World Philosophy Day 2024 : ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ತತ್ವಶಾಸ್ತ್ರ ಎಷ್ಟು ಅಗತ್ಯ? ಇಲ್ಲಿದೆ ಮಾಹಿತಿ

ನಮ್ಮ ಆಲೋಚನೆಗಳು, ಸಾಂಸ್ಕೃತಿಕ ಪುಷ್ಟೀಕರಣ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ತತ್ವಶಾಸ್ತ್ರದ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ನವೆಂಬರ್ ತಿಂಗಳ ಮೂರನೇ ಗುರುವಾರದಂದು ವಿಶ್ವ ತತ್ವಶಾಸ್ತ್ರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 21 ರಂದು ವಿಶ್ವ ತತ್ವಶಾಸ್ತ್ರ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನವು ಪ್ರಾರಂಭವಾದದ್ದು ಹೇಗೆ? ಏನಿದರ ವಿಶೇಷತೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Philosophy Day 2024 : ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ತತ್ವಶಾಸ್ತ್ರ ಎಷ್ಟು ಅಗತ್ಯ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 21, 2024 | 10:39 AM

ತರ್ಕ ಮತ್ತು ವಿವೇಚನೆಗಳ ಸಹಾಯದಿಂದ ಪ್ರಪಂಚ, ಜೀವನ, ಅಸ್ತಿತ್ವ, ದೈವತ್ವ, ನೈಜತೆ, ಮುಂತಾದ ಆಳವಾದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಮಾನವನ ಯತ್ನವನ್ನು ತತ್ತ್ವಶಾಸ್ತ್ರ ಎನ್ನಬಹುದು. ಗ್ರೀಕ್ ಭಾಷೆಯಲ್ಲಿ ‘ತತ್ವಶಾಸ್ತ್ರ’ ಎಂದರೆ ‘ವಿದ್ವತ್ತಿನ ಮೇಲಿನ ಪ್ರೀತಿ’ ಎನ್ನುವ ಅರ್ಥವನ್ನು ನೀಡುತ್ತದೆ. ಇಂದಿನ ಕಾಲದಲ್ಲಿ ತತ್ವಶಾಸ್ತ್ರವನ್ನು ಶಿಕ್ಷಣ ವ್ಯವಸ್ಥೆಯ ಪ್ರಾಥಮಿಕ ಹಂತದಲ್ಲಿಯೇ ಅಳವಡಿಸಿಕೊಳ್ಳುವ ಅಗತ್ಯವಿದೆ. ಮಕ್ಕಳಲ್ಲಿ ಅತಿಯಾದ ಒಂಟಿತನ, ಸುಳ್ಳು ನಿರೀಕ್ಷೆಗಳು, ಸೋಲನ್ನು ಸ್ವೀಕರಿಸದ ಮನಸ್ಥಿತಿಗಳು ಹೆತ್ತವರ ಒತ್ತಡದಿಂದ ಹಲವಾರು ಸಮಸ್ಯೆಗಳು ಕಂಡು ಬರುತ್ತಿದೆ. ಹೀಗಾಗಿ ಪ್ರಾಥಮಿಕ ಹಂತದಲ್ಲಿಯೇ ಈ ತತ್ವಶಾಸ್ತ್ರದ ಓದುವಿಕೆಯು ಸಂಯಮದಿಂದ ಬದುಕುವುದನ್ನು ಕಲಿಸಲು ಸಹಾಯಕವಾಗಿದೆ. ಅದಲ್ಲದೇ, ವಿಮರ್ಶಾತ್ಮಕ ಚಿಂತನೆ, ಸಂವಾದ ಮತ್ತು ಬೌದ್ಧಿಕ ಕುತೂಹಲವನ್ನು ಹೆಚ್ಚಿಸುವುದು ಹಾಗೂ ಪರಸ್ಪರ ತಿಳುವಳಿಕೆಯನ್ನು ಉತ್ತೇಜಿಸಲು ವಿಶ್ವ ತತ್ವಶಾಸ್ತ್ರ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ತತ್ವಶಾಸ್ತ್ರ ದಿನದ ಇತಿಹಾಸ

ವಿಶ್ವ ತತ್ವಶಾಸ್ತ್ರ ದಿನವನ್ನು ಪ್ರತಿ ವರ್ಷ ನವೆಂಬರ್ ತಿಂಗಳ ಮೂರನೇ ಗುರುವಾರದಂದು ಆಚರಿಸಲಾಗುತ್ತದೆ. ಯುನೆಸ್ಕೋ 2005 ರಲ್ಲಿ ಅಂತಾರಾಷ್ಟ್ರೀಯ ದಿನವೆಂದು ಘೋಷಿಸಿತು. ಆದರೆ ವಿಶ್ವ ತತ್ವಶಾಸ್ತ್ರ ದಿನವನ್ನು ಮೊದಲ ಬಾರಿಗೆ ನವೆಂಬರ್ 21, 2002 ರಂದು ಆಚರಿಸಲಾಯಿತು. ಈ ವರ್ಷ ನವೆಂಬರ್ 21 ರಂದು ವಿಶ್ವ ತತ್ವಶಾಸ್ತ್ರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮತ್ಸ್ಯೋದ್ಯಮದಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ? ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಗುರಿಯೇನು?

ವಿಶ್ವ ತತ್ವಶಾಸ್ತ್ರ ದಿನದ ಮಹತ್ವ ಹಾಗೂ ಆಚರಣೆ

ತತ್ವಶಾಸ್ತ್ರವು ಮಾನವ ಚಿಂತನೆ, ಸಮಾಜ ಮತ್ತು ಬುದ್ಧಿವಂತಿಕೆಯ ಅನ್ವೇಷಣೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಸ್ತಿತ್ವ ನೈತಿಕತೆ ಮತ್ತು ಜ್ಞಾನದ ಬಗ್ಗೆ ಮೂಲಭೂತ ಪ್ರಶ್ನೆಗಳನ್ನು ಪ್ರತಿಬಿಂಬಿಸಲು ವೇದಿಕೆಯನ್ನು ಒದಗಿಸುತ್ತದೆ. ವಿಶ್ವ ತತ್ವಶಾಸ್ತ್ರ ದಿನವು ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಸ್ವತಂತ್ರ ಚಿಂತನೆಯನ್ನು ಉತ್ತೇಜಿಸುವುದು. ಅಂತರ್ ಸಾಂಸ್ಕೃತಿಕ ಅಧ್ಯಯನಕ್ಕೆ ಉತ್ತೇಜನ ನೀಡುವುದು ಮತ್ತು ಮನಸ್ಸಿನಲ್ಲಿ ಮೂಡುವ ಆಲೋಚನೆಗಳಿಗೆ ತರ್ಕಬದ್ಧವಾಗಿ ಗೊಂದಲಗಳನ್ನು ನಿವಾರಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ಹಿನ್ನಲೆಯಲ್ಲಿ ತತ್ವಶಾಸ್ತ್ರ ದಿನದ ಪ್ರಯುಕ್ತ ಶೈಕ್ಷಣಿಕ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಸೇರಿದಂತೆ ಹಲವೆಡೆಗಳಲ್ಲಿ ಸೆಮಿನಾರ್, ವಿಚಾರ ಸಂಕಿರಣಗಳು ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್