AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Mosquito Day 2021: ಸೊಳ್ಳೆಗಳಿಂದ ಬರುವ ರೋಗಗಳಿಂದ ಬಚಾವಾಗಬೇಕೆ? ಇಲ್ಲಿದೆ‌ ಸುಲಭದ ಮಾರ್ಗಗಳು

ವಿಶ್ವ ಸೊಳ್ಳೆ ದಿನ 2021: ಗುಯ್ .. ಎಂದು ಕಿವಿಯ ಬಳಿಯೇ ಬಂದು ಧ್ವನಿ ಎತ್ತುತ್ತಾ ರಕ್ತ ಹೀರುವ ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾದಂತಹ ಮಾರಣಾಂತಿಕ ರೋಗ ಹರಡುತ್ತದೆ.

World Mosquito Day 2021: ಸೊಳ್ಳೆಗಳಿಂದ ಬರುವ ರೋಗಗಳಿಂದ ಬಚಾವಾಗಬೇಕೆ? ಇಲ್ಲಿದೆ‌ ಸುಲಭದ ಮಾರ್ಗಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 20, 2021 | 10:33 AM

Share

ಇಂದು ಆಗಸ್ಟ್ 20 ವಿಶ್ವ ಸೊಳ್ಳೆ ದಿನ. ಈ ದಿನವು 1897ರಲ್ಲಿ ಬ್ರಿಟಿಷ್ ವೈದ್ಯರಾದ ರೊನಾಲ್ಡ್ ರಾಸ್ ಕಂಡು ಹಿಡಿದ ಆವಿಷ್ಕಾರವನ್ನು ಗುರುತಿಸಿದೆ. ಮನುಷ್ಯರಿಗೆ ಹೆಣ್ಣು ಸೊಳ್ಳೆಯ ಕಡಿತದಿಂದ ಮಲೇರಿಯಾ ರೋಗ ಹರಡುತ್ತದೆ ಎಂದು ಕಂಡು ಹಿಡಿದರು. ಗುಯ್ .. ಎಂದು ಕಿವಿಯ ಬಳಿಯೇ ಬಂದು ಧ್ವನಿ ಎತ್ತುತ್ತಾ ರಕ್ತ ಹೀರುವ ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾದಂತಹ ಮಾರಣಾಂತಿಕ ರೋಗ ಹರಡುತ್ತದೆ. ಹೀಗಿರುವಾಗ ಈ ವರ್ಷದ ಥೀಮ್.. ಶೂನ್ಯ ಮಲೇರಿಯಾ ಪ್ರಕರಣಗಳನ್ನು ತಲುಪುವುದು. ಹಾಗಿರುವಾಗ ಸೊಳ್ಳೆಗಳಿಂದ ಹರಡುವ ರೋಗ ಸಮಸ್ಯೆಯನ್ನು ತಡೆಗಟ್ಟುವ ಕ್ರಮಗಳು ಈ ಕೆಳಗಿನಂತಿವೆ.

ಸೊಳ್ಳೆಗಳಿಂದ ಹರಡುವ ರೋಗಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಕೆಲವು ವಿಧಾನಗಳು ಇಲ್ಲಿವೆ: ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ನೀರು ನಿಂತ ಸ್ಥಳಗಳು ಸೊಳ್ಳೆಗಳ ಸಂತಾನೋತ್ಪತ್ತಿ ತಾಣವಾಗಿದೆ. ಸೊಳ್ಳೆಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ತಪ್ಪಿಸಲು ನಿಮ್ಮ ಸುತ್ತಮುತ್ತಲಿನ ಸ್ಥಳ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ನೀವಿರುವ ಜಾಗ ಸ್ವಚ್ಛವಾಗಿದ್ದರೆ ಸೊಳ್ಳೆಗಳ ಮನೆಯೊಳಗೆ ಪ್ರವೇಶಿಸುವುದಿಲ್ಲ. ಇದರಿಂದ ಹರಡುವ ಅನೇಕ ರೋಗಗಳಿಂದ ದೂರವಿರಬಹುದು.

ಸೊಳ್ಳೆ ಪರದೆ ಬಳಕೆ ಸೊಳ್ಳೆ ಕಡಿತದಿಂದ ಪರಿಹಾರ ಕಂಡುಕೊಳ್ಳಲು ಕ್ರೀಮ್​ ಬಳಸಿ. ಸೊಳ್ಳೆಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಸೊಳ್ಳೆ ಪರದೆಯನ್ನು ಉಪಯೋಗಿಸಿ. ಇವುಗಳು ನಿಮಗೆ ರಕ್ಷಣೆಗಳನ್ನು ನೀಡುತ್ತವೆ. ಜತೆಗೆ ರಾತ್ರಿಯಲ್ಲಿ ನಿಮಗೆ ಯಾವುದೇ ತೊಂದರೆಯಾಗದೇ ಚೆನ್ನಾಗಿ ನಿದ್ರೆ ಮಾಡಬಹುದು.

ಸಂಜೆಯಾಗುತ್ತಿದ್ದಂತೆಯೇ ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಿ ಸಾಮಾನ್ಯವಾಗಿ ರಾತ್ರಿ ವೇಳೆ ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸುತ್ತದೆ. ಹಾಗಾಗಿ ನಿಮ್ಮನ್ನು ನೀವು ಸೊಳ್ಳೆಗಳ ಕಡಿತದಿಂದ ರಕ್ಷಿಸಿಕೊಳ್ಳಲು ಮನೆಯ ಕಿಟಕಿಯನ್ನು, ಬಾಗಿಲುಗಳನ್ನು ಮುಚ್ಚಿ. ಮನೆಯೊಳಗೆ ಗಾಳಿ- ಬೆಳಕು ಸರಿಯಾಗಿರುವಂತೆ ನೋಡಿಕೊಳ್ಳಿ. ಜತೆಗೆ ಯಾವಾಗಲೂ ಮನೆ ಸ್ವಚ್ಛವಾಗಿರುವಂತೆ ಕಾಯ್ದುಕೊಳ್ಳಿ.

ಇದನ್ನೂ ಓದಿ:

Health Tips: ಸೊಳ್ಳೆ ಕಡಿತದ ನಂತರ ಉಂಟಾಗುವ ಕಿರಿಕಿರಿಯಿಂದ ಹೊರಬರಲು ಈ 5 ಪದಾರ್ಥಗಳನ್ನು ಬಳಸಿ

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!