World Nature Conservation Day 2024: ವಿಶ್ವ ಪ್ರಕೃತಿ ಸಂರಕ್ಷಣಾ ದಿನ; ಮನುಷ್ಯನ ದುರಾಸೆಗೆ ಬರಿದಾಗದಿರಲಿ ಪ್ರಕೃತಿ

ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ನಾಶ ಪಡಿಸುತ್ತಾ ಹೋಗುತ್ತಿದ್ದಾನೆ. ಆದರೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವತ್ತ ಗಮನ ಹರಿಸದಿದ್ದರೆ ನಮ್ಮ ಮುಂದಿನ ಪೀಳಿಗೆಯವರು ಸಂಕಷ್ಟಕ್ಕೆ ಈಡಾಗುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Nature Conservation Day 2024: ವಿಶ್ವ ಪ್ರಕೃತಿ ಸಂರಕ್ಷಣಾ ದಿನ; ಮನುಷ್ಯನ ದುರಾಸೆಗೆ ಬರಿದಾಗದಿರಲಿ ಪ್ರಕೃತಿ
World Nature Conservation Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on:Jul 28, 2024 | 10:50 AM

ಮಾನವನು ದಿನ ಕಳೆಯುತ್ತಿದ್ದಂತೆ ತನ್ನ ಅತಿಯಾಸೆಯಿಂದ ಪ್ರಕೃತಿಯನ್ನು ಕೊಳ್ಳೆ ಹೊಡೆಯುತ್ತಿದ್ದಾನೆ, ಹೀಗಾಗಿ ಈ ಪರಿಸರವೇ ಬರಿದಾಗುತ್ತಿದೆ. ನೈಸರ್ಗಿಕ ಸಂಪನ್ಮೂಲಗಳಾದ ಗಾಳಿ, ನೀರು, ಮಣ್ಣು, ಖನಿಜಗಳು, ಪ್ರಾಣಿಪಕ್ಷಿಗಳು ಹಾಗೂ ಸಸ್ಯವರ್ಗಗಳು ಕ್ಷೀಣಿಸುತ್ತಿದೆ. ಅದಲ್ಲದೇ, ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಸೇರಿದಂತೆ ಇನ್ನಿತ್ತರ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗೆ ಮುಂದುವರೆದರೆ ಈ ಭೂಮಿಯೂ ಬರಿದಾಗಿ ನಮ್ಮ ಮುಂದಿನ ಪೀಳಿಗೆಯವರು ಬದುಕುವುದೇ ಕಷ್ಟವಾಗಬಹುದು. ಹೀಗಾಗಿ ಪರಿಸರ ಸಂರಕ್ಷಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಇತಿಹಾಸ:

ವಿಶ್ವ ಪ್ರಕೃತಿ ಸಂರಕ್ಷಣಾ ದಿನವು ಯಾವಾಗ ಆಚರಿಸಲಾಯಿತು ಎನ್ನುವುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದರೆ ಪ್ರಕೃತಿಯೂ ನೀಡಿದ ಸಂಪನ್ಮೂಲಗಳನ್ನು ದುರುಪಯೋಗ ಮಾಡದೇ, ನಮ್ಮ ಮುಂದಿನ ಪೀಳಿಗೆಯವರಿಗೆ ಉಳಿಸುವ ಸಲುವಾಗಿ ಅದನ್ನು ಹೇಗೆ ಸಂರಕ್ಷಿಸಬೇಕು ಎನ್ನುವ ಕುರಿತು ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರದಂದು ಸ್ನೇಹಿತರ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ:

ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ, ಜನರು ಪ್ರಕೃತಿಯನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಆತ್ಮಾವಲೋಕನ ಮಾಡುವುದು ಮತ್ತು ಅದನ್ನು ಸಂರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು. ಅದಲ್ಲದೇ ಪ್ರತಿಯೊಬ್ಬರಿಗೂ ಪ್ರಕೃತಿಯನ್ನು ಉಳಿಸುವ ಬಗ್ಗೆ ಅರಿವು ಮೂಡಿಸುವುದಾಗಿದೆ. ಈ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪ್ರಕೃತಿಯನ್ನು ಉಳಿಸಲು ಜಾಗೃತಿ ಮೂಡಿಸಲು ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:49 am, Sun, 28 July 24

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ