AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Oceans Day 2025: ವಿಶ್ವ ಸಾಗರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸವನ್ನು ತಿಳಿಯಿರಿ

ಸಾಗರದ ಮಹತ್ವ ಆಗಾಧವಾಗಿದೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಮಾನವನ ಜೀವನದಲ್ಲಿ ಸಾಗರಗಳ ಪ್ರಮುಖ ಪಾತ್ರ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಪ್ರಪಂಚದಾದ್ಯಂತ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜೂನ್‌ 8 ರಂದು ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

World Oceans Day 2025: ವಿಶ್ವ ಸಾಗರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸವನ್ನು ತಿಳಿಯಿರಿ
ವಿಶ್ವ ಸಾಗರ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 08, 2025 | 10:26 AM

Share

ಭೂಮಿಯ ಶೇ. 70 ರಷ್ಟು ಭಾಗವು ಸಾಗರಗಳಿಂದ (Oceans) ಆಮೃತವಾಗಿದ್ದು, ಇದು ಮಾನವ ಸೇರಿದಂತೆ ಭೂಮಿಯ ಮೇಲಿನ ಜೀವರಾಶಿಗಳಿಗೆ ಅನೇಕ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತದೆ. ಸಾಗರ ನೀರಿನ ಮೂಲ ಮಾತ್ರವಲ್ಲದೆ ಆಹಾರ, ಔಷಧಿಗಳು ಮತ್ತು ಜಾಗತಿಕ ಆರ್ಥಿಕತೆಯ ಭಾಗವಾಗಿದೆ. ಅಲ್ಲದೆ ಅದೆಷ್ಟೋ ಜನರ ಜೀವನೋಪಾಯವು ಸಾಗರದೊಂದಿಗೆ ಸಂಬಂಧವನ್ನು ಹೊಂದಿದೆ. ಆದರೆ ಇಂದು ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಸಮಸ್ಯೆಗಳು ಸಾಗರ ಹಾಗೂ ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಮಾನವನ ಜೀವನದಲ್ಲಿ ಸಾಗರಗಳ ಪ್ರಮುಖ ಪಾತ್ರ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಪ್ರಪಂಚದಾದ್ಯಂತ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಜೂನ್‌ 8 ರಂದು ವಿಶ್ವ ಸಾಗರ (World Oceans Day) ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಸಾಗರ ದಿನದ ಇತಿಹಾಸ:

1992 ರಲ್ಲಿ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಭೂ ಶೃಂಗಸಭೆಯಲ್ಲಿ ಕೆನಡಾ ಸರ್ಕಾರವು ವಿಶ್ವ ಸಾಗರ ದಿನದ ಆಚರಣೆಯನ್ನು ಮೊದಲು ಪ್ರಸ್ತಾಪಿಸಿತು. ಇದರ ನಂತರ, ಸಾಗರಗಳ ರಕ್ಷಣೆಗಾಗಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 8 ಅನ್ನು ‘ ವಿಶ್ವ ಸಾಗರ ದಿನ ‘ ಎಂದು ಆಚರಿಸಲು ಅಧಿಕೃತ ನಿರ್ಣಯವನ್ನು ಅಂಗೀಕರಿಸಿತು . ಅಂದಿನಿಂದ, ಪ್ರತಿ ವರ್ಷ ಜೂನ್ 8 ರಂದು ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ರಕ್ತ ಸಂಬಂಧಗಳ ಮೀರಿದ ಬಂಧವಿದು; ರಾಷ್ಟ್ರೀಯ ಬೆಸ್ಟ್‌ ಫ್ರೆಂಡ್ ದಿನದ ಮಹತ್ವವನ್ನು ತಿಳಿಯಿರಿ

ಇದನ್ನೂ ಓದಿ
Image
ರಾಷ್ಟ್ರೀಯ ಬೆಸ್ಟ್‌ ಫ್ರೆಂಡ್ ದಿನದ ಮಹತ್ವವನ್ನು ತಿಳಿಯಿರಿ
Image
ಪ್ರಕೃತಿ ಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ
Image
ಪರಿಸರ, ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ ಸೈಕಲ್‌ ಸವಾರಿ
Image
ಪೋಷಕರ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲಾಗದು

ವಿಶ್ವ ಸಾಗರ ದಿನವನ್ನು ಆಚರಿಸುವುದರ ಮಹತ್ವವೇನು ?

ಪ್ರತಿ ವರ್ಷ ಜೂನ್ 8 ರಂದು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತದೆ . ಇದನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಸಾಗರಗಳ ಪ್ರಾಮುಖ್ಯತೆ ಮತ್ತು ಸಮುದ್ರ ಸಂಪನ್ಮೂಲಗಳ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸುವುದು.  ವಾಸ್ತವವಾಗಿ, ಕಳೆದ ಹಲವಾರು ವರ್ಷಗಳಿಂದ, ಮಾಲಿನ್ಯದ ಸಮಸ್ಯೆ ಪ್ರಪಂಚದಾದ್ಯಂತ ದೊಡ್ಡದಾಗಿದೆ, ಸಾಗರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಸಾಗರಗಳ ಸಂರಕ್ಷಣೆಯ ಬಗ್ಗೆ ಈ ದಿನ ಜಾಗೃತಿ ಮೂಡಿಸಲಾಗುತ್ತದೆ.

ಸಾಗರಗಳು ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿವೆ. ಸಮುದ್ರ ವ್ಯವಸ್ಥೆಗಳನ್ನು ಸಂರಕ್ಷಿಸಲು, ಸುಸ್ಥಿರ ಮೀನುಗಾರಿಕೆ ಪದ್ಧತಿಗಳನ್ನು ಅಳವಡಿಸಿಕೊಳ್ಳಲು, ಸಾಗರ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾಗರಕ್ಕೆ  ಸಂಬಂಧಿಸಿದ ಇತರ ಪ್ರಮುಖ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಪ್ರತಿ ವರ್ಷ ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ . ಈ ವಿಶೇಷ ದಿನದಂದು, ಜನರಿಗೆ ಸಮುದ್ರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಮತ್ತು ಮಾಲಿನ್ಯದಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ