AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Nature Conservation Day 2021: ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ, ಮಹತ್ವ ಮತ್ತು ಇತಿಹಾಸ

ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಭೂಮಿಯ ನೈಸರ್ಗಿಕ ಪರಿಸರದಿಂದ ದೂರವಾಗುತ್ತಿರುವ ಅಥವಾ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳು ಮತ್ತು ಮರಗಳನ್ನು ಸಂರಕ್ಷಿಸುವುದು.

World Nature Conservation Day 2021: ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ, ಮಹತ್ವ ಮತ್ತು ಇತಿಹಾಸ
ವಿಶ್ವ ಪ್ರಕೃತಿ ಸಂರಕ್ಷಣಾ ದಿನ
TV9 Web
| Edited By: |

Updated on: Jul 28, 2021 | 8:19 AM

Share

ಮಾನವ ಆರೋಗ್ಯಯುತವಾಗಿ ಜೀವನ ನಡೆಸಲು ಪ್ರಕೃತಿಯಲ್ಲಿನ ನೀರು, ಗಾಳಿ, ಗೀಡ, ಮರ ಪ್ರತಿಯೊಂದು ಮುಖ್ಯ. ಹೀಗಾಗಿಯೇ ಆರೋಗ್ಯಕರ ಪರಿಸರವು, ಸ್ಥಿರ ಮತ್ತು ಆರೋಗ್ಯಯುತ ಮಾನವ ಸಮಾಜಕ್ಕೆ ಅಡಿಪಾಯವಾಗಿದೆ ಎಂದು ಹೇಳಲಾಗುತ್ತದೆ. ಆದರೆ ಇತ್ತೀಚೆಗೆ ಈ ಪರಿಸ್ಥಿತಿ ಬದಲಾಗಿದ್ದು, ತೀವ್ರವಾಗಿ ಜನಸಂಖ್ಯೆ ಹೆಚ್ಚಾಗುತ್ತಿರುವುದರ ಜತೆಗೆ, ಪರಿಸರದ ಮೇಲಿನ ಕಾಳಜಿ ದೂರವಾಗುತ್ತಿದೆ. ಪ್ಲಾಸ್ಟಿಕ್ ಬಳಕೆ, ಮರಗಳ ನಾಶ, ನೀರಿನ ಮಿತ ಬಳಕೆ ಇಲ್ಲದೆ ಭೂಮಿ ಬರಡಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಿ ಈ ಸಮಸ್ಯೆಗಳನ್ನು ಸುಧಾರಿಸಲು ಮತ್ತು ಜನರನ್ನು ಈ ಕುರಿತು ಜಾಗೃತರನ್ನಾಗಿ ಮಾಡಲು, ಪ್ರತಿ ವರ್ಷ ಜುಲೈ 28 ಅನ್ನು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನಾಗಿ( World Nature Conservation Day) ಆಚರಿಸಲಾಗುತ್ತದೆ.

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಭೂಮಿಯ ನೈಸರ್ಗಿಕ ಪರಿಸರದಿಂದ ದೂರವಾಗುತ್ತಿರುವ ಅಥವಾ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳು ಮತ್ತು ಮರಗಳನ್ನು ಸಂರಕ್ಷಿಸುವುದು.

ಮಹತ್ವ ಭೂ ತಾಯಿಯನ್ನು ರಕ್ಷಿಸುವಲ್ಲಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾಡುವುದು ಬಹಳ ಮುಖ್ಯ. ನೀರು, ಗಾಳಿ, ಮಣ್ಣು, ಸಸ್ಯವರ್ಗ, ಖನಿಜಗಳು, ಪ್ರಾಣಿ ಹೀಗೆ ಪ್ರಕೃತಿಯ ವಿವಿಧ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಭೂಮಿಯ ನೈಸರ್ಗಿಕ ಸೌಂದರ್ಯದಲ್ಲಿನ ಸಮತೋಲನವನ್ನು ಕಾಪಾಡಿಕೊಳ್ಳಬಹುದು.

ಖ್ಯಾತ ರಷ್ಯಾದ ಬರಹಗಾರ ಲಿಯೋ ಟಾಲ್‌ಸ್ಟಾಯ್ ಅವರ ಪ್ರಕಾರ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಪರ್ಕವನ್ನು ಮುರಿಯಬಾರದು ಎಂಬುವುದು ಪ್ರಕೃತಿ ಸಂರಕ್ಷಣೆಯ ಮೊದಲ ಷರತ್ತಾಗಿದೆ.

ಆರೋಗ್ಯಕರ ಪರಿಸರವು ಸ್ಥಿರ ಮತ್ತು ಉತ್ತಮ ಸಮಾಜಕ್ಕೆ ಅಡಿಪಾಯವಾಗಿದೆ. ಪ್ರಸ್ತುತ ಹಾಗೂ ಭವಿಷ್ಯದ ಪೀಳಿಗೆಯ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ವಿಶ್ವ ಪ್ರಕೃತಿ ಸಂರಕ್ಷಣಾ ದಿನವು ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಸುಸ್ಥಿರವಾಗಿ ಅದನ್ನು ನಿರ್ವಹಿಸಲು ನಾವೆಲ್ಲರೂ ಕೈ ಜೋಡಿಸಬೇಕು. ಆಗ ಮಾತ್ರ ಪರಿಸರದ ಕಾಳಜಿ ಸಾಧ್ಯ. ಅಲ್ಲದೇ ಕೇವಲ ಒಂದು ದಿನಕ್ಕೆ ಮಾತ್ರ ಪರಿಸರ ಉಳಿಸುವ ಮತ್ತು ಮರ-ಗಿಡಗಳನ್ನು ಬೆಳೆಸುವ ಕಾರ್ಯ ಆಗಬಾರದು ಎಂಬ ಕಾಳಜಿ ಇದ್ದರೆ, ನೈಸರ್ಗಿಕ ಸಂಪತ್ತು ಸದಾ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.

ಇತಿಹಾಸ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಇತಿಹಾಸ ಮತ್ತು ಮೂಲದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಆದರೆ ಜುಲೈ 28 ರಂದು ಇದನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ, ಜನರು ಪ್ರಕೃತಿಯನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡುವುದು ಮತ್ತು ಅದನ್ನು ಸಂರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು. ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ದುರುಪಯೋಗದಿಂದಾಗಿ ಜಾಗತಿಕ ತಾಪಮಾನ ಏರಿಕೆ, ವಿವಿಧ ರೋಗಗಳು, ನೈಸರ್ಗಿಕ ವಿಕೋಪಗಳು ಇತ್ಯಾದಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಇದನ್ನು ತಡೆಯುವುದು ಈಗ ಅನಿವಾರ್ಯ ಎಂಬುವುದನ್ನು ಮನವರಿಕೆ ಮಾಡಿಕೊಡುವುದು ಈ ದಿನದ ಮುಖ್ಯ ಉದ್ದೇಶ.

ಇದನ್ನೂ ಓದಿ: ಐತಿಹಾಸಿಕ ವೃಷಭಾದ್ರಿ ಬೆಟ್ಟದಲ್ಲಿ ಕೃತಕ ಮರಳು ಉತ್ಪಾದನಾ ಘಟಕ; ಪರಿಸರ ಹೋರಾಟ ಸಮಿತಿ, ಗ್ರಾಮಸ್ಥರಿಂದ ವಿರೋಧ

ಪರಿಸರ ವ್ಯವಸ್ಥೆಗೆ ಹಾನಿ ಮಾಡುತ್ತಿವೆ ಸರೋವರಗಳಿಗೆ ಎಸೆಯುತ್ತಿರುವ ಗೋಲ್ಡ್​ ಫಿಶ್​

Follow Us
Web contact
Web contact

TV9 Kannada

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ