AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Paper Bag Day 2026: ವಿಶ್ವ ಪೇಪರ್‌ ಬ್ಯಾಗ್‌ ದಿನದ ಆಚರಣೆಯ ಇತಿಹಾಸ, ಮಹತ್ವದ ಸಂಪೂರ್ಣ ವಿವರ ಇಲ್ಲಿದೆ

ಕಾಗದ ಚೀಲಗಳು 100% ಮರುಬಳಕೆ ಮಾಡಬಹುದಾದವು ಮತ್ತು ಮುಖ್ಯವಾಗಿ ಅವುಗಳು ಒಂದೇ ತಿಂಗಳಲ್ಲಿ ಭೂಮಿಯಲ್ಲಿ ಕೊಳೆಯಬಲ್ಲದು. ಅಲ್ಲದೆ ಪ್ಲಾಸ್ಟಿಕ್ ಚೀಲಗಳಂತೆ ಪೇಪರ್ ಬ್ಯಾಗ್‌ಗಳು ಪ್ರಾಣಿಗಳಿಗೆ ಹಾಗೂ ಪರಿಸರಕ್ಕೆ ಹಾನಿಕಾರಕವಲ್ಲ. ಹಾಗಾಗಿ ಪ್ಲಾಸ್ಟಿಕ್‌ ಚೀಲಗಳ ಬಳಕೆಯನ್ನು ತ್ಯಜಿಸಿ, ಕಾಗದದ ಚೀಲಗಳನ್ನು ಬಳಸುವಂತೆ ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಜುಲೈ 12 ರಂದು ವಿಶ್ವ ಪೇಪರ್‌ ಬ್ಯಾಗ್‌ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

World Paper Bag Day  2026: ವಿಶ್ವ ಪೇಪರ್‌ ಬ್ಯಾಗ್‌ ದಿನದ ಆಚರಣೆಯ ಇತಿಹಾಸ, ಮಹತ್ವದ ಸಂಪೂರ್ಣ ವಿವರ ಇಲ್ಲಿದೆ
ವಿಶ್ವ ಪೇಪರ್‌ ಬ್ಯಾಗ್‌ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jul 11, 2026 | 9:48 PM

Share

ಪರಿಸರದ ಆರೋಗ್ಯದ ದೃಷ್ಟಿಯಿಂದ ಪ್ಲಾಸ್ಟಿಕ್‌ (Plastic) ಬಳಕೆ ಮಾಡಬೇಡಿ ಎಂದು ಎಷ್ಟೇ ಜಾಗೃತಿ ಕಾರ್ಯಗಳನ್ನು ಮಾಡಿದರೂ ಇಂದಿಗೂ ಪ್ಲಾಸ್ಟಿಕ್‌ ಬಳಕೆ ಕಡಿಮೆಯಾಗಿಲ್ಲ. ಇಂದಿಗೂ ಪ್ಲಾಸ್ಟಿಕ್‌ ಚೀಲಗಳ ಬಳಕೆ ವ್ಯಾಪಕವಾಗಿ ಹೆಚ್ಚಿದೆ. ಇವುಗಳು ಕೊಳೆಯಲು 50 ರಿಂದ 500 ವರ್ಷಗಳು ಬೇಕಾಗಿದ್ದು, ಇದು ಪರಿಸರದ ಮೇಲೆ ಗಂಭೀರ ಅಪಾಯವನ್ನು ಉಂಟು ಮಾಡುವುದು ಮಾತ್ರವಲ್ಲ ನಮ್ಮ ಆರೋಗ್ಯ ಹಾಗೂ ಪ್ರಾಣಿಗಳ ಮೇಲೂ ನಕಾರಾತ್ಮಕ ಪರಿಣಾಮವನ್ನು ಉಂಟುಮಾಡುತ್ತದೆ. ಹಾಗಾಗಿ ಪ್ಲಾಸ್ಟಿಕ್‌ ಬಳಕೆಯನ್ನು ಬಳಕೆಯನ್ನು ಕಡಿಮೆ ಮಾಡಲು ಪ್ಲಾಸ್ಟಿಕ್‌ ಚೀಲಗಳ ಬದಲಿಗೆ ಪೇಪರ್‌ ಚೀಲಗಳನ್ನೇ ಬಳಸಬೇಕು ಎಂದು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಜುಲೈ 12 ರಂದು ವಿಶ್ವ ಪೇಪರ್‌ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಪೇಪರ್ ಬ್ಯಾಗ್ ದಿನದ ಇತಿಹಾಸವೇನು?

ಪೇಪರ್ ಬ್ಯಾಗ್ ದಿನವನ್ನು ಈ ದಿನದಂದು ಆಚರಿಸುವ ನಿಖರವಾದ ಇತಿಹಾಸ ತಿಳಿದಿಲ್ಲ. ಆದರೆ ಈ ದಿನವು ವಿಲಿಯಂ ಗುಡೆಲ್ ರಚಿಸಿದ ಪೇಪರ್ ಬ್ಯಾಗ್ ಯಂತ್ರಕ್ಕೆ ಪೇಟೆಂಟ್ ಸಿಕ್ಕ ದಿನವನ್ನು ನೆನಪಿಸುತ್ತದೆ. ಅವರ ಪೇಪರ್ ಬ್ಯಾಗ್ ತಯಾರಿಸುವ ಯಂತ್ರಕ್ಕೆ 12 ನೇ ಜುಲೈ 1859 ರಂದು ಪೇಟೆಂಟ್ ನೀಡಲಾಯಿತು. ಆದ್ದರಿಂದ ಈ ನೆನಪಿಗಾಗಿ ಮತ್ತು ಪರಿಸರ ಸ್ನೇಹಿಯಾಗಿರುವ ಪೇಪರ್‌ ಬ್ಯಾಗ್‌ಗಳ ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷವೂ ಜುಲೈ 12 ರಂದು ವಿಶ್ವ ಪೇಪರ್ ಬ್ಯಾಗ್ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪೇಪರ್ ಬ್ಯಾಗ್ ದಿನದ ಮಹತ್ವವೇನು?

  • ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಬಿಟ್ಟು ಪೇಪರ್ ಬ್ಯಾಗ್‌ಗಳನ್ನು ಬಳಸುವಂತೆ ಜನರನ್ನು ಪ್ರೇರೇಪಿಸುವುದು ಈ ದಿನದ ಉದ್ದೇಶವಾಗಿದೆ.
  • ಈ ದಿನ ಪ್ಲಾಸ್ಟಿಕ್ ಚೀಲಗಳ ಬಳಕೆ ಪರಿಸರಕ್ಕೆ ಎಷ್ಟು ಹಾನಿಕಾರಕ ಎಂಬುದರ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
  • ಪ್ಲಾಸ್ಟಿಕ್‌ ಮಾಲಿನ್ಯದಿಂದ ಪರಿಸರವನ್ನು ಸಂರಕ್ಷಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.
  • ಪೇಪರ್ ಬ್ಯಾಗ್‌ಗಳನ್ನು ಬಳಸುವುದು ಪರಿಸರಕ್ಕೆ ತುಂಬಾ ಪ್ರಯೋಜನಕಾರಿ, ಅವುಗಳ ಬಳಕೆಯು ಪರಿಸರವನ್ನು ಉಳಿಸುವುದಲ್ಲದೆ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ. ಪ್ಲಾಸ್ಟಿಕ್ ಬದಲಿಗೆ ಪೇಪರ್ ಬ್ಯಾಗ್‌ಗಳನ್ನು ಬಳಸುವ ಮೂಲಕ ಮಾಲಿನ್ಯ ಮುಕ್ತ ಪರಿಸರಕ್ಕೆ ನಾವು ಕೊಡುಗೆ ನೀಡಬಹುದು ಎಂಬ ಸಂದೇಶವನ್ನು ನೀಡುವುದು ಪೇಪರ್ ಬ್ಯಾಗ್ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ: ವಿಶ್ವ ಜನಸಂಖ್ಯಾ ದಿನದ ಆಚರಣೆಯ ಇತಿಹಾಸ, ಮಹತ್ವ ತಿಳಿಯಿರಿ

ಕಾಗದದ ಚೀಲಗಳ ಪ್ರಯೋಜನಗಳೇನು?

  • ಪೇಪರ್ ಬ್ಯಾಗ್‌ಗಳನ್ನು ಬಳಸುವುದರಿಂದ ಹಲವು ಅನುಕೂಲಗಳಿವೆ, ಅವು ಹೆಚ್ಚಾಗಿ ನೈಸರ್ಗಿಕವಾಗಿರುತ್ತವೆ, ಇದು ಪರಿಸರಕ್ಕೆ ಹಾನಿ ಉಂಟು ಮಾಡುವುದಿಲ್ಲ.
  • ಪ್ಲಾಸ್ಟಿಕ್ ಬ್ಯಾಗ್‌ಗಳಿಗೆ ಹೋಲಿಸಿದರೆ, ಪೇಪರ್ ಬ್ಯಾಗ್‌ಗಳನ್ನು ತಯಾರಿಸಲು ಬಳಸುವ ವಸ್ತುಗಳು ಪರಿಸರ ಸ್ನೇಹಿಯಾಗಿರುತ್ತವೆ ಮತ್ತು ಪೇಪರ್ ಬ್ಯಾಗ್‌ಗಳನ್ನು ನವೀಕರಿಸಬಹುದಾದ ಸಂಪನ್ಮೂಲಗಳಿಂದ ತಯಾರಿಸಲಾಗುತ್ತದೆ. ಅಲ್ಲದೆ ಈ ಬ್ಯಾಗ್‌ಗಳು ಬೇಗನೆ ಕೊಳೆತು ಹೋಗುತ್ತದೆ.
  • ಪ್ಲಾಸ್ಟಿಕ್ ಚೀಲಗಳ ತಯಾರಿಕೆಗೆ ಹೋಲಿಸಿದರೆ, ಕಾಗದದ ಚೀಲಗಳನ್ನು ತಯಾರಿಸಲು ಕಡಿಮೆ ಶಕ್ತಿಯ ಬಳಕೆಯಾಗುತ್ತದೆ. ಪ್ಲಾಸ್ಟಿಕ್ ಚೀಲಗಳಂತೆ ಪೇಪರ್ ಬ್ಯಾಗ್‌ಗಳು ಪ್ರಾಣಿಗಳಿಗೆ ಹಾಗೂ ಪರಿಸರಕ್ಕೆ ಹಾನಿಕಾರಕವಲ್ಲ.
  • ಕಾಗದದ ಚೀಲಗಳು ಜೈವಿಕ ವಿಘಟನೀಯ ಮತ್ತು ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡುವುದಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾನಕೋಗಿಲೆ ಎಸ್​.ಜಾನಕಿ ನಿಧನ
ಗಾನಕೋಗಿಲೆ ಎಸ್​.ಜಾನಕಿ ನಿಧನ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ