋಟೀನ್ ಸೋರಿಕೆಯನ್ನು ನೋಡಬಹುದು ಎಂದು ಖಾಸಗಿ ಆಸ್ಪತ್ರೆಯ ನೆಫ್ರಾಲಜಿಸ್ಟ್ ಡಾ. ಪಾರ್ಥ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kidney Stone: ಈ ಲಕ್ಷಣಗಳು ಕಿಡ್ನಿ ಸ್ಟೋನ್ ಸಂಕೇತಗಳಾಗಿರಬಹುದು ಎಚ್ಚರ!

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆ ಹೊಂದಿರುವ ಜನರು ಸಾಮಾನ್ಯವಾಗಿ ನೋವು ನಿವಾರಕ ನೆಫ್ರೋಪತಿಯನ್ನು ಅಭಿವೃದ್ಧಿಪಡಿಸುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಅಂದರೆ ದೀರ್ಘಕಾಲದ ನೋವು ನಿವಾರಕಗಳಿಗೆ ಒಡ್ಡಿಕೊಳ್ಳುವುದರಿಂದ ಅವರ ಒಂದು ಅಥವಾ ಎರಡೂ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆ.

ಈ ಬಗ್ಗೆ ಡಾ. ಕಿಶನ್ ಮಾತನಾಡಿ, ಭಾರತ ದೇಶದಲ್ಲಿ ಶೇ.50ಕ್ಕೂ ಹೆಚ್ಚು ಮೂತ್ರಪಿಂಡದ ಕಾಯಿಲೆಗಳು ಮಧುಮೇಹದಿಂದ ಉಂಟಾಗುತ್ತವೆ. ಕನಿಷ್ಠ ಶೇ. 20-25ರಷ್ಟು ರೋಗಿಗಳು ಅಧಿಕ ರಕ್ತದೊತ್ತಡದಿಂದ ಮೂತ್ರಪಿಂಡದ ಕಾಯಿಲೆಯನ್ನು ಅನುಭವಿಸುತ್ತಾರೆ. ಹೆಚ್ಚಿನ ಜನರು ಕಿರಿಯ ವಯಸ್ಸಿನಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ಅನುಭವಿಸುತ್ತಾರೆ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಇದು ಮೂತ್ರಪಿಂಡದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: World Kidney Day 2024: ವಿಶ್ವ ಕಿಡ್ನಿ ದಿನ; ಕಿಡ್ನಿ ಸಮಸ್ಯೆಯ ಲಕ್ಷಣಗಳು, ಚಿಕಿತ್ಸೆಯ ವಿಧಾನವೇನು?

30ರಿಂದ 45 ವಯಸ್ಸಿನ ಜನರಲ್ಲಿ ಮೂತ್ರಪಿಂಡದ ಕಾಯಿಲೆಯನ್ನು ಹೆಚ್ಚಿಸುವ ಪ್ರವೃತ್ತಿ ಹೆಚ್ಚಾಗಿದೆ. ಏಕೆಂದರೆ, ಕಳಪೆ ಆಹಾರ ಮತ್ತು ಜೀವನಶೈಲಿಯು ಯುವ ವಯಸ್ಕರಲ್ಲಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿಪಡಿಸುವ ಅಪಾಯಕ್ಕೆ ಒಡ್ಡಿಕೊಳ್ಳುತ್ತಿದೆ. ಮಧುಮೇಹ 30 ವರ್ಷಕ್ಕಿಂತ ಮೇಲ್ಪಟ್ಟ ಜನರ ಕಾಯಿಲೆಯಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಕಿಡ್ನಿ ಸಮಸ್ಯೆಗೆ ವೈದ್ಯರ ಮೇಲ್ವಿಚಾರಣೆಯಿಲ್ಲದೆ ಔಷಧಿಗಳನ್ನು ಸೇವಿಸುವುದರ ಬಗ್ಗೆಯೂ ನಾವು ಜಾಗರೂಕರಾಗಿರಬೇಕು. ಇದು ವಿಶೇಷವಾಗಿ ನಾವು ವಯಸ್ಸಾದಂತೆ ಪ್ರಮುಖ ಪರಿಣಾಮಗಳನ್ನು ಬೀರಬಹುದು ಮತ್ತು ಇತರ ರೀತಿಯ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುವ ಸಾಧ್ಯತೆಯಿದೆ. ಮೂತ್ರಪಿಂಡಕ್ಕೆ ಸುರಕ್ಷಿತವಾದ ಔಷಧಿಗಳನ್ನು ಶಿಫಾರಸು ಮಾಡುವತ್ತ ಗಮನಹರಿಸಬೇಕು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ