ನಮ್ಮ ದೈನಂದಿನ ಆಹಾರ ಭಾಗವಾಗಿರುವ ಹಾಲು ಆರೋಗ್ಯಕ್ಕೆ ಒಳ್ಳೆಯದು ಎನ್ನುವ ವಿಚಾರವು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ ಡಿ, ವಿಟಮಿನ್ ಬಿ 12, ಕಬ್ಬಿಣ, ಅಯೋಡಿನ್, ಮೆಗ್ನೀಸಿಯಮ್, ಸತು, ರಂಜಕ, ಫೋಲೇಟ್‌ಗಳು, ಪ್ರೋಟೀನ್, ಪೊಟ್ಯಾಸಿಯಮ್, ಆರೋಗ್ಯಕರ ಕೊಬ್ಬು, ಪ್ರೋಟೀನ್‌ಗಳು, ಅಮೈನೋ ಆಮ್ಲಗಳು ಹೇರಳವಾಗಿದ್ದು, ಈ ಹಾಲಿನ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಹಾಲು ದಿನವನ್ನು ಆಚರಣೆ ಮಾಡಲಾಗುತ್ತದೆ.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಆಹಾರ ಮತ್ತು ಕೃಷಿ ಸಂಸ್ಥೆಯು 2001ರಲ್ಲಿ ವಿಶ್ವ ಹಾಲು ದಿನದ ಆಚರಣೆಯನ್ನು ಪ್ರಾರಂಭಿಸಿತು. 2016ರ ವೇಳೆಗೆ ಈ ದಿನವನ್ನು ವಿಶ್ವದಾದ್ಯಂತ ಸುಮಾರು 40 ಕ್ಕೂ ಹೆಚ್ಚು ರಾಷ್ಟ್ರಗಳು ಆಚರಿಸಲಾಯಿತು. ಪ್ರಸ್ತುತ ವಿಶ್ವ ಹಾಲು ದಿನವನ್ನು 100 ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತದೆ. ದೈನಂದಿನ ಆಹಾರದ ಭಾಗವಾಗಿರುವ ಹಾಲಿನ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಡೈರಿ ಕ್ಷೇತ್ರಗಳನ್ನು ಉತ್ತೇಜಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಈ ದಿನದಂದು ವಿವಿಧ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತವೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: