AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Kidney Day 2024 : ನೋವು ನಿವಾರಕ ಮಾತ್ರೆಗಳ ಸೇವನೆ ಕಿಡ್ನಿಗೆ ತೊಂದರೆ

ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ದೇಹದಲ್ಲಿನ ಒಂದು ಅಂಗವು ತನ್ನ ಕೆಲಸವನ್ನು ನಿಲ್ಲಿಸಿ ಬಿಟ್ಟರೆ ಕಾರ್ಯವಿಧಾನವೇ ಅಲ್ಲೋಲಕಲ್ಲೋಲವಾಗುತ್ತದೆ. ದೇಹದಲ್ಲಿರುವ ಪ್ರಮುಖ ಅಂಗಗಳಲ್ಲಿ ಕಿಡ್ನಿ ಕೂಡ ಒಂದು. ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೆ ಗುರುವಾರದಂದು ವಿಶ್ವದಾದ್ಯಂತ ವಿಶ್ವ ಕಿಡ್ನಿ ದಿನ ಎಂದು ಆಚರಿಸಲಾಗುತ್ತಾ ಬರಲಾಗುತ್ತಿದೆ. ಹಾಗಾದ್ರೆ ವಿಶ್ವದಾದಂತ್ಯ ಆಚರಿಸಲಾಗುವ ವಿಶ್ವ ಕಿಡ್ನಿ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

World Kidney Day 2024 : ನೋವು ನಿವಾರಕ ಮಾತ್ರೆಗಳ ಸೇವನೆ ಕಿಡ್ನಿಗೆ ತೊಂದರೆ
ಸಾಯಿನಂದಾ
| Edited By: |

Updated on: Mar 12, 2024 | 4:13 PM

Share

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗವಾದ ಕಿಡ್ನಿಯು ಫಿಲ್ಟರ್ ನಂತೆ ಕೆಲಸ ಮಾಡುತ್ತದೆ. ನಮ್ಮ ಶರೀರದ ಕೆಲಸಗಳಿಗೆ ಪೂರಕವಾದ ರಾಸಾಯನಿಕಗಳನ್ನು ಬಳಸಿಕೊಂಡು, ಬೇಡವಾದ ವಸ್ತುಗಳನ್ನು ದೇಹದಿಂದ ಹೊರ ಹಾಕುವ ಕೆಲಸವು ಕಿಡ್ನಿಯದ್ದು. ಒಮ್ಮೆ ಈ ಕಿಡ್ನಿ ಕೈಕೊಟ್ಟರೆ ಆರೋಗ್ಯ ಸ್ಥಿತಿಯು ಹದಗೆಟ್ಟಂತೆಯೇ ಸರಿ. ಈಗಾಗಲೇ ಪ್ರಪಂಚದಾದಂತ್ಯ ಅನೇಕರು ಕಿಡ್ನಿ ಅಂಗದ ವೈಫಲ್ಯದಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗಳು ಏರಿಕೆ ಕಾಣುತ್ತಲೇ ಇದೆ. ಮದ್ಯಪಾನ, ನೋವು ನಿವಾರಕ ಮಾತ್ರೆಗಳ ಸೇವನೆ, ಆಹಾರ ಶೈಲಿಯಿಂದಾಗಿ ಕಿಡ್ನಿ ಆರೋಗ್ಯವು ಹಾಳಾಗುತ್ತಿದೆ. ಹೀಗಾಗಿ ಕಿಡ್ನಿ ಆರೋಗ್ಯದ ಬಗ್ಗೆ ಗಮನ ಹರಿಸುವ ಅಗತ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಮಾರ್ಚ್ 14 ರಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಕಿಡ್ನಿ ದಿನದ ಇತಿಹಾಸ:

2006ರಲ್ಲಿ ಇಂಟರ್​ನ್ಯಾಷನಲ್​ ಸೊಸೈಟಿ ಆಫ್​ ನೆಫ್ರೋಲಾಜಿ ಮತ್ತು ಇಂಟರ್​ನ್ಯಾಷನಲ್​ ಫೆಡರೇಷನ್​ ಆಫ್​ ಕಿಡ್ನಿ ಫೌಂಡೇಶನ್​ ಜಂಟಿಯಾಗಿ ಈ ವಿಶ್ವ ಕಿಡ್ನಿ ದಿನವನ್ನು ಆಚರಿಸಲು ಮುಂದಾಯಿತು. ಕಿಡ್ನಿ ಆರೋಗ್ಯ ಹಾಗೂ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶವನ್ನು ಹೊಂದಿತ್ತು. 2006ರಲ್ಲಿ 66 ದೇಶಗಳು ಒಟ್ಟಿಗೆ ಈ ಕಿಡ್ನಿ ದಿನವನ್ನು ಆಚರಿಸಿತು. ಇದೀಗ 88 ದೇಶಗಳು ವಿಶ್ವ ಕಿಡ್ನಿ ದಿನವನ್ನು ಆಚರಿಸುವ ಮೂಲಕ ಕಿಡ್ನಿ ಆರೋಗ್ಯದ ಕುರಿತು ಜಾಗೃತಿಯನ್ನು ಮೂಡಿಸುತ್ತಿದೆ.

ಇದನ್ನೂ ಓದಿ: ನೀರು ಕುಡಿದ್ರು ಬಿಕ್ಕಳಿಕೆ ನಿಲ್ಲುತ್ತಿಲ್ವಾ? ಈ ಮನೆ ಮದ್ದನ್ನೊಮ್ಮೆ ಟ್ರೈ ಮಾಡಿ

ವಿಶ್ವ ಕಿಡ್ನಿ ದಿನದ ಮಹತ್ವ :

ಜಾಗತಿಕವಾಗಿ, ವಿಶ್ವದಾದ್ಯಂತ ಕಿಡ್ನಿ ಸಂಬಂಧಿ ರೋಗಗಳ ಬಗ್ಗೆ ಅರಿವು ಜಾಗೃತಿ ಮೂಡಿಸುವ ಸದುದ್ದೇಶವನ್ನು ಹೊಂದಿದೆ. ಪ್ರಪಂಚದಲ್ಲಿರುವ ಜನರಲ್ಲಿ ಕಿಡ್ನಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ಮೂಡಿಸುವ ಕೆಲಸವನ್ನು ಮಾಡಲಾಗುತ್ತದೆ. ಈ ದಿನದಂದು ಮಾಹಿತಿಯನ್ನು ನೀಡುವ ಮುಖೇನ ಮೂತ್ರಪಿಂಡದ ಕಾಯಿಲೆಯ ಬರುವ ಸಾಧ್ಯತೆಯನ್ನು ಕಡಿಮೆ ಮಾಡುವ ಗುರಿಯನ್ನು ಇಟ್ಟುಕೊಂಡಿದೆ. ವಿಶ್ವ ಕಿಡ್ನಿ ದಿನದಂದು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಸಾರ್ವಜನಿಕರಿಗಾಗಿ ಮಾಹಿತಿ ಸೆಮಿನಾರ್​ ಹಾಗೂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಿ ಈ ಮೂಲಕ ಕಿಡ್ನಿ ಆರೋಗ್ಯದ ಪ್ರಾಮುಖ್ಯತೆ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ