World Milk Day 2025: ವಿಶ್ವ ಹಾಲು ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ? ಈ ವಿಶೇಷ ದಿನದ ಹಿನ್ನೆಲೆ ತಿಳಿಯಿರಿ
ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಹಾಲು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದಕ್ಕಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಹಾಲು ಕುಡಿತಾರೆ. ಹೀಗೆ ಜಾಗತಿಕ ಆಹಾರವಾಗಿ ಹಾಲಿನ ಮಹತ್ವವನ್ನು ಎಲ್ಲರಿಗೂ ತಿಳಿಸಲು, ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಈ ಉದ್ಯಮಕ್ಕೆ ಬೆಂಬಲ ನೀಡಲು ಪ್ರತಿವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ.

ಕ್ಯಾಲ್ಸಿಯಂ ಸೇರಿದಂತೆ ಹಲವಾರು ಪೋಷಕಾಂಶಗಳನ್ನು ಹೊಂದಿರುವ ಹಾಲು (Milk) ನಮ್ಮ ದೇಹವನ್ನು ಆರೋಗ್ಯಕರವಾಗಿಡುವಲ್ಲಿ, ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮೂಳೆಗಳನ್ನು ಬಲಪಡಿಸುವುದರಿಂದ ಹಿಡಿದು ಸ್ನಾಯುಗಳ ಬೆಳವಣಿಗೆಯ ವರೆಗೆ ಹಾಲು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ. ಇದಕ್ಕಾಗಿಯೇ ಪ್ರತಿನಿತ್ಯ ಒಂದು ಲೋಟ ಹಾಲನ್ನು ಕುಡಿಯಲು ಸಲಹೆ ನೀಡುತ್ತಾರೆ. ಹೀಗೆ ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಹಾಲು ದೇಹದ ಒಟ್ಟಾರೆ ಬೆಳವಣಿಗೆಗೆ ಬಹಳ ಮುಖ್ಯ. ಹಾಲಿನ ಈ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್ 1 ರಂದು ವಿಶ್ವ ಹಾಲು (World Milk Day) ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಹಾಲು ದಿನದ ಇತಿಹಾಸ:
ಡೈರಿ ಉದ್ಯಮವನ್ನು ಗುರುತಿಸಲು ಮತ್ತು ಹಾಲಿನ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯು 2001 ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ವಿಶ್ವ ಹಾಲು ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಇದನ್ನೂ ಓದಿ: ಆಲೂಗಡ್ಡೆ ಪ್ರಿಯರೇ… ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?
ವಿಶ್ವ ಹಾಲು ದಿನದ ಆಚರಣೆಯ ಉದ್ದೇಶವೇನು?
ಹಾಲು ದಿನವನ್ನು ಆಚರಿಸುವ ಉದ್ದೇಶವು ಜನರಿಗೆ ಅದರ ಪ್ರಯೋಜನಗಳು ಮತ್ತು ಮಹತ್ವವನ್ನು ಅರ್ಥಮಾಡಿಸುವುದು ಹಾಗೂ ಹಾಲು ಸ್ಥಳೀಯ ಆರ್ಥಿಕತೆ ಮತ್ತು ಸಮುದಾಯಗಳಿಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ಜನರಿಗೆ ತಿಳಿಸುವುದಾಗಿದೆ.
FAO ಪ್ರಕಾರ, ಸುಮಾರು ಆರು ಶತಕೋಟಿ ಜನರು ಡೈರಿ ಉತ್ಪನ್ನಗಳನ್ನು ಸೇವಿಸುತ್ತಾರೆ. ಇಷ್ಟೇ ಅಲ್ಲ, ಡೈರಿ ವ್ಯವಹಾರವು ಒಂದು ಶತಕೋಟಿಗೂ ಹೆಚ್ಚು ಜನರಿಗೆ ಜೀವನೋಪಾಯವನ್ನು ಗಳಿಸಲು ಸಹಾಯ ಮಾಡಿದೆ. ಹಾಗಾಗಿ ಜಗತ್ತಿನಲ್ಲಿ ಡೈರಿ ಉತ್ಪನ್ನಗಳನ್ನು ಉತ್ತೇಜಿಸಲು ಮತ್ತು ಅವುಗಳಿಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಒದಗಿಸುಲು ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








