World Mental Health Day 2023: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇದರ ಇತಿಹಾಸ, ಈ ಬಾರಿಯ ಥೀಮ್ ಏನು?

ವಿಶ್ವ ಮಾನಸಿಕ ಆರೋಗ್ಯ ದಿನವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಾನಸಿಕ ಆರೋಗ್ಯವನ್ನು ಬೆಂಬಲಿಸುವ ಪ್ರಯತ್ನಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ. ಈ ಬಾರಿಯ ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ 'ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು'.

World Mental Health Day 2023: ಇಂದು ವಿಶ್ವ ಮಾನಸಿಕ ಆರೋಗ್ಯ ದಿನ; ಇದರ ಇತಿಹಾಸ, ಈ ಬಾರಿಯ ಥೀಮ್ ಏನು?
ವಿಶ್ವ ಮಾನಸಿಕ ಆರೋಗ್ಯ ದಿನImage Credit source: shutter stock
Follow us
ಸುಷ್ಮಾ ಚಕ್ರೆ
|

Updated on: Oct 10, 2023 | 7:19 AM

ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಪ್ರತಿ ವರ್ಷವೂ ಅಕ್ಟೋಬರ್ 10ರಂದು ಆಚರಿಸಲಾಗುತ್ತದೆ. ವ್ಯಕ್ತಿಯ ಮಾನಸಿಕ ಯೋಗಕ್ಷೇಮದ ಪ್ರಾಮುಖ್ಯತೆ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಪ್ರತಿ ವರ್ಷವೂ ಮಾನಸಿಕ ಆರೋಗ್ಯ ಸಮಸ್ಯೆಗಳು, ಅವುಗಳನ್ನು ನಿರ್ವಹಿಸುವ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಸೆಮಿನಾರ್‌ಗಳು, ಕಾರ್ಯಾಗಾರಗಳು ಮತ್ತು ಸಮ್ಮೇಳನಗಳಂತಹ ಚಟುವಟಿಕೆಗಳನ್ನು ಜಾಗತಿಕವಾಗಿ ಆಯೋಜಿಸಲಾಗುತ್ತದೆ.

ನಮ್ಮ ದೈಹಿಕ ಕಾರ್ಯಗಳಿಗೆ ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಖಿನ್ನತೆ ಸೇರಿದಂತೆ ಮಾನಸಿಕ ಆರೋಗ್ಯ ಸಮಸ್ಯೆಗಳು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ ದೈಹಿಕ ಆರೋಗ್ಯ ಮತ್ತು ವ್ಯಕ್ತಿಗಳ ಜೀವನೋಪಾಯದ ಮೇಲೂ ಪರಿಣಾಮ ಬೀರುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರಪಂಚದಾದ್ಯಂತ 8 ಜನರಲ್ಲಿ ಒಬ್ಬರು ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಅದರಲ್ಲೂ ಯುವಪೀಳಿಗೆ ಈ ಮಾನಸಿಕ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿರುವುದು ಆತಂಕದ ಸಂಗತಿಯಾಗಿದೆ. ಬಹುತೇಕರು ಇದಕ್ಕೆ ಮನಶಾಸ್ತ್ರಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಅನೇಕ ಜನರು ಇದನ್ನು ಒಂದು ರೋಗವೆಂದು ಒಪ್ಪಿಕೊಳ್ಳುವುದೂ ಇಲ್ಲ, ವೈದ್ಯರ ಬಳಿ ತೆರಳುವುದೂ ಇಲ್ಲ. ಮಾನಸಿಕ ರೋಗಿಗಳನ್ನು ನಿಕೃಷ್ಟವಾಗಿ ಕಾಣುವ ಪದ್ಧತಿ ಇನ್ನೂ ನಿಂತಿಲ್ಲ. ಇದರಿಂದ ಅವರು ಇನ್ನಷ್ಟು ಕೀಳರಿಮೆ ಅನುಭವಿಸುತ್ತಾರೆ.

ಇದನ್ನೂ ಓದಿ: ಮಾನಸಿಕ ಒತ್ತಡದಿಂದ ಮೈಗ್ರೇನ್ ಬರುತ್ತಾ?

ವಿಶ್ವ ಮಾನಸಿಕ ಆರೋಗ್ಯ ದಿನವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಾನಸಿಕ ಆರೋಗ್ಯವನ್ನು ಬೆಂಬಲಿಸುವ ಪ್ರಯತ್ನಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ.

ಮಾನಸಿಕ ಆರೋಗ್ಯ ದಿನದ ಇತಿಹಾಸ:

ಮಾನಸಿಕ ಆರೋಗ್ಯ ಜಾಗೃತಿಗೆ ಮೀಸಲಾದ ಈ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992ರಲ್ಲಿ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ನಡೆದ ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ ಕಾಂಗ್ರೆಸ್‌ನಲ್ಲಿ ಪ್ರಸ್ತಾಪಿಸಲಾಯಿತು. ಈ ಪ್ರಸ್ತಾವನೆಯ ಅನುಮೋದನೆಯ ನಂತರ ಮೊದಲ ಮಾನಸಿಕ ಆರೋಗ್ಯ ದಿನವನ್ನು 1992ರ ಅಕ್ಟೋಬರ್ 10ರಂದು ಆಚರಿಸಲಾಯಿತು. ವರ್ಲ್ಡ್ ಫೆಡರೇಶನ್ ಫಾರ್ ಮೆಂಟಲ್ ಹೆಲ್ತ್ ವಿಶ್ವಾದ್ಯಂತ ಮಾನಸಿಕ ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವಲ್ಲಿ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳ ಹಕ್ಕುಗಳನ್ನು ಸಮರ್ಥಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಇದನ್ನೂ ಓದಿ: World Mental Health Day 2023: ಮಾನಸಿಕ ಆರೋಗ್ಯ ದಿನವನ್ನು ಏಕೆ ಆರಿಸಲಾಗುತ್ತದೆ? ಅದರ ಇತಿಹಾಸ, ಮಹತ್ವ ಇಲ್ಲಿದೆ 

ವಿಶ್ವ ಮಾನಸಿಕ ಆರೋಗ್ಯ ದಿನ- 2023ರ ಥೀಮ್:

2023ರ ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ ‘ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬುದಾಗಿದೆ. ಈ ಪರಿಕಲ್ಪನೆಯನ್ನು ನಮ್ಮ ಜೀವನ ಮತ್ತು ಸಮಾಜಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಇರುವ ಪೂರ್ವಗ್ರಹವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ರೂಪಿಸಲಾಗಿದೆ. ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ದೈಹಿಕ ಆರೋಗ್ಯದ ಸಮಸ್ಯೆ ಮತ್ತು ಕಡಿಮೆ ಜೀವಿತಾವಧಿಯನ್ನು ಅನುಭವಿಸುತ್ತಾರೆ ಎನ್ನಲಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್